Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನನ್ನ ಹೆಸರಿಗೆ ಮಸಿ ಬಳಿಯುವ ಪ್ರಯತ್ನ,...

ನನ್ನ ಹೆಸರಿಗೆ ಮಸಿ ಬಳಿಯುವ ಪ್ರಯತ್ನ, ಕಾಂಗ್ರೆಸ್ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ: ಸಚಿವ ಅಶ್ವತ್ಥನಾರಾಯಣ

ಮತದಾರರ ಮಾಹಿತಿ ಕಳವು ಆರೋಪ

17 Nov 2022 4:08 PM IST
share
ನನ್ನ ಹೆಸರಿಗೆ ಮಸಿ ಬಳಿಯುವ ಪ್ರಯತ್ನ, ಕಾಂಗ್ರೆಸ್ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ: ಸಚಿವ ಅಶ್ವತ್ಥನಾರಾಯಣ
ಮತದಾರರ ಮಾಹಿತಿ ಕಳವು ಆರೋಪ

ಬೆಂಗಳೂರು: ಭ್ರಷ್ಟಾಚಾರ ಮತ್ತು ಅಕ್ರಮಗಳಲ್ಲೇ ಮುಳುಗಿರುವ ಕಾಂಗ್ರೆಸ್ ನಾಯಕರಿಗೆ ಮಾಡಲು ಏನೂ ಕೆಲಸವಿಲ್ಲ. ಹೀಗಾಗಿ ಅವರೆಲ್ಲ ಹೊಂಬಾಳೆ ಎನ್ನುವ ಯಾವುದೋ ಒಂದು ಸಂಸ್ಥೆಯ ಹೆಸರನ್ನು ಹಿಡಿದುಕೊಂಡು ನನ್ನ ಮೇಲೆ ನಿರಾಧಾರ ಆರೋಪ ಮಾಡುತ್ತಿದ್ದಾರೆ. ಇಂದು ಎಂದಿನಂತೆ ಗಾಳಿಯಲ್ಲಿ ಗುಂಡು ಹೊಡೆಯುವ ಚಾಳಿಯಾಗಿದೆ. ಪದೇಪದೇ ನನ್ನ ಹೆಸರಿಗೆ ಮಸಿ ಬಳಿಯಲು ಹೊಂಚು ಹಾಕುತ್ತಿರುವ ಇವರೆಲ್ಲರ ಮೇಲೆ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಎದುರೇಟು ಕೊಟ್ಟಿದ್ದಾರೆ.

'ಹೊಂಬಾಳೆ (ಈಗ, ಚಿಲುಮೆ ಟ್ರಸ್ಟ್‌) ಎನ್ನುವ ಬೇರೆ ಯಾವುದೋ ಸಂಸ್ಥೆಯು ಬಿಬಿಎಂಪಿ ಮತದಾರರ ಪಟ್ಟಿಯನ್ನು ಅಕ್ರಮವಾಗಿ ಪರಿಷ್ಕರಿಸಿದ್ದು, ಇದರ ಹಿಂದೆ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಅಶ್ವತ್ಥನಾರಾಯಣ ಅವರ ಕೈವಾಡವಿದೆ' ಎಂಬ ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಅಶ್ವತ್ಥನಾರಾಯಣ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. 

"ನಮ್ಮ ಸಹೋದರನದ್ದು ಕೂಡ ಹೊಂಬಾಳೆ ಎನ್ನುವ ಸಂಸ್ಥೆ ಇದ್ದು, ಸಿನೆಮಾ ನಿರ್ಮಾಣದಲ್ಲಿ ತೊಡಗಿದೆ. ಈ ಸಂಸ್ಥೆಯು ನಾಡು ಮತ್ತು ದೇಶವೇ ಮೆಚ್ಚುವಂಥ ಸಿನಿಮಾಗಳನ್ನು ಮಾಡಿ, ಗೌರವ ತಂದಿದೆ. ಈಗ ಅವರು ಹೇಳುತ್ತಿರುವ ಹೊಂಬಾಳೆ ಸಂಸ್ಥೆಗೂ ನಮ್ಮ ಸೋದರನ ಸಂಸ್ಥೆಗೂ ಯಾವುದೇ ಸಂಬಂಧವಿಲ್ಲ. ಆ ಹೆಸರನ್ನು ಇಟ್ಟುಕೊಳ್ಳಬೇಡ ಎಂದು ಹೇಳಲು, ಮಲ್ಲೇಶ್ವರಂನಲ್ಲಿ ಕಚೇರಿ ಇರಬಾರದು ಎನ್ನಲು ನಾನ್ಯಾರು? ನಾನು ತತ್ವ -ಸಿದ್ಧಾಂತಗಳಿಗಾಗಿ ರಾಜಕೀಯಕ್ಕೆ ಬಂದಿದ್ದೇನೆಯೇ ವಿನಾ ಕಾಂಗ್ರೆಸ್ಸಿನವರಂತೆ ಕುಟುಂಬ ರಾಜಕಾರಣಕ್ಕಲ್ಲ" ಎಂದು ಅವರು ನುಡಿದಿದ್ದಾರೆ.

