ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ FIR ದಾಖಲು
ದಾವಣಗೆರೆ, ನ.15: ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂಕುವಾ ಗ್ರಾಮದ ಗ್ರಾಮ ಲೆಕ್ಕಿಗ ಪ್ರಶಾಂತ್ ಕುಮಾರ್ ಅವರ ದೂರಿನ ಮೇರೆಗೆ ಶಾಸಕರ ವಿರುದ್ಧ ಐಪಿಸಿ 186 ಅಡಿಯಲ್ಲಿ ದೂರು ದಾಖಲಾಗಿದೆ.
ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾಗಿದ್ದ ಮನೆಗಳಿಗೆ ಪರಿಹಾರ ಒದಗಿಸಲು ಪ್ರಸ್ತಾವನೆ ಸಲ್ಲಿಸುವಂತೆ ಒತ್ತಡ ಹೇರಲಾಗಿತ್ತು. ಈ ಸಂದರ್ಭದಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ್ದಲ್ಲದೆ, ತಮಗೆ ಸಾರ್ವಜನಿಕವಾಗಿ ನಿಂದಿಸಿದ್ದಾರೆ ಎಂದು ಪ್ರಶಾಂತ್ ಕುಮಾರ್ ಅವರು ದೂರಿನಲ್ಲಿ ತಿಳಿಸಿದ್ದಾರೆ.
Next Story