ಅರ್ಜಿ ಆಹ್ವಾನ

ಮಂಗಳೂರು, ನ.16: ಲಯನ್ಸ್ ಸೆಂಟರ್ ಫಾರ್ದ ಫಿಸಿಕಲಿ ಹ್ಯಾಂಡಿಕ್ಯಾಪ್ಡ್ ಸಂಸ್ಥೆಯ ಮುಖಾಂತರ ಕಾರ್ಯನಿರ್ವಹಿಸುತ್ತಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಾದ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಕ್ಲಿನಿಕಲ್ ಸೈಕಲಾಜಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗೆ ಸರಕಾರದ ನಿಯಮಾನುಸಾರ ನೇಮಕಾತಿ ಮಾಡಲಾಗುವುದು. ಅರ್ಹರು ನ.23ರೊಳಗೆ ಅಧ್ಯಕ್ಷರು, ಕಾರ್ಯದರ್ಶಿ ಲಯನ್ಸ್ ಸೆಂಟರ್ ಫಾರ್ದ ಫಿಸಿಕಲಿ ಹ್ಯಾಂಡಿಕ್ಯಾಪ್ಡ್ ವೆನ್ಲಾಕ್ ಆಸ್ಪತ್ರೆ, ಮಂಗಳೂರು-575001 ಈ ವಿಳಾಸಕ್ಕೆ ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ:0824-2422300, 8747917610ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story