ಬಂಟ್ವಾಳ: ರಸ್ತೆ ಅಪಘಾತ; ಗಾಯಾಳು ಯುವಕ ಮೃತ್ಯು

ಬಂಟ್ವಾಳ: ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ.
ಬ್ರಹ್ಮರಕೂಟ್ಲು ಕಳ್ಳಿಗೆ ನಿವಾಸಿ ಮುಝಮ್ಮಿಲ್ ಮೃತ ಯುವಕ.
ನ. 9ರಂದು ರಾತ್ರಿ ವೇಳೆ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಬಂಟ್ವಾಳ ತಾಲೂಕು ತುಂಬೆ ಗ್ರಾಮದ ರಾಮಲ್ ಕಟ್ಟೆ ಎಂಬಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರವಾಗಿ ಗಾಯವಾಗಿತ್ತು. ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೃತಪಟ್ಟಿದ್ದಾರೆ.
ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.
Next Story