ಹಳೆಕೋಟೆ ಸೈಯ್ಯದ್ ಮದನಿ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಂಗಳೂರು: ದ.ಕ. ಜಿಪಂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಏರ್ಪಡಿಸಿದ ಉರ್ದು ಕಂಠ ಪಾಠ ಸ್ಪರ್ಧೆಯಲ್ಲಿ ಹಳೆಕೋಟೆಯ ಸೈಯದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ನಾಲ್ವರು ವಿದ್ಯಾರ್ಥಿಗಳು ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಾದ ಮರಿಯಂ ಶಹೀರಾ (ಪ್ರಥಮ), ಖತೀಜತುಲ್ ಫಾಹಿಮಾ (ತೃತೀಯ) ಹಾಗೂ ಹಿರಿಯರ ವಿಭಾಗದಲ್ಲಿ ಫಾತಿಮತ್ ಶಿಬಾ (ಪ್ರಥಮ), ಫಾತಿಮತ್ ರೊಹರಾ ರಿಫಾ (ದ್ವೀತಿಯ) ಸುಳ್ಯದಲ್ಲಿ ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story