ವಿದ್ಯಾರ್ಥಿಗಳ ಮೇಲೆ ಕಾಳಜಿ ಇದ್ದಲ್ಲಿ ಖಾಸಗಿ ಕಾಲೇಜುಗಳ ಹೆಚ್ಚುವರಿ ಶುಲ್ಕಕ್ಕೆ ಕಡಿವಾಣ ಹಾಕಿ: ಹೈಕೋರ್ಟ್
ಬೆಂಗಳೂರು, ನ.15: ವಿದ್ಯಾರ್ಥಿಗಳ ಮೇಲೆ ಸರಕಾರಕ್ಕೆ ನಿಜಕ್ಕೂ ಕಾಳಜಿ ಇದ್ದಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಅಧಿಕ ಶುಲ್ಕ ಸಂಗ್ರಹ ಮಾಡದಂತೆ ನಿರ್ದೇಶನ ನೀಡಬೇಕೆಂದು ಹೈಕೋರ್ಟ್ (high court of karnataka) ಸೂಚನೆ ನೀಡಿದೆ.
ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಜಿ.ಹರೀಶ್ ಸೇರಿ 29 ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಸೂಚನೆ ನೀಡಿದೆ.
ಉನ್ನತ ಶಿಕ್ಷಣದಲ್ಲಿ ಸರಕಾರ ನಿಗದಿಪಡಿಸಿದ ಶುಲ್ಕವನ್ನಷ್ಟೇ ಖಾಸಗಿ ಕಾಲೇಜುಗಳು ಪಡೆಯಬೇಕು. ಆದರೆ, ಬಹುತೇಕ ಕೇಸ್‍ಗಳಲ್ಲಿ ಖಾಸಗಿ ಕಾಲೇಜುಗಳು ತಮ್ಮದೆ ಆದ ಶುಲ್ಕವನ್ನು ನಿಗದಿಪಡಿಸಿಕೊಂಡು ವಿದ್ಯಾರ್ಥಿಗಳಿಂದ ಅಧಿಕ ಶುಲ್ಕ ಸಂಗ್ರಹ ಮಾಡುವುದು ಸಾಮಾನ್ಯವಾಗಿದೆ. ಹೀಗಾಗಿ, ವಿದ್ಯಾರ್ಥಿಗಳ ಮೇಲೆ ಕಾಳಜಿ ಇದ್ದಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಅಧಿಕ ಶುಲ್ಕ ಸಂಗ್ರಹ ಮಾಡದಂತೆ ನಿರ್ದೇಶನ ನೀಡಬೇಕೆಂದು ಹೈಕೋರ್ಟ್ ಸೂಚನೆ ನೀಡಿದೆ.
Next Story