ಎಐಸಿಸಿ ಅಧ್ಯಕ್ಷರನ್ನು ದಿಲ್ಲಿಯಲ್ಲಿ ಭೇಟಿಯಾದ ಡಿ.ಕೆ.ಶಿವಕುಮಾರ್
ಹೊಸದಿಲ್ಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D. K. Shivakumar) ಭೇಟಿಯಾಗಿದ್ದಾರೆ.
ಈಡಿ ವಿಚಾರಣೆ ಹಿನ್ನೆಲೆಯಲ್ಲಿ ದೆಹಲಿಗೆ ಹೋಗಿದ್ದ ಡಿಕೆಶಿ ಅವರು, ಮಂಗಳವಾರ ದೆಹಲಿಯ ಖರ್ಗೆ ಅವರ ನಿವಾಸದಲ್ಲಿ ಬರಲಿರುವ ವಿಧಾನಸಭಾ ಚುನಾವಣೆಯ ಪೂರ್ವಸಿದ್ಧತೆಗಳ ಕುರಿತು ಮಹತ್ವದ ಮಾತುಕತೆ ನಡೆಸಿದ್ದಾರೆನ್ನಲಾಗಿದೆ.
ಕಾಂಗ್ರೆಸ್ ಟಿಕೆಟ್ಗೆ ಅರ್ಜಿ ಸಲ್ಲಿಸಿದ ಡಿಕೆಶಿ:
ಮಂಗಳವಾರ ದಹಲಿಯಲ್ಲಿದ್ದ ಕಾರಣ ವಿಧಾನಸಭಾ ಚುನಾವಣೆಗೆ ಟಿಕೆಟ್ಗಾಗಿ ಅರ್ಜಿ ಸಲ್ಲಿಸಲು ನಿನ್ನೆ ಕೊನೆಯ ದಿನವಾಗಿತ್ತು. ಆದ್ದರಿಂದ ಕನಕಪುರ ವಿಧಾನಸಭಾ ಕ್ಷೇತ್ರದ ಟಿಕೆಟ್ಗಾಗಿ ಡಿಕೆಶಿ ಪರವಾಗಿ ಪರಿಷತ್ ಸದಸ್ಯ ರವಿ ಅವರು ಕೆ.ಪಿ.ಸಿ.ಸಿ ಕಚೇರಿ ಕಾರ್ಯದರ್ಶಿ ನಾರಾಯಣ್ ಅವರಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
► ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆಗೆ ನಿಗದಿ ಮಾಡಲಾಗಿದ್ದ ಗಡುವನ್ನು ನ.21ರವರೆಗೆ ವಿಸ್ತರಿಸಲಾಗಿದೆ.