ವರ್ಚುವಲ್ ಮೂಲಕ ಬೆಂಗಳೂರು ಟೆಕ್ ಸಮ್ಮಿಟ್- ರಜತ ಮಹೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ
ಬೆಂಗಳೂರು: ಇಂದಿನಿಂದ ಬೆಂಗಳೂರು ಅರಮನೆ ಮೈದಾನದಲ್ಲಿ ಆರಂಭವಾಗಿರುವ 25 ನೇ ಬೆಂಗಳೂರು ಟೆಕ್ ಸಮ್ಮಿಟ್ ಅನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವರ್ಚ್ಯುವಲ್ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ, ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬಯೊಕಾನ್ ಮುಖ್ಯಸ್ಥೆ ಕಿರಣ್ ಮಜೂಮ್ದಾರ್ ಷಾ ಹಾಗೂ ಐಟಿ ಬಿಟಿ ಉದ್ಯಮಿಗಳು ಹಾಜರಿದ್ದರು.