ನ.19: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರಿಗೆ ಭೇಟಿ

ಮಂಗಳೂರು, ನ.17: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನ.19ರಂದು ಬೆಳಗ್ಗೆ 10.30ಕ್ಕೆ ಮಂಗಳೂರಿಗೆ ಭೇಟಿ ನೀಡಲಿದ್ದಾರೆ.
ಬಳಿಕ ದ.ಕ. ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಸಹಭಾಗಿತ್ವದಲ್ಲಿ ನಗರದ ಬಾವುಟಗುಡ್ಡೆಯಲ್ಲಿ ನಿರ್ಮಿಸಲಾದ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಲೋಕಾರ್ಪಣೆ ಮಾಡಲಿದ್ದಾರೆ.
ಅಲ್ಲದೆ ಪೂ.11ಕ್ಕೆ ಕರಾವಳಿ ಉತ್ಸವ ಮೈದಾನದಲ್ಲಿ ಹಮ್ಮಿಕೊಳ್ಳಲಾದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 1ಕ್ಕೆ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story