Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಲೆಚುಕ್ಕೆ ರೋಗ ನಿವಾರಣೆಗೆ ಕ್ರಮ: ಸಿಎಂ...

ಎಲೆಚುಕ್ಕೆ ರೋಗ ನಿವಾರಣೆಗೆ ಕ್ರಮ: ಸಿಎಂ ಬೊಮ್ಮಾಯಿ

15 Nov 2022 3:15 PM IST
share
ಎಲೆಚುಕ್ಕೆ ರೋಗ ನಿವಾರಣೆಗೆ ಕ್ರಮ: ಸಿಎಂ ಬೊಮ್ಮಾಯಿ

ಚಿಕ್ಕಮಗಳೂರು: ರಾಜ್ಯದ ವಾಣಿಜ್ಯ ಬೆಳೆಯಾದ ಅಡಿಕೆ ಎಲೆಚುಕ್ಕೆ ರೋಗದ  ನಿವಾರಣೆ  ಹಾಗೂ ಹರಡದಂತೆ ಕ್ರಮ ವಹಿಸಲು ಸರಕಾರ ಸಂಪೂರ್ಣ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಮಂಗಳವಾರ ಚಿಕ್ಕಮಗಳೂರಿನಲ್ಲಿ ಕಡೂರಿನ ಪೊಲೀಸ್ ತರಬೇತಿ ಕೇಂದ್ರ ಹೆಲಿಪ್ಯಾಡ್ ಗೆ ಬಂದಿಳಿದು ಮಾಧ್ಯಮದವರೊಂದಿಗೆ ಮಾತನಾಡಿದರು.

ಮಲೆನಾಡು ಭಾಗದಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡಿದ್ದು, ಈಗಾಗಲೇ ವಿಶ್ವವಿದ್ಯಾಲಯಗಳು, ಸಂಬಂಧಪಟ್ಟ ಇಲಾಖೆ, ಕೇಂದ್ರ ಸರ್ಕಾರದ ಸಂಸ್ಥೆಗಳು ಎಲೆಚುಕ್ಕೆ ರೋಗ ಪರಿಹರಿಸಲು ಕಾರ್ಯೋನ್ಮುಖವಾಗಿವೆ. ಸರ್ಕಾರ  ಮುಂಜಾಗ್ರತಾ ಕ್ರಮವಾಗಿ ಔಷಧಿ ಸಿಂಪಡನೆಗೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಎಲೆಚುಕ್ಕೆ ರೋಗದ ಮೂಲಕಾರಣ ಹಾಗೂ ಔಷಧಿಯ ಬಗ್ಗೆ ವಿಜ್ಞಾನಿಗಳು ಅಧ್ಯಯಿಸಿ ,ಚಿಕಿತ್ಸಾ ಮಾರ್ಗ ಕಂಡುಹಿಡಿದರೆ, ಅದರಂತೆ ಸರ್ಕಾರ ಕ್ರಮಕೈಗೊಳ್ಳುವುದು. ಈ ರೋಗ ದೊಡ್ಡ ಪ್ರಮಾಣದಲ್ಲಿ ಹರುಡುತ್ತಿರುವುದರಿಂದ ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು.

ಸರ್ಕಾರ ಒಂದೂವರೆ ತಿಂಗಳೊಳಗೆ ಬೆಳೆ ಪರಿಹಾರ ನೀಡಿದೆ: ಬರುವ ದಿನಗಳಲ್ಲಿ ಮಲೆನಾಡು ಹಾಗೂ ಬಯಲುಸೀಗಳಲ್ಲಿ ಈರುಳ್ಳಿ ಸೇರಿದಂತೆ ಹಲವು ಬೆಳೆಗಳ ನಾಶಕ್ಕೆ ಪರಿಹಾರ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರವಾಹ ಹಾಗೂ ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಸರ್ಕಾರ ಈಗಾಗಲೇ ದುಪ್ಪಟ್ಟು ಪರಿಹಾರ ನೀಡುತ್ತಿದೆ. ಈಗಾಗಲೇ 99 ಕೋಟಿ ರೂ.ಗಳಷ್ಟು ಬೆಳೆಪರಿಹಾರವನ್ನು ವಿತರಿಸಲಾಗಿದೆ. ಜಿಲ್ಲಾಡಳಿತ ಬೆಳೆನಾಶಕ್ಕೆ ಜಂಟಿ ಸರ್ವೇ ಮಾಡಿ ವರದಿ ನೀಡಿದರೆ, ಅದಕ್ಕೂ ಸರ್ಕಾರ ಬೆಳೆಪರಿಹಾರ ನೀಡಲಿದೆ. ಈ ಹಿಂದೆ ಬೆಳೆನಾಶವಾಗಿ ಒಂದು ವರ್ಷವಾದ ನಂತರ ಪರಿಹಾರ ದೊರೆಯುತ್ತಿತ್ತು. ಆದರೆ ಈಗ ಸ್ಪಂದನಾಶೀಲ ಸರ್ಕಾರವಿರುವುದರಿಂದ ರೈತರ ರಕ್ಷಣೆ ಧಾವಿಸಲಾಗಿದ್ದು, ಒಂದೂವರೆ ತಿಂಗಳೊಳಗೆ ಬೆಳೆ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.

share
Next Story
X