ಐಪಿಎಲ್ ನಿಂದ ಪೊಲಾರ್ಡ್ ನಿವೃತ್ತಿ; ಮುಂಬೈ ಬ್ಯಾಟಿಂಗ್ ಕೋಚ್ ಆಗಿ ನೇಮಕ

ಹೊಸದಿಲ್ಲಿ: ಮುಂಬೈ ಇಂಡಿಯನ್ಸ್ ನ ಪ್ರಮುಖ ಆಟಗಾರ ಕೀರನ್ ಪೊಲಾರ್ಡ್ Kieron Pollard ಆಟಗಾರನಾಗಿ ತಮ್ಮ ಐಪಿಎಲ್ ವೃತ್ತಿಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದ್ದಾರೆ. ಮುಂಬೈ ಫ್ರಾಂಚೈಸಿಯ ಬ್ಯಾಟಿಂಗ್ ಕೋಚ್ ಆಗಿ ನೇಮಕವಾಗುವ ಮೂಲಕ ಮುಂಬೈನೊಂದಿಗಿನ ನಂಟು ಮುಂದುವರಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಲ್ಲಿ ಆಡಿದ ಶ್ರೇಷ್ಠ ವಿದೇಶಿ ಆಟಗಾರರಲ್ಲಿ ಒಬ್ಬರಾದ ಪೊಲಾರ್ಡ್ ಅವರು ಟಿ 20 ಲೀಗ್‌ನಲ್ಲಿ ತಮ್ಮ ವೃತ್ತಿಜೀವನವನ್ನು ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ.
ಪೊಲಾರ್ಡ್ ಮುಂಬೈ ಇಂಡಿಯನ್ಸ್‌ನ ಆಧಾರಸ್ತಂಭಗಳಲ್ಲಿ ಒಬ್ಬರಾಗಿದ್ದಾರೆ. ಅವರು 13 ಆವೃತ್ತಿಗಳಲ್ಲಿ ಮುಂಬೈ ಪರವಾಗಿ ಆಡಿದ ನಂತರ ನಿವೃತ್ತಿಗೆ ನಿರ್ಧರಿಸಿದ್ದಾರೆ. ಆದರೆ ಬ್ಯಾಟಿಂಗ್ ತರಬೇತುದಾರರಾಗಿ ಹೊಸ ಪಾತ್ರದಲ್ಲಿ ಮುಂಬೈ ಇಂಡಿಯನ್ಸ್ ಕುಟುಂಬದೊಂದಿಗೆ ಮುಂದುವರಿಯುತ್ತಾರೆ.
ವಿಂಡೀಸ್ ಆಲ್‌ರೌಂಡರ್ ಪೊಲಾರ್ಡ್ 2010 ರಲ್ಲಿ ಮುಂಬೈ ಇಂಡಿಯನ್ಸ್‌ನೊಂದಿಗೆ ಸಹಿ ಹಾಕಿದ್ದರು ಮುಂಬೈ ಇಂಡಿಯನ್ಸ್‌ನೊಂದಿಗೆ ಐದು ಐಪಿಎಲ್ ಟ್ರೋಫಿಗಳನ್ನು (2013, 2015, 2017, 2019 ಮತ್ತು 2020) ಗೆದ್ದರು . ಎರಡು ಚಾಂಪಿಯನ್ಸ್ ಲೀಗ್ ಟ್ರೋಫಿಗಳನ್ನು ಎತ್ತಿ ಹಿಡಿದು ಈ ಪೀಳಿಗೆಯ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.
ಆರು ಪಂದ್ಯಗಳಲ್ಲಿ ಮುಂಬೈ ತಂಡದ ನಾಯಕರಾಗಿಯೂ ಕಾಣಿಸಿಕೊಂಡರು. ಅಲ್ಲಿ ಮುಂಬೈ ನಾಲ್ಕು ಪಂದ್ಯಗಳನ್ನು ಗೆದ್ದಿತ್ತು.