Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜನರಲ್ಲಿ ಹೊಸ ಚಿಂತನೆಗಳ ಮೂಲಕ ಪಡುಬಿದ್ರಿ...

ಜನರಲ್ಲಿ ಹೊಸ ಚಿಂತನೆಗಳ ಮೂಲಕ ಪಡುಬಿದ್ರಿ ಸೊಸೈಟಿ ಮಾದರಿ: ಡಾ.ರಾಜೇಂದ್ರ ಕುಮಾರ್

ಪಡುಬಿದ್ರೆ ಸಹಕಾರಿ ವ್ಯವಸಾಯಿಕ ಸೊಸೈಟಿಯಲ್ಲಿ ಸಹಕಾರ ಸಪ್ತಾಹಕ್ಕೆ ಚಾಲನೆ

14 Nov 2022 10:48 PM IST
share
ಜನರಲ್ಲಿ ಹೊಸ ಚಿಂತನೆಗಳ ಮೂಲಕ ಪಡುಬಿದ್ರಿ ಸೊಸೈಟಿ ಮಾದರಿ: ಡಾ.ರಾಜೇಂದ್ರ ಕುಮಾರ್
ಪಡುಬಿದ್ರೆ ಸಹಕಾರಿ ವ್ಯವಸಾಯಿಕ ಸೊಸೈಟಿಯಲ್ಲಿ ಸಹಕಾರ ಸಪ್ತಾಹಕ್ಕೆ ಚಾಲನೆ

ಪಡುಬಿದ್ರೆ: ಜನರಲ್ಲಿ ಉತ್ಸಾಹ ತುಂಬಲು ದೃಷ್ಟಿಕೋನದಿಂದ ಹೊಸ ಹೊಸ ಚಿಂತನೆಗಳ ಮೂಲಕ ಇತರ ಸೊಸೈಟಿಗಿಂತ ಪಡುಬಿದ್ರಿ ಸೊಸೈಟಿಯು ಮಾದರಿಯಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಅಧ್ಯಕ್ಷ ಡಾ. ಎಮ್. ಎನ್. ರಾಜೇಂದ್ರ ಕುಮಾರ್ ಶ್ಲಾಘಿಸಿದರು.

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಆಶ್ರಯದಲ್ಲಿ ಸಹಕಾರ ಸಂಗಮ ವೈ.ಲಕ್ಷ್ಮಣ್ ಸಭಾಂಗಣದಲ್ಲಿ ಸೋಮವಾರ ನಡೆದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.

ಸದಾ ಸಕಾರಾತ್ಮಕ ಬದಲಾವಣೆಯೊಂದಿಗೆ ಶಿಸ್ತುಬದ್ಧವಾಗಿ ಜನಪರವಾಗಿ ಕಾರ್ಯನಿರ್ವಹಿಸುವ ಪಡುಬಿದ್ರಿ ಸೊಸೈಟಿಯು ಆದಷ್ಟು ಶೀಘ್ರ 150 ಕೋಟಿ ಠೇವಣಾತಿ ಸಂಗ್ರಹಿಸುವ ಮೂಲಕ ಮತ್ತೊಂದು ಪ್ರಶಸ್ತಿಗೆ ಭಾಜನವಾಗಲಿ ಎಂದು ಶುಭಹಾರೈಸಿದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ರೈತರಿಗೆ ಪ್ರಾಶಸ್ತ್ಯ ನೀಡಿ, ಸಹಕಾರ ಸಪ್ತಾಹವನ್ನು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಸೊಸೈಟಿ ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಹಕಾರ ಪರಿಷತ್‍ಗೆ ಪ್ರಾತನಿದ್ಯ ನೀಡಬೇಕು ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಒತ್ತಾಯಿಸಿದರು.

ಸಪ್ತಾಹ ಅಂಗವಾಗಿ ರೈತರ ಸಮಾವೇಶ ಹಾಗೂ ರೈತರಿಂದ ಡಾ.ಎಮ್. ಎನ್. ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಐ. ದೇವಿಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಿರೀಶ್ ಪಲಿಮಾರ್, ಎ. ರಾಮಚಂದ್ರ ಆಚಾರ್ಯ ಅವರನ್ನು ಅಭಿನಂದಿಸಲಾಯಿತು.

ಸಹಾಯ ಧನ ವಿತರಣೆ: ಸೊಸೈಟಿ ವ್ಯಾಪ್ತಿಯ ರೈತರಿಗೆ ಕೃಷಿ ಸಹಾಯಧನ, ಪಡುಬಿದ್ರಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢ ವಿಭಾಗ, ಪಲಿಮಾರು ಶಾಲೆಗೆ, ವೈಟ್‍ಲಿಪ್ಟರ್ ಯಶಸ್ವಿನಿ ವಿ ಭಂಡಾರಿಗೆ ಸಹಾಯಧನ, ಅವರಾಲು ಅಂಗನವಾಡಿಗೆ 25 ಕುರ್ಚಿಕ್ಕೆ ವಿತರಣೆ ಹಾಗೂ ಶೀತಲೀಕರಣ ಶವ ಪೆಟ್ಟಿಗೆ ಸಾರ್ವಜನಿಕ ಉಪಯೋಗಕ್ಕೆ ಹಸ್ತಾಂತರಿಸಲಾಯಿತು. ಉಡುಪಿ ಜಿಲ್ಲಾ ಕೃಷಿಕ ಸಂಘ ಅಧ್ಯಕ್ಷ  ರಾಮಕೃಷ್ಣ ಬಂಟಕಲ್ ದಿಕ್ಸೂಚಿ ಭಾಷಣ ಮಾಡಿದರು.

ಅಧ್ಯಕ್ಷತೆ ವಹಿಸಿದ್ದ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ವೈ ಸುಧೀರ್ ಕುಮಾರ್, 69" ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ರಾಷ್ಟ್ರದಾದ್ಯಂತ ನವೆಂಬರ್ 14 ರಿಂದ 20 ರವರೆಗೆ ಸಪ್ತಾಹದ 7 ದಿನಗಳಲ್ಲೂ ವಿವಿಧ ಕಾರ್ಯಕ್ರಮಗಳನ್ನು ಅಯೋಜಿಸಲಾಗಿದೆ. ಇದು  ಜಿಲ್ಲೆಯಲ್ಲಿಯೇ ಪ್ರಪ್ರಥಮ ಬಾರಿಗೆ ನಡೆಯುತಿದ್ದು, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯು ಮೂಲಕ ಸಹಕಾರ ಸಪ್ತಾಹವನ್ನು ವಿಶಿಷ್ಟ ರೀತಿಯಲ್ಲಿ ನಡೆಯಲಿದೆ.

ಎಸ್‍ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಲಕ್ಷ್ಮೀ ನಾರಾಯಣ ಜಿ. ಎನ್. ಕುಂದಾಪುರ ಉಪವಿಭಾಗ ಸಹಾಯಕ ಉಪನಿಬಂಧಕಿ ಲಾವಣ್ಯ ಕೆ. ಆರ್., ಉಪಸ್ಥಿತರಿದ್ದರು. ಸುಧೀರ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ರಾಜೇಶ್  ನಿರೂಪಿಸಿದರು. ಸೊಸೈಟಿ ಉಪಾಧ್ಯಕ್ಷ ಗುರುರಾಜ ಪೂಜಾರಿ ವಂದಿಸಿದರು. 

share
Next Story
X