ವಿಧಾನಸಭೆ ಚುನಾವಣೆ | ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
![ವಿಧಾನಸಭೆ ಚುನಾವಣೆ | ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ವಿಧಾನಸಭೆ ಚುನಾವಣೆ | ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ](https://www.varthabharati.in/sites/default/files/images/articles/2022/11/15/356506-1668524482.jpg)
ಬೆಂಗಳೂರು, ನ.15: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆಗೆ ನಿಗದಿ ಮಾಡಲಾಗಿದ್ದ ಗಡುವನ್ನು ನ.21ರವರೆಗೆ ವಿಸ್ತರಿಸಲಾಗಿದೆ.
ಈ ಮೊದಲು ಅರ್ಜಿ ಸಲ್ಲಿಕೆಗೆ ನ.15 ಕೊನೆ ದಿನವಾಗಿತ್ತು. ಆದರೆ ಈ ಅವಧಿ ವಿಸ್ತರಣೆ ಮಾಡುವಂತೆ ರಾಜ್ಯದ ಮೂಲೆ, ಮೂಲೆಗಳಿಂದ ಪಕ್ಷದವರು ಹಾಗೂ ಅನ್ಯ ಪಕ್ಷಗಳಿಂದ ಕಾಂಗ್ರೆಸ್ಗೆ ಬರಲು ಇಚ್ಚಿಸಿರುವ ಟಿಕೆಟ್ ಆಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ ಎಂದು ಕೆಪಿಸಿಸಿ (Karnataka Pradesh Congress Committee) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ... ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ಗೆ ಅರ್ಜಿ ಸಲ್ಲಿಸಿದ ಸಿನೆಮಾ ನಿರ್ಮಾಪಕ ಉಮಾಪತಿ ಗೌಡ
Next Story