ಕಾಂಗ್ರೆಸ್ ಟಿಕೆಟ್ ಹರಾಜಿಗಿಟ್ಟಿರುವ ಡಿಕೆಶಿ, ಸಾಮಾನ್ಯ ಕಾರ್ಯಕರ್ತರು ಫೊಸ್ಟರ್ ಅಂಟಿಸಲು ಮಾತ್ರವೇ?: ಬಿಜೆಪಿ ಪ್ರಶ್ನೆ
ಬೆಂಗಳೂರು, ನ.16: ಕಾಂಗ್ರೆಸ್ ಅಭ್ಯರ್ಥಿಯಾಗಲು ಅಧಿಕೃತ ಟಿಕೆಟ್ ಹರಾಜಿಗಿಟ್ಟಿರುವ ಕೆಪಿಸಿಸಿ ಅಧ್ಯಕ್ಷರು, ಟಿಕೆಟ್ ಗಾಗಿಯೇ ಲಕ್ಷಾಂತರ ರೂ. ಕಟ್ಟಿಸಿಕೊಳ್ಳುವ ಮೂಲಕ ಸ್ಥಿತಿವಂತರಿಗೆ ಮಾತ್ರ ಟಿಕೆಟ್ ಎನ್ನುವ ನಿಯಮ ಜಾರಿಗೆ ತಂದಂತಿದೆ. ಸಾಮಾನ್ಯ ಕಾರ್ಯಕರ್ತರ ಪಾಡೇನು? ಎಂದು ಬಿಜೆಪಿ ಪ್ರಶ್ನಿಸಿದೆ.
ಈ ಸಂಬಂಧ ಟ್ವೀಟ್ಗಳನ್ನು ಮಾಡಿರುವ ಅವರು, ಕಾಂಗ್ರೆಸ್ ಪಕ್ಷದ ಟಿಕೆಟ್ಗೆ ಅರ್ಜಿ ಸಲ್ಲಿಸಲು ಲಕ್ಷಾಂತರ ರೂ. ಕಟ್ಟಬೇಕೆಂಬ ಕಟ್ಟಪ್ಪಣೆ ಮಾಡುವ ಮೂಲಕ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಇಲ್ಲ ಎನ್ನುವ ಸಂದೇಶ ಸಾರಿದೆ. ಸಾಮಾನ್ಯ ಕಾರ್ಯಕರ್ತರು ಫೊಸ್ಟರ್ ಅಂಟಿಸಲು ಮಾತ್ರವೇ? ಎಂದು ಪ್ರಶ್ನಿಸಿದೆ.
ಅರ್ಜಿ ಸಲ್ಲಿಸಲು ದಿನಾಂಕ ನಿಗದಿ ಪಡಿಸಿರುವ ಕೆಪಿಸಿಸಿ ಅಧ್ಯಕ್ಷರು ಅರ್ಜಿ ಸಲ್ಲಿಸದವರಿಗೆ ಟಿಕೆಟ್ ಇಲ್ಲ ಎಂದು ಈಗಲೇ ಘೋಷಣೆ ಮಾಡುವರೇ? ಅಥವಾ ಹೆಚ್ಚಿನ ದುಡ್ಡು ಕೊಡುವವರಿಗೆ ಬ್ಲಾಕ್ನಲ್ಲಿ ಮಾರಿಕೊಳ್ಳುವರೇ? ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಕಾಂಗ್ರೆಸ್ ಪಕ್ಷದ ಟಿಕೆಟ್ಗೆ ಅರ್ಜಿ ಸಲ್ಲಿಸಲು ಲಕ್ಷಾಂತರ ಕಟ್ಟಬೇಕೆಂಬ ಕಟ್ಟಪ್ಪಣೆ ಮಾಡುವ ಮೂಲಕ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಇಲ್ಲ ಎನ್ನುವ ಸಂದೇಶ ಸಾರಿದೆ.
— BJP Karnataka (@BJP4Karnataka) November 16, 2022
ಸಾಮಾನ್ಯ ಕಾರ್ಯಕರ್ತರು ಪೋಸ್ಟರ್ ಅಂಟಿಸಲು ಮಾತ್ರವೇ?#ಕಾಂಗ್ರೆಸ್ಟಿಕೆಟ್ಬಿಸಿನೆಸ್