ಫೆ.3ರಿಂದ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಮಂಗಳೂರು, ನ.15: ದ.ಕ.ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನವು 2023ರ ಫೆಬ್ರವರಿ 3,4,5ರಂದು ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಲಿದೆ.
ರಾಜ್ಯಸಭಾ ಸದಸ್ಯ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ.ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಸಮ್ಮೇಳನ ನಡೆಯಲಿದೆ ಎಂದು ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story