Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಂಕಗಳಿಗಿಂತ ಮಗುವಿನ ಕಲಾ ಅಭಿವ್ಯಕ್ತಿಗೆ...

ಅಂಕಗಳಿಗಿಂತ ಮಗುವಿನ ಕಲಾ ಅಭಿವ್ಯಕ್ತಿಗೆ ಅವಕಾಶ ಸಿಗಲಿ: ಡಾ. ಅಶೋಕ್ ಕಾಮತ್

17 Nov 2022 7:09 PM IST
share
ಅಂಕಗಳಿಗಿಂತ ಮಗುವಿನ ಕಲಾ ಅಭಿವ್ಯಕ್ತಿಗೆ ಅವಕಾಶ ಸಿಗಲಿ: ಡಾ. ಅಶೋಕ್ ಕಾಮತ್

ಉಡುಪಿ, ನ.17: ಶಾಲೆಗಳಲ್ಲಿ ವಿದ್ಯಾರ್ಥಿಯೊಬ್ಬನ ಅಂಕಗಳ ವೈಭವೀಕರಣ ಕ್ಕಿಂತ ಪ್ರತಿಯೊಬ್ಬ ಮಗುವಿನ ಸಮಗ್ರ ಅಭಿವ್ಯಕ್ತಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗುವಂತಾಗ ಬೇಕು. ಈ ನಿಟ್ಟಿನಲ್ಲಿ ಶಾಲೆಗಳಲ್ಲಿ ಕರಕುಶಲ, ಚಿತ್ರಕಲೆಗಳಿಗೆ ಹೆಚ್ಚಿನ ಅವಕಾಶ ಸಿಗಬೇಕಾಗಿದೆ ಎಂದು ಉಡುಪಿ ಡಯಟ್‌ನ ಉಪ ಪ್ರಾಂಶುಪಾಲ ಡಾ. ಕೆ. ಅಶೋಕ್ ಕಾಮತ್ ಅಭಿಪ್ರಾಯ ಪಟ್ಟಿದ್ದಾರೆ. 

ಅವರು ನಗರದ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಚಿತ್ರಕಲಾ ಮಂದಿರ ಕಲಾವಿದ್ಯಾಲಯದ ವಿಭೂತಿ ಆರ್ಟ್ ಗ್ಯಾಲರಿಯಲ್ಲಿ ಬ್ರಹ್ಮಾವರದ ನಿವೃತ್ತ ಚಿತ್ರಕಲಾ ಶಿಕ್ಷಕ ಕೆ. ದಿನಮಣಿ ಶಾಸ್ತ್ರಿ ಅವರ ಆಕ್ರಲಿಕ್ ಚಿತ್ರಕಲಾ ಕೃತಿಗಳ ಪ್ರದರ್ಶನ ‘ಚಿತ್ತಾರ’ವನ್ನು ಗುರುವಾರ  ಉದ್ಘಾಟಿಸಿ ಮಾತನಾಡುತಿದ್ದರು. 

ವಿದ್ಯಾರ್ಥಿಗಳಲ್ಲಿ ಸಹೃದಯತೆ, ಮಾನವೀಯತೆ ಬೆಳೆಸುವ ಕಾಳಜಿಗೆ ಚಿತ್ರಕಲೆ, ಕರಕುಶಲ ಕೌಶಲ್ಯ ಪೂರಕ. ಅಮೆರಿಕದಲ್ಲಿ ಕಚೇರಿಗಳ ವಾತಾವರಣದ ಘನತೆ ಯನ್ನು ಕರಕುಶಲ, ಚಿತ್ರಕಲೆಗಳ ಆಧಾರದಲ್ಲಿ  ಗುರುತಿಸಲಾ ಗುತ್ತದೆ. ಪರಂಪರೆಯಿಂದ ಚಿತ್ರಕಲೆ ಪಠ್ಯದ ಭಾಗವಾಗಿತ್ತಾದರೂ, ಇತ್ತೀಚೆಗೆ ಚಿತ್ರಕಲಾ ಶಿಕ್ಷಕರ ನೇಮಕವೇ ನಿಂತಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೂತನ ನೀತಿಯಲ್ಲಿ ಚಿತ್ರಕಲೆ ಸಮ್ಮಿಳಿತ, ಆಟಿಕೆ ಆಧರಿತ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಬಿಡುವಿನ ವೇಳೆಯ ಸದುಪಯೋಗ, ಸೃಜನಾತ್ಮಕ ಅಭಿವ್ಯಕ್ತಿಗೆ ಅವಕಾಶ ಅತಿ ಮುಖ್ಯ ಎಂದರು. 

ಹಿರಿಯ ಕಲಾವಿದ ಪಿ. ಎನ್. ಆಚಾರ್ಯ ಮಾತನಾಡಿ, ನಿನ್ನೆ ಮಾಡಿದ ಕಲಾಕೃತಿಗಳಲ್ಲಿ ಇಂದು ಕಾಣುವ ತಪ್ಪು ತಿದ್ದಬಹುದಿತ್ತೆನ್ನುವ ನೆಲೆಯಲ್ಲಿ ನಾನಿನ್ನೂ ವಿದ್ಯಾರ್ಥಿಯಾಗಿದ್ದೇನೆ ಎಂದರು. ಚಿತ್ರಕಲಾ ಮಂದಿರ ಕಲಾ ವಿದ್ಯಾಲಯದ ನಿರ್ದೇಶಕ ಡಾ. ಯು. ಸಿ. ನಿರಂಜನ್ ಅಧ್ಯಕ್ಷತೆ ವಹಿಸಿದ್ದರು. 

ಕಲಾವಿದ ದಿನಮಣಿ ಶಾಸ್ತ್ರಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನ್ನಾಡಿದರು. ಉಜ್ವಲ್ ನಿರೂಪಿಸಿ, ನಿತೀಶ್ ವಂದಿಸಿದರು. ಒರಿಸ್ಸಾದ ಕಲಂಕರಿ, ಭೂ ದೃಶ್ಯ(ಲ್ಯಾಂಡ್‌ಸ್ಕೇಪ್), ಲೈಫ್(ಜೀವಂತ) ವೈವಿಧ್ಯವನ್ನೊಳಗೊಂಡ 15 ಚಿತ್ರಗಳ ಕಲಾಪ್ರದರ್ಶನ ನ.19ರ ತನಕ ಬೆಳಗ್ಗೆ 10:30ರಿಂದ ಸಂಜೆ 6ರವರೆಗೆ ಸಾರ್ವಜನಿಕ ವೀಕ್ಷಣೆಗೆ ಲಭ್ಯವಿದೆ. 

share
Next Story
X