Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನ.18ರಂದು ಮಂಗಳೂರಿನಲ್ಲಿ 69ನೇ ಅಖಿಲ...

ನ.18ರಂದು ಮಂಗಳೂರಿನಲ್ಲಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹ

15 Nov 2022 11:03 PM IST
share
ನ.18ರಂದು ಮಂಗಳೂರಿನಲ್ಲಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹ

ಮಂಗಳೂರು, ನ.15; ಮಂಗಳೂರಿನಲ್ಲಿ ರಾಜ್ಯ ಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ “ಉದ್ಯಮಶೀಲತೆ ಅಭಿವೃದ್ಧಿ, ಸಾರ್ವಜನಿಕ-ಖಾಸಗಿ-ಸಹಕಾರ ಸಹಭಾಗಿತ್ವವನ್ನು ಬಲಗೊಳಿಸುವುದು”ಎಂಬ  ಧ್ಯೇಯ ದೊಂದಿಗೆ ನ.18ರಂದು ಬೆಳಗ್ಗೆ 10 ಗಂಟೆಗೆ 'ಕರಾವಳಿ ಉತ್ಸವ' ಮೈದಾನದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ಅಧ್ಯಕ್ಷ ಮತ್ತು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಸಹಕಾರ ತತ್ವ ಮತ್ತು ಆಚರಣೆಯಲ್ಲಿ ಅಪಾರ ವಿಶ್ವಾಸವನ್ನು ಇರಿಸಿಕೊಂಡಿದ್ದ ಭಾರತದ ಪ್ರಥಮ ಪ್ರಧಾನಿ ಪಂಡಿತ ಜವಾಹರಲಾಲ್‌ ನೆಹರೂರವರು ಸಹಕಾರ ತತ್ವದ ಮೂಲಕ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸಬಹು ದೆಂಬ ಆಶಯವನ್ನು ಇರಿಸಿಕೊಂಡು ಹಲವಾರು ಯೋಜನೆಗಳನ್ನು ರೂಪಿಸಿದರು. ಇದು ಸಹಕಾರ ಚಳುವಳಿಯ ಬೆಳವಣಿಗೆಗೆ ಸಹಕಾರಿಯಾಯಿತು. ಇದರ ಫಲವಾಗಿ ರಾಷ್ಟ್ರದ ಸಹಕಾರ ಚಳುವಳಿಗೆ 118 ವರ್ಷಗಳ ಭವ್ಯ ಇತಿಹಾಸವಿದೆ. ವಿಶ್ವದಲ್ಲಿ ಅತ್ಯುತ್ತಮ ಸಹಕಾರ ಚಳುವಳಿಯನ್ನು ನಮ್ಮ ರಾಷ್ಟ್ರ ಹೊಂದಿರುತ್ತದೆ. ಪ್ರತಿ ವರ್ಷ ನವೆಂಬರ್ 14ರಿಂದ 20 ರವರೆಗೆ ರಾಷ್ಟ್ರದಾದ್ಯಂತ “ಅಖಿಲ ಭಾರತ ಸಕಾರ ಸಪ್ತಾಹ" ನಡೆಯುತ್ತದೆ, ಪಂಡಿತ್‌ ನೆಹರೂ ರವರ ಜನ್ಮ ದಿನವಾದ ನವೆಂಬರ್ 14ರಂದು ಸಪ್ತಾಹದ ಉದ್ಘಾಟನೆ ನಡೆದಿದೆ. ಸಪ್ತಾಹದ ಅವಧಿಯಲ್ಲಿ ಸಹಕಾರ ಚಳುವಳಿ ನಡೆದು ಬಂದ ಹಾದಿಯ ಅವಲೋಕನ ನಡೆಸಿ `ಭವಿಷ್ಯದ ಸಹಕಾರಿ ಚಳುವಳಿಯನ್ನು ಯಶಸ್ವಿಯಾಗಿ ಮುನ್ನಡೆಸುವ ಬಗ್ಗೆ ಚಿಂತನೆ ನಡೆಸುವುದೇ ಸಹಕಾರಿ ಸಪ್ತಾಹದ ಮುಖ್ಯ ಉದ್ದೇಶವಾಗಿರುತ್ತದೆ. 69ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಭಾರತ 75 ಸಹಕಾರ ಸಂಘಗಳ ಬೆಳವಣಿಗೆ ಮತ್ತು ಮುಂದಿನ ಭವಿಷ್ಯ" ಎಂಬ ಧೈಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಅದೇ ರೀತಿಯಲ್ಲಿ ರಾಜ್ಯಮಟ್ಟದಲ್ಲಿ ಏಳು ದಿನದ ಕಾರ್ಯಕ್ರಮ ಗಳು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಯುತ್ತದೆ, ನವೆಂಬರ್ 14ರಂದು ಸಹಕಾರ ಸಪ್ತಾಹ ಉದ್ಘಾಟನೆಯನ್ನು ಕಲಬುರಗಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆರವೇರಿಸಿದ್ದಾರೆ. ಹಾಗೂ ಸಮಾರೋಪ ಕಾರ್ಯ ಕ್ರಮವು ಮೈಸೂರಿನಲ್ಲಿ ನಡೆಯಲಿದೆ ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ವಿಶೇಷ ಆಹ್ವಾನಿತರಾಗಿ ಕರ್ನಾಟಕ  ಸರಕಾರದ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಿವಯೋಗಿ ಕಳಸದ,ಸಹಕಾರ ಸಂಘಗಳ ರಾಜ್ಯ ನಿಬಂಧಕ ಕ್ಯಾ.ಡಾ.ಕೆ. ರಾಜೇಂದ್ರ,ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್,ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್  ಭಾಗವಹಿಸಲಿದ್ದಾರೆ.

*ಐವರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ:- ಕರ್ನಾಟಕ ಸರಕಾರ ರಾಜ್ಯ ಮಟ್ಟದಲ್ಲಿ ನೀಡುವ ಸಹಕಾರ ರತ್ನ ಪ್ರಶಸ್ತಿಗೆ ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಿಂದ ಈ ಬಾರಿ, ಐವರು ಆಯ್ಕೆಗೊಂಡಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ  ಕೊಂಕೋಡಿ ಪದ್ಮನಾಭ, ನಿತ್ಯಾನಂದ ಮುಂಡೋಡಿ, ಹಾಗೂ ದಂಬೆಕಾನ ಸದಾಶಿವ ರೈ. ಉಡುಪಿ ಜಿಲ್ಲೆಯಿಂದ ಜಯಕರ ಶೆಟ್ಟಿ ಇಂದ್ರಾಳಿ ಮತ್ತು ಯಶ್‌ಪಾಲ್‌ ಸುವರ್ಣ ಇವರು 'ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆಯಾಗಿರುವ ಸಹಕಾರಿಗಳು, ಈ ಐದು ಮಂದಿಗೂ ಮಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್‌ ಅವರು ಸಹಕಾರ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ ಎಂದು ಹೇಳಿದರು.

ಸಮಾರಂಭದಲ್ಲಿ ಶಾಸಕರು, ಸಂಸದರು, ಮನಪಾ ಮೇಯರ್, ಕ್ಯಾಂಪ್ಕೋ ಅಧ್ಯಕ್ಷ, ದ.ಕ ಉಡುಪಿ ಮೀನುಗಾರರ ಮಹಾ ಮಂಡಳದ ಅಧ್ಯಕ್ಷ, ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ. ನ.18ರಂದು "ಸಹಕಾರ ಸಂಘ, ಸಂಸ್ಥೆಗಳ ಪ್ರತಿನಿಧಿಗಳ ಸಹಕಾರ ಜಾಥಾ' ಆಯೋಜನೆ ಮಾಡಲಾಗಿದೆ. ಪೂರ್ವಾಹ್ನ 9 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆವರಣದಿಂದ ಸಮಾರಂಭ ನಡೆಯುವ ಕರಾವಳಿ ಉತ್ಸವ ಮೈದಾನ ದವರೆಗೆ ಸಹಕಾರಿಗಳು ವಾಹನದ ಮೂಲಕ ಸರಕಾರ ಜಾಥಾದಲ್ಲಿ ಭಾಗವಹಿಸಲಿರುವರು. ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯ ಸಹಕಾರ ಸಂಘಟನೆ ಯ ಮೂಲಪುರುಷ ಮೊಳಹಳ್ಳಿ ಶಿವರಾವ್‌ ಅವರನ್ನು ಸ್ಮರಿಸುವ ಹಾಗೂ ಸಹಕಾರ ಚಿಲುಮೆಯನ್ನು ಪ್ರತಿಬಿಂಬಸುವ ಆಕರ್ಷಕ ಟ್ಯಾಬ್ಲೊಗಳು, ಚೆಂಡೆ, ಕೊಂಬು, ಸ್ಯಾಕ್ರೋಫೋನ್ ಹೊನ್ನಾವರ, ಬ್ಯಾಂಡ್, ಸೇರಿದಂತೆ ವಿವಿಧ ಕಲಾತಂಡಗಳ ಸಂಯೋಜನೆಯಲ್ಲಿ 'ಸಹಕಾರ ಜಾಥಾ ರಾಜ್ಯ ಮಟ್ಟದ ಕಾರ್ಯಕ್ರಮದ ಜೊತೆಗೆ ಸಪ್ತಾಹದ ಏಳು ದಿನಗಳಲ್ಲಿ ಜಿಲ್ಲಾಮಟ್ಟದ ಸಹಕಾರ ಸಪ್ತಾಹದ ಆಚರಣೆ ಕೂಡ ನಡೆಯುತ್ತದೆ. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮತ್ತು ಉಡುಪಿ ಜಿಲ್ಲಾ ಯೂನಿಯನ್ ಗಳ ಸಹಯೋಗ ದಲ್ಲಿರಾಜ್ಯ ಮಟ್ಟದ ಕಾರ್ಯಕ್ರಮ ನಡೆಯಲಿದೆ ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಸುದ್ದಿ ಗೋಷ್ಠಿ ಯಲ್ಲಿ  ಬ್ಯಾಂಕ್ ನ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಟಿ.ಜಿ.ರಾಜರಾಮ ಭಟ್ , ವಿನಯ ಕುಮಾರ್ ಸೂರಿಂಜೆ, ನಿರ್ದೇಶಕ ರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಭಾಸ್ಕರ್ ಕೋಟ್ಯಾನ್, ಎಸ್ ಬಿ.ಜಯರಾಮ ರೈ, ಶಶಿ ಕುಮಾರ್ ರೈ ಬಾಲ್ಯೋಟ್ಟು, ವಾದಿ ರಾಜ ಶೆಟ್ಟಿ, ರಾಜು ಪೂಜಾರಿ, ಜೈರಾಜ್ ಬಿ.ರೈ ಅಶೋಕ್ ಕುಮಾರ್ ಶೆಟ್ಟಿ ರಾಜೇಶ್ ರಾವ್, ಮೋನಪ್ಪ ಶೆಟ್ಟಿ ಎಕ್ಕಾರು, ದ.ಕ ಮತ್ತು ಉಡುಪಿ ಜಿಲ್ಲೆ ಗಳ ಸಹಕಾರಿ ಯೂನಿಯನ್ ಗಳ ಅಧ್ಯಕ್ಷ ರಾದ ಪ್ರಸಾದ್ ಕೌಶಲ್ಯ ಶೆಟ್ಟಿ ಮತ್ತು  ಜಯಕರ ಶೆಟ್ಟಿ ಇಂದ್ರಾಳಿ, ಎಸ್ ಸಿ ಡಿ ಸಿಸಿ ಬ್ಯಾಂಕ್ ನ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ (ಪ್ರಭಾರ) ಗೋಪಿನಾಥ್ ಭಟ್ ಮೊದಲಾದ ವರು ಉಪಸ್ಥಿತರಿದ್ದರು.

share
Next Story
X