ಸುಳ್ಯ: ಕಲ್ಲುಗುಂಡಿ ಸಮೀಪ ಕೆಎಸ್ಸಾರ್ಟಿಸಿ ಬಸ್-ಲಾರಿ ಅಪಘಾತ: ಹಲವು ಮಂದಿಗೆ ಗಾಯ

ಸುಳ್ಯ: ಕಲ್ಲುಗುಂಡಿ ಸಮೀಪ ಕಡೆಪಾಲದಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗು ಕಂಟೈನರ್ ಲಾರಿ ಮಧ್ಯೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ಸಂಭವಿಸಿದೆ.
ಸ್ಥಳೀಯರು ಕಾರ್ಯಾಚರಣೆ ನಡೆಸಿ ಗಾಯಗೊಂಡಿರುವ ಹಲವು ಮಂದಿಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮೈಸೂರು ಕಡೆಯಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮತ್ತು ಕಂಟೈನರ್ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಿಲುಕಿದ ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಲಾರಿಯಲ್ಲಿ ಸಿಲುಕಿದ್ದ ಲಾರಿ ಡ್ರೈವರನ್ನು ಸ್ಥಳೀಯರು ಹರಸಾಹಸ ಮಾಡಿ ಹೊರ ತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ಗಾಯಗೊಂಡ ಕೆಲವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ, ಕೆಲವರನ್ನು ಸಂಪಾಜೆ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಸುಳ್ಯ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ, ತನಿಖೆ ನಡೆಸುತ್ತಿದ್ದಾರೆ.

Next Story