ನಾಟೆಕಲ್: ಕಾರು ಢಿಕ್ಕಿಯಾದ ರಭಸಕ್ಕೆ ರಸ್ತೆಗುರುಳಿದ ವಿದ್ಯುತ್ ಕಂಬ

ಕೊಣಾಜೆ, ನ.17: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ (Accident) ಹೊಡೆದ ಪರಿಣಾಮ ವಿದ್ಯುತ್ ಕಂಬಕ್ಕೆ ರಸ್ತೆಗೆ ಉರುಳಿಬಿದ್ದ ಘಟನೆ ನಾಟೆಕಲ್ ಸಮೀಪ ಬುಧವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಕಾರು ಚಲಾಯಿಸುತ್ತಿದ್ದ ವಿದ್ಯಾರ್ಥಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.
ಢಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಸಂಪೂರ್ಣ ಹಾನಿಯಾಗಿ ನೆಲಕ್ಕುರುಳಿದೆ. ಆದರೆ ಮಾರುತಿ 800 ಕಾರಿಗೆ ದೊಡ್ಡ ಪ್ರಮಾಣದ ಹಾನಿ ಸಂಭವಿಸಿಲ್ಲ.
ಅಪಘಾತ ಸ್ಥಳದಲ್ಲಿ ಸ್ಥಳೀಯ ನಿವಾಸಿಗಳು ಜಮಾಯಿಸಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ.