ʼಜವಾಹರಲಾಲ್ ನೆಹರೂ ಕಪ್ -2022ʼ ಕ್ರಿಕೆಟ್ ಪಂದ್ಯಾಟ

ಮಂಗಳೂರು : ಮಾಜಿ ಪ್ರಧಾನಿ ದಿ. ಪಂಡಿತ್ ಜವಾಹರಲಾಲ್ ನೆಹರೂರವರ ಜನ್ಮದಿನದ ಪ್ರಯುಕ್ತ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಮಂಗಳೂರು ನಗರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ನೇತತ್ವದಲ್ಲಿ ಪಂಡಿತ್ ಜವಾಹರಲಾಲ್ ನೆಹರೂ ಕಪ್-2022 ಕ್ರಿಕೆಟ್ ಪಂದ್ಯಾಟವು ನಗರದ ಉರ್ವ ಮೈದಾನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಮಾನಾಥ್ ರೈ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ಇನಾಯತ್ ಅಲಿ, ಕೆಪಿಸಿಸಿ ವಕ್ತಾರರಾದ ಎಸಿ ವಿನಯ್‌ರಾಜ್, ಸುರೇಶ್ ಬಲ್ಲಾಳ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ., ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ, ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ವಿಶ್ವಾಸ್‌ಕುಮಾರ್ ದಾಸ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಂತೋಷ್ ಕುಮಾರ್, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಲಾರೆನ್ಸ್ ಡಿಸೋಜ, ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಮಂಗಳೂರು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ನವೀನ್ ಡಿಸೋಜ, ಮನಪಾ ಸದಸ್ಯರಾದ ಶಶಿಧರ್ ಹೆಗಡೆ, ಪ್ರವೀಣ್‌ಚಂದ್ರ ಆಳ್ವ, ಅನಿಲ್ ಕುಮಾರ್, ಅಬ್ದುಲ್ಲತೀಫ್ ಕಂದಕ್, ಅಬ್ದುರ‌್ರವೂಫ್ ಬಜಾಲ್, ಕೇಶವ ಮರಳಿ, ಶಂಶುದ್ದೀನ್ ಕುದ್ರೋಳಿ, ಮಾಜಿ ಮೇಯರ್ ಅಶ್ರಫ್ ಕೆ ಮತ್ತಿತರು ಉಪಸ್ಥಿತರಿದ್ದರು.
ಮಂಗಳೂರು ಸಿಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್ ಸ್ವಾಗತಿಸಿದರು. ಮಂಗಳೂರು ಸಿಟಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಾಕೇಶ್ ದೇವಾಡಿಗ ವಂದಿಸಿದರು. ಸುನೀಲ್ ಪೂಜಾರಿ ಮತ್ತು ಅನ್ಸಾರುದ್ದೀನ್ ಸಾಲ್ಮರ ಕಾರ್ಯಕ್ರಮ ನಿರೂಪಿಸಿದರು.
*ಈ ಪಂದ್ಯಾಟದಲ್ಲಿ ಬಂದರ್ ಬ್ರಿಗೇಡ್ (ಪ್ರಥಮ), ಯುನೈಟೆಡ್ ಅಶೋಕನಗರ (ದ್ವಿತೀಯ) ಹಾಗೂ ಶಿಸ್ತುಬದ್ಧ ತಂಡವಾಗಿ ಡೊಂಗೇರಿಕೆರಿ ಚಾಲೆಂಜರ್ಸ್ ಪಡೆದುಕೊಂಡರು
*ಮಂಗಳೂರಿನ ಕ್ರಿಕೆಟ್ ಆಟಗಾರರಾದ ಶ್ರೀಧರ್ ಕುಮಾರ್ ಬೋಳೂರು ಮತ್ತು ಫುಟ್ಬಾಲ್ ಅಸೋಶಿಯೇಶನ್ ಅಧ್ಯಕ್ಷ ಡಿಎಂ ಅಸ್ಲಂ ಅವರನ್ನು ಸನ್ಮಾನಿಸಲಾಯಿತು.