Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅರೋಗ್ಯ ಇಲಾಖೆಯ ಮಹಿಳಾ ಅಧಿಕಾರಿ,...

ಅರೋಗ್ಯ ಇಲಾಖೆಯ ಮಹಿಳಾ ಅಧಿಕಾರಿ, ಸಿಬ್ಬಂದಿಗಳ ಮಕ್ಕಳ ಪಾಲನೆಗೆ ಆರೋಗ್ಯಸೌಧದಲ್ಲಿ “ಡೇ-ಕೇರ್ ಸೆಂಟರ್” ಗೆ ಚಾಲನೆ

ಮಕ್ಕಳ ಆರೈಕೆ ನಮ್ಮ ಕರ್ತವ್ಯ: ಸಚಿವ ಡಾ. ಕೆ. ಸುಧಾಕರ್

15 Nov 2022 7:43 PM IST
share
ಅರೋಗ್ಯ ಇಲಾಖೆಯ ಮಹಿಳಾ ಅಧಿಕಾರಿ, ಸಿಬ್ಬಂದಿಗಳ ಮಕ್ಕಳ ಪಾಲನೆಗೆ ಆರೋಗ್ಯಸೌಧದಲ್ಲಿ “ಡೇ-ಕೇರ್ ಸೆಂಟರ್” ಗೆ ಚಾಲನೆ
ಮಕ್ಕಳ ಆರೈಕೆ ನಮ್ಮ ಕರ್ತವ್ಯ: ಸಚಿವ ಡಾ. ಕೆ. ಸುಧಾಕರ್

ಬೆಂಗಳೂರು, ನ, 15; ಮಾಗಡಿರಸ್ತೆಯಲ್ಲಿರುವ ಆರೋಗ್ಯಸೌಧದಲ್ಲಿ ಅಧಿಕಾರಿ, ಸಿಬ್ಬಂದಿ ಮಕ್ಕಳ ಲಾಲನೆ, ಪಾಲನೆಗಾಗಿ ಡೇ ಕೇರ್ ಸೆಂಟರ್ ಆನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ, ಸಚಿವ ಡಾ. ಕೆ. ಸುಧಾಕರ್ ಲೋಕಾರ್ಪಣೆ ಮಾಡಿದರು.

ಸಚಿವ ಡಾ. ಕೆ. ಸುಧಾಕರ್ ಮಾತನಾಡಿ, ಮಕ್ಕಳ ಲಾಲನೆ, ಪಾಲನೆಗೆ ಸೂಕ್ತ ಸೌಲಭ್ಯ ಕಲ್ಪಿಸುವುದು ಸರ್ಕಾರದ ಕರ್ತವ್ಯವಾಗಿದೆ. ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಇಂತಹ ಕೇಂದ್ರಗಳು ಅಗತ್ಯವಾಗಿವೆ ಎಂದರು.

''10ವರ್ಷದವರಗೆ ಮಕ್ಕಳ ಆರೈಕೆ ಅತ್ಯಂತ ಮುಖ್ಯವಾಗಿದೆ. ಇಂತಹ ಸಮಯದಲ್ಲಿ ಮಕ್ಕಳ ಲಾಲನೆ, ಪೋಷಣೆ ಬಹಳ ಮುಖ್ಯ. ಮಕ್ಕಳು ಆರೋಗ್ಯವಂತರಾಗಿದ್ದಾಗ ಭವಿಷ್ಯದಲ್ಲಿ ಸದೃಢ ಸಮಾಜ ಕಟ್ಟಲು ಸಾಧ್ಯ. ಇಂತಹ ಆಟಾಟೋಪಗಳಿಂದ ಮಕ್ಕಳ ದೈಹಿಕವಾಗಿ ಮತ್ತಷ್ಟು ಚುರುಕಾಗುತ್ತದೆ. ಸರ್ಕಾರಿ ಮಹಿಳಾ ಸಿಬ್ಬಂದಿಗಳಿಗೆ ನೀಡಬೇಕಾದ ಸೌಲಭ್ಯ, ಸವಲತ್ತುಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ'' ಎಂದು ಹೇಳಿದರು.

''“ಡೇ ಕೇರ್ ಸೆಂಟರ್” ನಿಂದ ಉದ್ಯೋಗದಲ್ಲಿರುವ ದಂಪತಿಗಳಿಗೆ, ಅದರಲ್ಲೂ ನಿರ್ದಿಷ್ಟವಾಗಿ ಹತ್ತು ವರ್ಷ ವಯೋಮಿತಿಯೊಳಗಿನ ಮಕ್ಕಳನ್ನು ಹೊಂದಿರುವ ಪಾಲಕರಿಗೆ ಅನುಕೂಲವಾಗಿದೆ. ಮಕ್ಕಳು ಸಹ ತಂದೆ – ತಾಯಿ ಜೊತೆ ಬೆರೆಯಲು, ಅವರ ಕಣ್ಗಾವಲಿನಲ್ಲಿ ಬೆಳೆಯಲು ಈ ಕೇಂದ್ರ ಸಹಕಾರಿಯಾಗಿದೆ'' ಎಂದು ತಿಳಿಸಿದರು. 

