Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸರಕಾರದ ಆದೇಶ ತುಳುನಾಡಿನ ಜನತೆಯ...

ಸರಕಾರದ ಆದೇಶ ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ: ಮುನೀರ್‌ ಕಾಟಿಪಳ್ಳ

ʼಟೋಲ್ ಸಂಗ್ರಹ ಸ್ಥಗಿತಗೊಳ್ಳುವವರೆಗೆ ಧರಣಿ ಮುಂದುವರಿಯಲಿದೆʼ

14 Nov 2022 10:31 PM IST
share
ಸರಕಾರದ ಆದೇಶ ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ: ಮುನೀರ್‌ ಕಾಟಿಪಳ್ಳ
ʼಟೋಲ್ ಸಂಗ್ರಹ ಸ್ಥಗಿತಗೊಳ್ಳುವವರೆಗೆ ಧರಣಿ ಮುಂದುವರಿಯಲಿದೆʼ

ಸುರತ್ಕಲ್:‌  ಆರು ವರ್ಷಗಳ ಸತತ ಹೋರಾಟದ ನಂತರ ಸುರತ್ಕಲ್ ಟೋಲ್ ಗೇಟ್ ಮುಚ್ಚಲು ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ. ಇದು ದ‌ಕ್ಷಿಣ ಕ‌ನ್ನಡ, ಉಡುಪಿ ಜಿಲ್ಲೆಯ ಸಮಸ್ಥ ಜನತೆಯ ಒಗ್ಗಟ್ಟಿನ ಹೋರಾಟದ ಫಲ. ಜನತೆಯ ಅಖಂಡ ಬೆಂಬಲದೊಂದಿಗೆ ಹೋರಾಟ ಸಮಿತಿ ಕಳೆದ ಮೂರು ತಿಂಗಳಿಂದ ನಿರ್ಣಾಯಕ ಹೋರಾಟಗಳನ್ನು ಸಂಘಟಿಸಿತ್ತು. ಅಂತಹ ದಣಿವರಿಯದ ಪ್ರಯತ್ನಗಳು ಇಂದು ಗೆಲುವಿನ ಸನಿಹಕ್ಕೆ ತಲುಪಿಸಿದೆ ಎಂದು ಹೋರಾಟ ಸಮಿತಿಯ ಸಂಚಾಲಕ ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಹಗಲು ರಾತ್ರಿ ಧರಣಿ ನಿರತವಾಗಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಗೆ ಟೋಲ್ ಗೇಟ್ ತೆರವು ಕುರಿತು ಈವರೆಗೂ ಜಿಲ್ಲಾಡಳಿತದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಅಧಿಕೃತ ಮಾಹಿತಿ, ಟೋಲ್ ಗೇಟ್ ನಲ್ಲಿ ಸಂಗ್ರಹ ನಿಲ್ಲುವವರೆಗೂ ಧರಣಿ ಮುಂದುವರಿಯಲಿದೆ. ಟೋಲ್ ಸಂಗ್ರಹ ಸ್ಥಗಿತಗೊಂಡ ತರುವಾಯವಷ್ಟೆ ಧರಣಿ ಸ್ಥಗಿತಗೊಳ್ಳಲಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಸಂಸದ ನಳಿನ್ ಕುಮಾರ್ ಕಟೀಲ್ ಪ್ರಧಾನಿ ಹಾಗೂ ಸಾರಿಗೆ ಸಚಿವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಬೆಂಬಲಿಗರು ಸಂಸದರಿಗೆ ಧನ್ಯವಾದ ಸಲ್ಲಿಸುತ್ತಿದ್ದಾರೆ. ನಿಜಕ್ಕೂ ಧನ್ಯವಾದ ಸಲ್ಲಬೇಕಾಗಿರುವುದು ಹೋರಾಟದ ಬೆನ್ನೆಲುಬಾಗಿ ನಿಂತ ತುಳುನಾಡಿನ ಸಮಸ್ತ ಜನತೆ ಹಾಗೂ ಸಹಭಾಗಿ ಸಮಾನ ಮನಸ್ಕ ಸಂಘಟನೆಗಳಿಗೆ. ಅದೇ ಸಂದರ್ಭ ಸುರತ್ಕಲ್  ಟೋಲ್ ಗೇಟ್ ನಲ್ಲಿ ಆರು ವರ್ಷಗಳಿಂದ ಸತತವಾಗಿ ಸರಿಸುಮಾರು ಮುನ್ನೂರು ಕೋಟಿ ರೂಪಾಯಿ ನಿಯಮಕ್ಕೆ ವಿರುದ್ಧ ಸಂಗ್ರಹಿಸಲಾಗಿದೆ. ಸಂಸದರು, ಶಾಸಕರುಗಳು ಟೋಲ್ ತೆರವಿನ ದೀರ್ಘ ವಿಳಂಬಕ್ಕಾಗಿ ತುಳುನಾಡಿನ ಜನತೆಯ ಮುಂದೆ ಈ ಸಂದರ್ಭ ಕನಿಷ್ಠ ವಿಷಾಧವನ್ನಾದರು ವ್ಯಕ್ತಪಡಿಸಿ ಕ್ಷೆಮೆ ಕೇಳಬೇಕೆಂದು ಎಂದು ಹೋರಾಟ ಸಮಿತಿ ಆಗ್ರಹಿಸುತ್ತದೆ ಎಂದರು.

share
Next Story
X