ತುಮಕೂರು: ಮಾಜಿ ಶಾಸಕ ಹೆಚ್.ನಿಂಗಪ್ಪ ಜೆಡಿಎಸ್ ಗೆ ರಾಜೀರಾಮೆ
ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ?
ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ?
ತುಮಕೂರು: ಜೆಡಿಎಸ್ ಮುಖಂಡ ಹಾಗೂ ಮಾಜಿ ಶಾಸಕ ಹೆಚ್.ನಿಂಗಪ್ಪ ಜೆಡಿಎಸ್ ಪಕ್ಷಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸತತ ಮೂರು ಸೋಲಿನ ನಂತರ 2004ರಲ್ಲಿ ಕುಣಿಗಲ್ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದರು. ಅವರ ನಲವತ್ತು ತಿಂಗಳ ಅವಧಿಯಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದರು. ಆದರೆ 2013ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಡಿ.ಸಿ.ಗೌರಿಶಂಕರ್ ಗೆ ಟಿಕೇಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು.
2018ರ ಚುನಾವಣೆ ವೇಳೆಗೆ ಜೆಡಿಎಸ್ ಪಕ್ಷಕ್ಕೆ ವಾಪಸ್ಸಾಗಿದ್ದರು. ಆದರೆ ಪಕ್ಷದ ಮುಖಂಡರ ನಡವಳಿಕೆಯಿಂದ ಬೆಸತ್ತು ಇಂದು ರಾಜೀನಾಮೆ ಸಲ್ಲಿಸಿದ್ದು, ಶೀಘ್ರದಲ್ಲೇ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎನ್ನಲಾಗಿದೆ.
Next Story