‘ಭಾರತ್ ಜೊಡೊ ಯಾತ್ರೆ’ಯಲ್ಲಿ ಪಾಲ್ಗೊಂಡ ನಟಿ ರಿಯಾ ಸೇನ್

ಅಕೋಲಾ (ಮಹಾರಾಷ್ಟ್ರ), ನ. 17: ಇಲ್ಲಿಗೆ ಆಗಮಿಸಿದ ‘ಭಾರತ್ ಜೋಡೊ ಯಾತ್ರೆ’ಯಲ್ಲಿ ನಟಿ ರಿಯಾ ಸೇನ್ ಪಾಲ್ಗೊಂಡಿದ್ದಾರೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ.
ಈ ತಿಂಗಳ ಆರಂಭದಲ್ಲಿ ನಟಿ ಹಾಗೂ ನಿರ್ದೇಶಕಿ ಪೂಜಾ ಭಟ್ ಹೈದರಾಬಾದ್‌ನಲ್ಲಿ ‘ಭಾರತ್ ಜೊಡೊ ಯಾತ್ರೆ’ಯಲ್ಲಿ ಪಾಲ್ಗೊಂಡಿದ್ದರು.
71ನೇ ದಿನದ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ರಿಯಾ ಸೇನ್ ಪಾಲ್ಗೊಂಡಿರುವ ಚಿತ್ರಗಳ ಸರಣಿಯನ್ನು ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದೆ.
‘‘ನಟಿ ರಿಯಾ ಸೇನ್ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಈಗ ರಸ್ತೆಗಳು ಕ್ರಾಂತಿಗೆ ಸಾಕ್ಷಿಯಾಗುತ್ತಿವೆ’’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
Next Story





