Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್ಸೆಸ್ಸೆಫ್ ವತಿಯಿಂದ ಉಸ್ವತುನ್ನಬೀ...

ಎಸ್ಸೆಸ್ಸೆಫ್ ವತಿಯಿಂದ ಉಸ್ವತುನ್ನಬೀ ಅಕಾಡೆಮಿಕ್ ಸೆಮಿನಾರ್

14 Nov 2022 11:24 PM IST
share
ಎಸ್ಸೆಸ್ಸೆಫ್ ವತಿಯಿಂದ ಉಸ್ವತುನ್ನಬೀ ಅಕಾಡೆಮಿಕ್ ಸೆಮಿನಾರ್

ಮಂಜನಾಡಿ: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ಹಮ್ಮಿಕೊಂಡ ಉಸ್ವತುನ್ನಬಿ ಅಕಾಡೆಮಿಕ್ ಸೆಮಿನಾರ್ ಅಲ್ ಮದೀನಾದ ದಅವಾ ಕಾಲೇಜು ಲೈಬ್ರರಿ ಹಾಲ್ ನಲ್ಲಿ ನಡೆಯಿತು.

"ಅಂತ್ಯಪ್ರವಾದಿ: ಬದುಕು ಮತ್ತು ಬಳುವಳಿಗಳು" ಎಂಬ ವಿಷಯದ ಕುರಿತು ರಾಷ್ಟ್ರದ ವಿವಿಧೆಡೆಯಿಂದ ಬಂದ ಹತ್ತು ಆಯ್ದ ಸಂಶೋಧಕರು ಪ್ರಬಂಧ ಮಂಡಿಸಿದರು.

ಪ್ರವಾದಿಯವರ ಆದರ್ಶಗಳು, ನಾಯಕತ್ವ ಗುಣಗಳು, ರಾಜತಾಂತ್ರಿಕ ನಡವಳಿಕೆಗಳು ಮುಂತಾದ ವಿಷಯಗಳತ್ತ ಬೆಳಕು ಹರಿಸುವ ಪ್ರಬಂಧಗಳನ್ನು ಮಂಡಿಸಿ ಚರ್ಚೆಗಳನ್ನು ಕೈಗೊಳ್ಳಲಾಯಿತು. ಪ್ರಬಂಧ ಮಂಡಿಸಲು ಆಯ್ಕೆಯಾದ ಸಂಶೋಧಕರನ್ನು ಶಾಸಕರಾದ ಯು ಟಿ ಖಾದರ್ ರವರು ಅನುಮೋದಿಸಿದರು.

ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷರಾದ ಅಬ್ದುಲ್ ಲತೀಫ್ ಸಅದಿ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮವನ್ನು ಅಲ್ ಮದೀನಾ ಮ್ಯಾನೇಜಿಂಗ್ ಡೈರೆಕ್ಟರ್ ಅಬ್ದುಲ್ ಖಾದರ್ ಸಖಾಫಿ ಉದ್ಘಾಟಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಮತ್ತು ರಾಜ್ಯ ದಅವಾ ಕಾರ್ಯದರ್ಶಿ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇಂದಿರಾ ಗಾಂಧಿ ನ್ಯಾಷನಲ್ ಟ್ರೈಬಲ್ ವಿವಿ ಫೆಲೋ ರಾಶಿದ್ ನೂರಾನಿಯವರು ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಅಲ್ ಮದೀನಾ ಎಕ್ಸಿಕ್ಯೂಟಿವ್ ಡೈರೆಕ್ಟರ್ ಮುಹಮ್ಮದ್ ಕುಂಞಿ ಅಮ್ಜದಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಎಸ್ಸೆಸ್ಸೆಫ್ ದಅವಾ ಕನ್ವೀನರ್ ಖುಬೈಬ್ ತಂಞಳ್, ಅಲ್ ಮದೀನಾ ಪ್ರಾಧ್ಯಾಪಕರುಗಳಾದ ಅಬೂಸ್ವಾಲಿಹ್ ಅಝ್ಹರಿ, ಅಬ್ದುರಹ್ಮಾನ್ ಮರ್ಝುಖಿ ವಳಾಲು, ಅನ್ಸಾರ್ ಮಾಸ್ಟರ್ ಫಜೀರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರಾಜ್ಯ ದಅವಾ ಸಿಂಡಿಕೇಟ್ ಸದಸ್ಯ ನಝೀರ್ ಅಬ್ಬಾಸ್ ಸುರೈಜಿ ಸ್ವಾಗತಿಸಿ ಹಸನ್ ಮುಈನ್ ನೂರಾನಿ ವಂದಿಸಿದರು.

share
Next Story
X