Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾ.ಹೆದ್ದಾರಿ ಅಗಲೀಕರಣ; ಪರಿಹಾರ ಮೊತ್ತ...

ರಾ.ಹೆದ್ದಾರಿ ಅಗಲೀಕರಣ; ಪರಿಹಾರ ಮೊತ್ತ ನೀಡುವಲ್ಲಿ ವಿಫಲ: ಭೂ ಮಾಲಿಕರ ಹೋರಾಟ ಸಮಿತಿ ಆರೋಪ

16 Nov 2022 9:22 PM IST
share
ರಾ.ಹೆದ್ದಾರಿ ಅಗಲೀಕರಣ; ಪರಿಹಾರ ಮೊತ್ತ ನೀಡುವಲ್ಲಿ ವಿಫಲ: ಭೂ ಮಾಲಿಕರ ಹೋರಾಟ ಸಮಿತಿ ಆರೋಪ

ಮಂಗಳೂರು, ನ. 16: ರಾಷ್ಟ್ರೀಯ ಹೆದ್ದಾರಿ 169ರ ಅಗಲೀಕರಣ ಹಿನ್ನೆಲೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರ ಮೊತ್ತವನ್ನು ನೀಡುವಲ್ಲಿ ರಾ.ಹೆ.ಪ್ರಾಧಿಕಾರ ವಿಫಲವಾಗಿದೆ. ಪ್ರಾರಂಭದಲ್ಲಿ ತಯಾರಿಸಿದ ಸಾಣೂರು, ಪಡುಮಾರ್ನಾಡ್ ಹಾಗೂ ಪುತ್ತಿಗೆ ಗ್ರಾಮದ  ಅವಾರ್ಡ್ ಸಿಂಧುವೆಂದು ಹೈಕೋರ್ಟ್ ತೀರ್ಪು ನೀಡಿ ಒಂದೂವರೆ ತಿಂಗಳು ಆದರೂ ಹೆದ್ದಾರಿ ಪ್ರಾಧಿಕಾರ ಮಾತ್ರ ಭೂಪರಿಹಾರ ಬಿಡುಗಡೆ ಮಾಡಿಲ್ಲ ಎಂದು ರಾ.ಹೆ 169ರ ಭೂಮಾಲಿಕರ ಹೋರಾಟ ಸಮಿತಿ ಆರೋಪಿಸಿದೆ.

ಬುಧವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷರಾದ ಮರಿಯಮ್ಮ ಥೋಮಸ್ ಅವರು, ಮುಂದಿನ 30 ದಿನದೊಳಗೆ ಅವಾರ್ಡ್ ಆದೇಶದಂತೆ ಸಂಬಂಧಿಸಿ ಭೂಮಾಲಕರಿಗೆ ಪರಿಹಾರ ಪಾವತಿಗೆ ಇಲಾಖೆ ಕ್ರಮಕೈಗೊಳ್ಳದಿದ್ದಲ್ಲಿ ಪದವು ಗ್ರಾಮದ ಭೂಸ್ವಾಧೀನತೆಗೆ ಒಳಪಟ್ಟ ಜಮೀನಿನ ಮಾಲಕರು ಒಂದು ಇಂಚು ಕೂಡ ಜಮೀನು ಬಿಟ್ಟುಕೊಡುವುದಿಲ್ಲ ಎಂದರು.

ಬಿಕರ್ನಕಟ್ಟೆ-ಸಾಣೂರು ರಾ.ಹೆದ್ದಾರಿ 169ರ ರಸ್ತೆ ಅಗಲೀಕರಣದ ಬಗ್ಗೆ ಈಗಾಗಲೇ ಶೇ.30ರಷ್ಟು ಮಾತ್ರ ಭೂಸ್ವಾಧೀನವಾಗಿದೆ. ಇದರ ಮಧ್ಯೆಯೇ ರಸ್ತೆ ನಿರ್ಮಾಣದ ಬಗ್ಗೆ ಟೆಂಡರ್ ವಹಿಸಿಕೊಂಡ ಕಂಪೆನಿಗೆ ಆದೇಶ ನೀಡಿರುವುದು ಹಾಸ್ಯಾಸ್ಪದ. ಭೂಸ್ವಾಧೀನವಾಗದೆ ಹಾಗೂ ಭೂಮಾಲಕರಿಗೆ ಪರಿಹಾರ ನೀಡದೆ ಟೆಂಡರ್ ಆದೇಶ ನೀಡಿರುವುದು ಎಷ್ಟು ಸರಿ ಎಂದವರು ಪ್ರಶ್ನಿಸಿದರು.

ಭೂಪರಿಹಾರ ನೀಡಲು 800 ಕೋ.ರೂಗಳಷ್ಟು ಅಗತ್ಯವಿದೆ. ಈಗ 250 ಕೋ.ರೂ ಗಳನ್ನು ನೀಡಲಾಗಿದೆ ಎಂದು ಆರ್‌ಟಿಐನಲ್ಲಿ ನಾವು ಕೇಳಿದ ಪ್ರಶ್ನೆಗೆ ಹೆದ್ದಾರಿ ಇಲಾಖೆ ಉತ್ತರಿಸಿದೆ. ಹಾಗಾದರೆ ಭೂಪರಿಹಾರ ಎಲ್ಲರಿಗೂ ನೀಡಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಹೀಗಾಗಿ ಭೂಸ್ವಾಧೀನ ಆಗುವ ಮುನ್ನ ಟೆಂಡರ್ ಕರೆದಿದ್ದು ಯಾಕೆ ಎಂದು ಪ್ರಶ್ನಿಸಿದರು.

ಹೋರಾಟಗಾರ ಬ್ರಿಜೇಶ್ ಶೆಟ್ಟಿ ಅವರು ಮಾತನಾಡಿ, ಕುಲಶೇಖರ-ಸಾಣೂರು ಹೊಸ ಹೆದ್ದಾರಿ ಉದ್ದ 41 ಕಿ.ಮೀ ಆಗಬೇಕಿತ್ತು. ಆದರೆ, ಗುರುಪುರದಲ್ಲಿ ಕೆಲವರ ಹಿತಾಸಕ್ತಿಗೆ ಒಳಗಾಗಿ ಸುತ್ತುಬಳಸಿ ಹೆದ್ದಾರಿ ಮಾಡುವ ಕಾರಣ ದಿಂದ ಉದ್ದ 46 ಕಿ.ಮೀ. ಆಗಲಿದೆ. ಭೂಪರಿಹಾರ ಸಮರ್ಪಕವಾಗಿ ನೀಡದೆ ಕಾಮಗಾರಿ ನಡೆಸಲು ಅವಕಾಶ ಕೊಡುವುದಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹೋರಾಟ ಸಮಿತಿಯ ಪ್ರಮುಖರಾದ ರತ್ನಾಕರ ಶೆಟ್ಟಿ, ಪ್ರಕಾಶ್‌ಚಂದ್ ಉಪಸ್ಥಿತರಿದ್ದರು.

share
Next Story
X