Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಚುನಾವಣೆ ಹತ್ತಿರುವಾಗುತ್ತಿದ್ದಂತೆ...

ಚುನಾವಣೆ ಹತ್ತಿರುವಾಗುತ್ತಿದ್ದಂತೆ ಬಿಜೆಪಿಯಿಂದ ಸರಕಾರಿ ಆಡಳಿತ ಯಂತ್ರದ ದುರುಪಯೋಗ: ರಮಾನಾಥ ರೈ ಆರೋಪ

17 Nov 2022 2:54 PM IST
share
ಚುನಾವಣೆ ಹತ್ತಿರುವಾಗುತ್ತಿದ್ದಂತೆ ಬಿಜೆಪಿಯಿಂದ ಸರಕಾರಿ ಆಡಳಿತ ಯಂತ್ರದ ದುರುಪಯೋಗ: ರಮಾನಾಥ ರೈ ಆರೋಪ

ಮಂಗಳೂರು, ನ.17: ವಿಧಾನಸಭಾ ಚುನಾವಣೆ ಹತ್ತಿರುವಾಗುತ್ತಿರುವಂತೆಯೇ ಬಿಜೆಪಿಯು ಬಿಎಲ್‌ಒಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರನ್ನು ಉಪಯೋಗಿಸಿಕೊಂಡು ಸರಕಾರಿ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಆರೋಪಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸದ್ಯ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಶಿಕ್ಷಕರು ಹಾಗೂ ಅಂಗನವಾಡಿ ಕಾರ್ಯಕರ್ತರು ಬಿಎಲ್‌ಒಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಶಾಸಕರ ಮನೆಯಲ್ಲಿ ಅಂಗನವಾಡಿ ಕಾರ್ಯಕರ್ತರನ್ನು ಸನ್ಮಾನಿಸುವ ಮೂಲಕ ಪ್ರಭಾವ ಬೀರುವ ಕೆಲಸ ಮಾಡಲಾಗಿದೆ ಎಂದು ಆರೋಪಿಸಿದರು.

ಕೊರೋನ ಸಂದರ್ಭ ಉತ್ತಮ ಕೆಲಸ ಮಾಡಿದ್ದಕ್ಕಾಗಿ ಸನ್ಮಾನ ಎಂದು ಹೇಳಿಕೊಂಡಿದ್ದಾರೆ. ಆದರೆ ಇದು ಚುನಾವಣೆ ಹತ್ತಿರ ಬರುತ್ತಿರುವಾಗ ಇಂತಹ ಕಾರ್ಯ ಸರಕಾರಿ ಆಡಳಿತ ಯಂತ್ರದ ದುರುಪಯೋಗ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿಗೆ ಬಂದಾಗ ಎಲ್ಲಾ ಪಂಚಾಯತ್ ಸದಸ್ಯರು, ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಬರುವಂತೆ ಅಧಿಕಾರಿಗಳ ಮೂಲಕ ತಾಕೀತು ಮಾಡಲಾಗಿತ್ತು ಎಂದು ಅವರು ಆಕ್ಷೇಪಿಸಿದರು.

ಅಂಗನವಾಡಿಯೊಂದರಲ್ಲಿ ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರದ ಅಕ್ಕಿಯಲ್ಲಿ ಹುಳಗಳಿರುವ ಬಗ್ಗೆ ನಾವು ಭೇಟಿ ನೀಡಿದ್ದ ಸಂದರ್ಭ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಲಾಗಿತ್ತು. ಆದರೆ ಇದಕ್ಕಾಗಿ ಅಂಗನವಾಡಿ ಕಾರ್ಯಕರ್ತರನ್ನು ಕರೆಸಿ ಪಂಚಾಯತ್ ಸದಸ್ಯರು ತರಾಟೆಗೈದಿರುವ ಪ್ರಕರಣ ನಡೆದಿದೆ. ಹಿರಿಯ ಅಧಿಕಾರಿಗಳ ಬದಲಿಗೆ ಸದಸ್ಯರು ಈ ರೀತಿಯ ದಬ್ಬಾಳಿಕೆ ನಡೆಸಿರುವುದು ಖಂಡನೀಯ ಎಂದು ಅವರು ಹೇಳಿದರು.

ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸರಕಾರದಿಂದ ನೇಮಕವಾಗಿದ್ದ ಆರೋಗ್ಯ ಮಿತ್ರರನ್ನು ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಕಡಿಮೆ ಆಗಿದೆ ಎಂದು ಹೇಳಿ ನೋಂದಾಯಿತ ಖಾಸಗಿ ಆಸ್ಪತ್ರೆಯ ಉಸ್ತುವಾರಿ ನೋಡುವಂತೆ ಆದೇಶ ಮಾಡಲಾಗಿದೆ. ಇದು ಸರಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಮೂಲಭೂತ ಸೌಕರ್ಯಗಳ ಕೊರತೆಯಿಂದ ರೋಗಿಗಳು ಖಾಸಗಿ ಆಸ್ಪತ್ರೆಗಳನ್ನು ಆಶ್ರಯಿಸಿಕೊಂಡಿದ್ದಾರೆಂಬುದನ್ನು ಸರಕಾರ ಪರೋಕ್ಷವಾಗಿ ಬಿಂಬಿಸಿದೆ. ಈ ಪ್ರಕ್ರಿಯೆಯನ್ನು ಕಾಂಗ್ರೆಸ್ ವಿರೋಧಿಸುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಹರಿನಾಥ್, ಶಶಿಧರ ಹೆಗ್ಡೆ, ಶಾಲೆಟ್ ಪಿಂಟೋ, ಲುಕ್ಮಾನ್ ಬಂಟ್ವಾಳ, ಶಾಹುಲ್ ಹಮೀದ್, ಬೇಬಿ ಕುಂದರ್, ಸಲೀಂ, ಸುಧೀರ್, ಉಮೇಶ್ ದಂಡೆಕೇರಿ, ಪದ್ಮಶೇಖರ್ ಜೈನ್, ಎಂ.ಎಸ್. ಮುಹಮ್ಮದ್, ಅಬ್ಬಾಸ್ ಅಲಿ, ಸುಭಾಶ್ಚಂದ್ರ ಶೆಟ್ಟಿ, ಚಿತ್ತರಂಜನ್ ಶೆಟ್ಟಿ, ಅಪ್ಪಿ, ರಮಾನಾಂದ ಪೂಜಾರಿ, ನೀರಜ್‌ಪಾಲ್, ನಝೀರ್ ಬಜಾಲ್ ಮೊದಲಾದವರು ಉಪಸ್ಥಿತರಿದ್ದರು.


ಕನ್ನಡ ಶಾಲಾ ಮಕ್ಕಳ ಹಬ್ಬ ಹೆಸರಿನಲ್ಲಿ ಅಧಿಕಾರ ದುರುಪಯೋಗ

'ಕನ್ನಡ ಶಾಲಾ ಮಕ್ಕಳ ಹಬ್ಬ' ಎಂಬ ಹೆಸರಿನಲ್ಲಿ ಕೇಶವ ಸ್ಮೃತಿ ಸಂವರ್ಧನಾ ಸಮಿತಿ ಎಂಬ ಬಿಜೆಪಿ ಘಟಕವು ಸಂಘ ನಿಕೇತನದಲ್ಲಿ ನಡೆಸುತ್ತಿರುವ ಕಾರ್ಯಕ್ರಮಕ್ಕೆ ಡಿಡಿಪಿಐ ಮೂಲಕ ಸುತ್ತೋಲೆ ಹೊರಡಿಸಿ ಶಿಕ್ಷಕರಲ್ಲಿ ಮಕ್ಕಳನ್ನು ಭಾಗವಹಿಸುವಂತೆ ಕೋರಲಾಗಿದೆ. ಇದು ಅಧಿಕಾರದದ ದುರುಪಯೋಗ. ಸರಕಾರವೇ ಇಂತಹ ಕಾರ್ಯಕ್ರಮ ಮಾಡುವುದರಲ್ಲಿ ತಪ್ಪಿಲ್ಲ. ಆದರೆ ಪಕ್ಷವೊಂದರ ಮೂಲಕ ನಡೆಸುವ ಕಾರ್ಯಕ್ರಮಕ್ಕೆ ಡಿಡಿಪಿಐ ಸುತ್ತೋಲೆ ಹೊರಡಿಸುವುದು ಖಂಡನೀಯ. ಈ ಬಗ್ಗೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮನವಿ ನೀಡಲಾಗುವುದು ಎಂದು ರಮಾನಾಥ ರೈ ಹೇಳಿದರು.

ಕೇಶವ ಸ್ಮೃತಿ ದೇವರ ಹೆಸರು, ಅದಕ್ಕೆ ನಿಮ್ಮ ವಿರೋಧವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಮಾನಾಥ ರೈ, ನನ್ನ ಹೆಸರು ದೇವರದ್ದೇ. ನನ್ನ ತಂದೆಯವರು ಪವಿತ್ರವಾದ ಕ್ಷೇತ್ರದಲ್ಲಿ ನನಗೆ ಹೆಸರಿಟ್ಟಿದ್ದರು. ನನ್ನ ಹೆಸರು ಹೇಳಿ ಸಾಕಷ್ಟು ರೀತಿಯಲ್ಲಿ ಅಪಹಾಸ್ಯ ಮಾಡುವುದು, ಬೈಯ್ಯುವುದು ದೇವರಿಗೆ ಬೈದ ಹಾಗೆ ಅಲ್ಲವೇ ಎಂದು ನಗುತ್ತಲೇ ಮರು ಪ್ರಶ್ನಿಸಿದರು.

share
Next Story
X