Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮೀಸಲಾತಿಯು ಬಡತನ ನಿರ್ಮೂಲನೆಯ ಒಂದು...

ಮೀಸಲಾತಿಯು ಬಡತನ ನಿರ್ಮೂಲನೆಯ ಒಂದು ಯೋಜನೆಯೇ?

-ಸಂಜಯ್ ಕೆ.ಪಿ.-ಸಂಜಯ್ ಕೆ.ಪಿ.14 Nov 2022 11:55 PM IST
share

ಮಾನ್ಯರೇ,

ಇತ್ತೀಚೆಗೆ ಸರ್ವೋಚ್ಚ ನ್ಯಾಯಾಲಯದ ಸಾಂವಿಧಾನಿಕ ಪೀಠವು ಆರ್ಥಿಕವಾಗಿ ದುರ್ಬಲ ವರ್ಗದ ಮೀಸಲಾತಿಯನ್ನು ಎತ್ತಿಹಿಡಿದಿದೆ. ಅಡಿಎಂಕೆ ಹೊರತುಪಡಿಸಿ ಎಲ್ಲಾ ರಾಜಕೀಯ ಪಕ್ಷಗಳು ಈ ನಿರ್ಧಾರವನ್ನು ಒಪ್ಪುತ್ತವೆ. ಭಾರತದ ಸಂವಿಧಾನದ ಪ್ರಕಾರ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಒದಗಿಸಲಾಗಿದೆ, ಆದರೆ ಮೀಸಲಾತಿಯಲ್ಲಿ ಆರ್ಥಿಕವಾಗಿ ದುರ್ಬಲ ವರ್ಗವನ್ನು ಸೇರಿಸಿರುವುದು ಹಲವು ಸಮಸ್ಯೆಗಳಿಗೆ ಕಾರಣವಾಗಬಹುದು.
ಮೀಸಲಾತಿಯು ಬಡತನ ನಿರ್ಮೂಲನೆಗೆ ಒಂದು ಯೋಜನೆಯೇ? ಅಥವಾ ಐತಿಹಾಸಿಕ ಅನ್ಯಾಯದ ಕಾರಣದಿಂದ ತಮ್ಮ ಹಕ್ಕುಗಳಿಂದ ವಂಚಿತರಾದವರಿಗೆ ಅವಕಾಶಗಳನ್ನು ಒದಗಿಸುವುದೇ? ಮತ್ತು ಈಗಿರುವ ಬಡತನ ನಿರ್ಮೂಲನೆ ಯೋಜನೆಗಳು ಯಾಕೆ ಸಂಪೂರ್ಣ ವಿಫಲವಾಗಿವೆ? ಈ ಪ್ರಶ್ನೆಗಳಿಗೆ ಉತ್ತರ ಹುಡುಕುವವರು ಯಾರು?

ಇನ್ನು ಶೇ. 10ರಷ್ಟು ಮೀಸಲಾತಿ ವಿಚಾರಕ್ಕೆ ಬಂದರೆ ಕರ್ನಾಟಕ ರಾಜ್ಯದಲ್ಲಿ ಒಟ್ಟಾರೆಯಾಗಿ ಸಾಮಾನ್ಯ ವರ್ಗಕ್ಕೆ ಬರುವಂತಹ ಸಮುದಾಯದ ಒಟ್ಟು ಸಂಖ್ಯೆ ಕೇವಲ ಶೇಕಡ ನಾಲ್ಕರಷ್ಟು. ಅದರಲ್ಲಿ ಇರುವ ಬಡವರಿಗೆ ಶೇ. 10ರಷ್ಟು ಮೀಸಲಾತಿ ಬೇಕು ಎನ್ನುವುದಾದರೆ ಶೇ. 17ರಷ್ಟು ಇರುವ ದಲಿತರಿಗೆ ಈಗಿರುವ ಮೀಸಲಾತಿ ಸಾಕಾಗುವುದೇ? ಆರ್ಥಿಕತೆಯ ಆಧಾರದ ಮೇಲೆ ಮೀಸಲಾತಿ ಕೊಡುವುದಾದರೆ ಸಿರಿವಂತ ವ್ಯಕ್ತಿಯೊಬ್ಬ ಜೂಜಾಡಿ ತನ್ನಲ್ಲಿರುವ ಎಲ್ಲ ಸಂಪತ್ತನ್ನು ಕಳೆದುಕೊಂಡು 8 ಲಕ್ಷ ರೂ. ಆದಾಯ ಮಿತಿ ಒಳಗೆ ಬಂದರೆ ಅವನು ಬಡವನೆಂದು ಮೀಸಲಾತಿ ಕೊಡಬೇಕೇ? ‘‘ಇನ್ನೂ ಎಷ್ಟು ವರ್ಷ ಮೀಸಲಾತಿ ಬೇಕು? ಸಂವಿಧಾನದಲ್ಲಿಯೇ ಮೀಸಲಾತಿಯನ್ನು ಕೇವಲ 10 ವರ್ಷಕ್ಕಾಗಿ ಸೀಮಿತಗೊಳಿಸಲಾಗಿತ್ತು’’ ಎನ್ನುವ ವಾದಕ್ಕೆ ಹೇಳುವುದಾದರೆ ಆರ್ಟಿಕಲ್ 332ರ ಪ್ರಕಾರ ಹತ್ತು ವರ್ಷಗಳ ಮಿತಿ ಕೇವಲ ರಾಜಕೀಯಕ್ಕೆ ಮಾತ್ರ, ಆದರೆ ಆನಂತರ ಸರಕಾರಗಳು ಕಾಲಕಾಲಕ್ಕೆ ಮುಂದುವರಿಸಿವೆ. ಏಕೆಂದರೆ ರಾಜಕೀಯ ಮೀಸಲಾತಿ ಅನಿವಾರ್ಯವಾಗಿದೆ. ಉದಾಹರಣೆಗೆ ಮಲ್ಲಿಕಾರ್ಜುನ ಖರ್ಗೆಯಂತಹ ನಾಯಕರೇ ಮೀಸಲಾತಿ ಬದಲಾದಾಗ ಕ್ಷೇತ್ರ ಬದಲಾವಣೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಇನ್ನೊಂದು ಉದಾಹರಣೆ ಕೊಡುವುದಾದರೆ ವಿಧಾನಪರಿಷತ್‌ನಲ್ಲಿ ದಲಿತರ ಸಂಖ್ಯೆ ತೀರಾ ಕಡಿಮೆ. ಏಕೆಂದರೆ ಅಲ್ಲಿ ರಾಜಕೀಯ ಮೀಸಲಾತಿ ಇಲ್ಲ. ದಲಿತರ ಮೀಸಲಾತಿಯಲ್ಲಿ ಕೆನೆಪದರ ಜಾರಿಯಾಗಬೇಕು ಎಂದು ತುಂಬಾ ಜನ ಒತ್ತಾಯಿಸುತ್ತಾರೆ. ಆದರೆ, ಒಬ್ಬ ದಲಿತನ ಆರ್ಥಿಕ ಪರಿಸ್ಥಿತಿ ಬದಲಾದ ತಕ್ಷಣ ಅವನ ಸಾಮಾಜಿಕ ಪರಿಸ್ಥಿತಿ ಬದಲಾಗುವುದಿಲ್ಲ. ಕೆಲವರು ಮೀಸಲಾತಿಯನ್ನು ಕೊಟ್ಟೇ ದಲಿತರನ್ನು ಸದೃಢರನ್ನಾಗಿ ಮಾಡುವ ಅವಶ್ಯಕತೆ ಇಲ್ಲ, ಏಕೆಂದರೆ ಅವರಿಗೆ ಆರ್ಥಿಕವಾಗಿ ಸಹಾಯ ಮಾಡಿದರೆ ಅವರು ಉದ್ಯಮಗಳನ್ನು ಶುರುಮಾಡಿ ಸದೃಢರಾಗಬಹುದು ಎನ್ನುತ್ತಾರೆ. ಆದರೆ ದಲಿತರ ತಟ್ಟೆ ಇಡ್ಲಿಯನ್ನು, ದಲಿತರ ಮಿಲ್ಟ್ರಿ ಹೊಟೇಲ್‌ಗಳಲ್ಲಿ ತಿಂದು ಈ ದೇಶದ ಜನ ಈಗಿನ ಸಂದರ್ಭದಲ್ಲಿ ಬದುಕುವರೇ? ಬಹುಶಃ ದಲಿತರಿಗೆ ಉಳಿಯಬಹುದಾದಂತಹ ಉದ್ಯಮಗಳು ಕೇವಲ ಚಪ್ಪಲಿ ಅಂಗಡಿಗಳನ್ನು ಶುರುಮಾಡುವುದು, ಶೌಚಾಲಯಗಳನ್ನು ಗುತ್ತಿಗೆ ತೆಗೆದುಕೊಳ್ಳುವುದು ಮತ್ತು ತಮಟೆ ಕಟ್ಟುವುದು. ಇಂತಹವುಗಳಲ್ಲಿ ಮಾತ್ರ ಜೀವನ ಕಲ್ಪಿಸಿಕೊಳ್ಳುವ ಅವಕಾಶ ಸಿಗಬಹುದು. ಒಟ್ಟಾರೆಯಾಗಿ ಹೇಳುವುದಾದರೆ ಆರ್ಥಿಕತೆಯ ಆಧಾರದ ಮೇಲೆ ಮೀಸಲಾತಿಯನ್ನು ಕಲ್ಪಿಸಲು ಚಿಂತಿಸುವುದು ಇಷ್ಟುದಿನ ನಡೆಯುತ್ತಿದ್ದ ಸಾಮಾಜಿಕ ಕ್ರಾಂತಿಗೆ ದೊಡ್ಡ ಕೊಡಲಿ ಪೆಟ್ಟಾಗಬಹುದು.
 

share
-ಸಂಜಯ್ ಕೆ.ಪಿ.
-ಸಂಜಯ್ ಕೆ.ಪಿ.
Next Story
X