"ಕಾಂಗ್ರೆಸ್ಸಿನಲ್ಲಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಸುರ್ಜೆವಾಲಾ ಸೇರಿದಂತೆ ಯಾರ ಬಳಿಯೂ ಗಂಭೀರ ವಿಚಾರಗಳಿಲ್ಲ. ಮತದಾರರ ಪಟ್ಟಿ ಪರಿಷ್ಕರಣೆ ಚುನಾವಣಾ ಆಯೋಗದ ಕೆಲಸ. ಅದರಲ್ಲಿ ಮುಖ್ಯಮಂತ್ರಿಗಳಿಗಾಗಲಿ, ನನಗಾಗಲಿ ಏನೂ ಇಲ್ಲ. ಯಾರಾದರೂ ತಪ್ಪು ಮಾಡಿದ್ದರೆ ಕಾಂಗ್ರೆಸ್ಸಿನವರು ಆಯೋಗಕ್ಕೆ ದೂರು ಕೊಡಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಅದು ಬಿಟ್ಟು ನನ್ನ ವಿರುದ್ಧ ಆರೋಪ ಮಾಡುವ ಚಿಲ್ಲರೆಬುದ್ಧಿ ತೋರಿಸಬಾರದು. ಹಿಂದೆ ಪಿಎಸ್‌ಐ ಹಗರಣದಲ್ಲೂ ಇವರೆಲ್ಲ ನನ್ನ ಹೆಸರನ್ನು ವಿನಾ ಕಾರಣ ಎಳೆದು ತಂದಿದ್ದರು. ಆದರೆ ಆಧಾರ ತೋರಿಸಿ ಎಂದಾಗ ಪಲಾಯನ ಮಾಡಿದರು" ಎಂದು ಅವರು ಹರಿಹಾಯ್ದರು.

"ಕಾಂಗ್ರೆಸ್ಸಿನವರು ಈಗ ಆರೋಪ ಮಾಡುತ್ತಿರುವ ಸಂಸ್ಥೆಯ ಪ್ರಮುಖ ವ್ಯಕ್ತಿ ನನ್ನೊಂದಿಗೆ ಫೋಟೋ ತೆಗೆಸಿಕೊಂಡಿರಬಹುದು. ಸಾರ್ವಜನಿಕ ಜೀವನದಲ್ಲಿರುವಾಗ ಹೀಗೆ ಸಾವಿರಾರು ಜನ ಏನೇನೋ ಕೆಲಸದ ಕಾರಣಕ್ಕೆ ಬರುತ್ತಾರೆ. ಹಾಗೆ ನೋಡಿದರೆ, ಕಾಂಗ್ರೆಸ್‌ ನಾಯಕರು ಕಳ್ಳಕಾಕರು ಮತ್ತು ಕೊಲೆಗಾರರ ಜೊತೆಯೆಲ್ಲ ಫೋಟೋ ತೆಗೆಸಿಕೊಂಡಿದ್ದಾರೆ. ರಾಜಕಾರಣಕ್ಕೆ ಬಂದಮೇಲೆ ಅದನ್ನೆಲ್ಲ ತಡೆಯಲು ಆಗುವುದಿಲ್ಲ" ಎಂದು ಅವರು ಮಾರುತ್ತರ ನೀಡಿದರು.

ಬಿಜೆಪಿ ಸರಕಾರವು ಕೆಂಪೇಗೌಡರ ಪ್ರತಿಮೆ ಸ್ಥಾಪನೆ, ಹೂಡಿಕೆದಾರರ ಸಮಾವೇಶ, ಬೆಂಗಳೂರು ತಂತ್ರಜ್ಞಾನ ಶೃಂಗಸಭೆ ಮುಂತಾದ ಮೈಲಿಗಲ್ಲುಗಳನ್ನು ಸ್ಥಾಪಿಸುತ್ತಿದೆ. ಈ ಯಶಸ್ಸನ್ನು ಸಹಿಸಿ ಕೊಳ್ಳಲಾಗದೆ ಕಾಂಗ್ರೆಸ್ ನಾಯಕರು ಹೀಗೆ ಹತಾಶೆಯ ಪರಮಾವಧಿ ತಲುಪಿದ್ದಾರೆ ಎಂದು ಅವರು ಟೀಕಿಸಿದರು.

"ಮತದಾರರ ಪಟ್ಟಿ ಪರಿಷ್ಕರಣೆಯು ಚುನಾವಣಾ ಆಯೋಗದ ಮಾರ್ಗದರ್ಶನದಲ್ಲಿ ನಡೆಯುವ ಪ್ರಕ್ರಿಯೆ. ಇದು ಅಧಿಕಾರಿಗಳು ಮತ್ತಿತರರು ಮಾಡುವ ಕೆಲಸವಾಗಿದೆ. ಬಿಬಿಎಂಪಿ ಚುನಾವಣೆಗೂ ನನಗೂ ಏನಾದರೂ ಸಂಬಂಧವಿದೆಯೇ? ಇದನ್ನೆಲ್ಲ ನೋಡಿದರೆ ಕಾಂಗ್ರೆಸ್ಸಿಗರು ಯಾವ ಮಟ್ಟಕ್ಕೆ ಇಳಿದಿದ್ದಾರೆ  ಎನ್ನುವುದು ಗೊತ್ತಾಗುತ್ತದೆ" ಎಂದು ಸಚಿವರು ಲೇವಡಿ ಮಾಡಿದರು

share
Next Story
X