''ಮಹಿಳೆಯರು ಪುರುಷರಷ್ಟೇ ಸರಿಸಮಾನವಾಗಿ ಕೆಲಸ ನಿರ್ವಹಿಸಲು ಇಂತಹ ವಾತಾವರಣ ಸೂಕ್ತವಾಗಿದೆ. ಮಹಿಳೆಯರ ಉದ್ಯೋಗದ ಸ್ಥಳದಲ್ಲಿ ಮಕ್ಕಳ ಡೇ ಕೇರ್ ಆರಂಭಿಸಿರುವುದರಿಂದ ತಾಯಂದಿರು ನಿರಾಳವಾಗಿ ಕೆಲಸ ಮಾಡಬಹುದು. ಮಧ್ಯಾಹ್ನ ಉಟದ ಸಮಯದಲ್ಲಿ ಮಕ್ಕಳ ಜೊತೆಯಲ್ಲಿ ಇರಬಹುದು. ಭೋಜನ ಸವಿದು ಮಕ್ಕಳ ಬೇಕು – ಬೇಡಗಳನ್ನು ನೋಡಿಕೊಳ್ಳಬಹುದಾಗಿದೆ'' ಎಂದರು. 

''ಆರೋಗ್ಯಸೌಧದ ಡೇ ಕೇರ್ ನಲ್ಲಿ ಗರಿಷ್ಠ 20 ಮಕ್ಕಳ ಆರೈಕೆಗೆ ಅವಕಾಶ ಕಲ್ಪಿಸಬಹುದಾಗಿದೆ.  ವಿನೂತನ ಶೈಲಿಯ  ನೆಲದ ಹಾಸಿಗೆ, ರಬ್ಬರ್ ಮ್ಯಾಟ್ ಅಂಬೆಗಾಲಿಡುವ ಮಕ್ಕಳಿಂದ ಪ್ರಾಥಮಿಕ ಶಾಲೆ ಪ್ರವೇಶಿಸುವ ವಿದ್ಯಾರ್ಥಿ ಹಂತದವರೆಗೆ ಉಪಚಾರಕ್ಕಾಗಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮಕ್ಕಳ ಚಟುವಟಿಕೆಗಾಗಿ ಆಟಿಕೆಗಳನ್ನು ಆಳವಡಿಸಲಾಗಿದೆ'' ಎಂದು ಮಾಹಿತಿ ನೀಡಿದರು. 

ಆರೋಗ್ಯ ಸೌಧದ ಐಇಸಿ ಶಿಕ್ಷಣ ವಿಭಾಗದಲ್ಲಿ ಕೆಲಸ ಮಾಡುವ ಪಾರ್ವತಿ ಮಾತನಾಡಿ, ನನ್ನ ಮಗ ಪ್ರೀತಮ್ ಗೆ ಎರಡೂವರ್ಷ. ತುಂಬಾ ತುಂಟನಾಗಿರುವ ಮಗನನ್ನು ನೋಡಿಕೊಳ್ಳಲು ಈ ಕೇಂದ್ರ ಅನುಕೂಲವಾಗಿದೆ. ತಮ್ಮ ಪತಿ ಕೂಡ ಕೆಲಸ ಮಾಡುತ್ತಿರುವುದರಿಂದ ಮಗುವಿನ ಆರೈಕೆಗೆ ಇಲ್ಲಿ ಉತ್ತಮ ವ್ಯವಸ್ಥೆಯಿದೆ.  ಮಗನಿಗೂ ಇದರಿಂದ ತುಂಬಾ ಖುಷಿಯಾಗಿದ್ದು, ಉತ್ತಮ ರೀತಿಯಲ್ಲಿ ಮಕ್ಕಳನ್ನು ಆರೈಕೆ ಮಾಡಲು ಸಾಧ್ಯವಾಗಲಿದೆ ಎಂದರು.

ಎಚ್.ಡಬ್ಲ್ಯೂ, ಸಿ ಕೇಂದ್ರದಲ್ಲಿ ಸಮಾಲೋಚಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಸ್ಫೂರ್ತಿ ಮಾತನಾಡಿ, ನನ್ನ ಮಗನ ಹೆಸರು ಶೌರ್ಯ. ಆತನಿಗೆ ಈ ಕೇಂದ್ರ ಅಚ್ಚುಮೆಚ್ಚಾಗಿದೆ. ಆರೋಗ್ಯ ಸೌಧದಲ್ಲಿ ಮಹಿಳಾ ಸಿಬ್ಬಂದಿ ಹೆಚ್ಚಿನ ಪ್ರಮಾಣದಲ್ಲಿದ್ದು, ಇಂತಹ ವಿನೂತನ ಕೇಂದ್ರ ಸ್ಥಾಪನೆ ಮಾಡಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಆಯುಕ್ತ ಡಿ. ರಂದೀಪ್, ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

share
Next Story
X