Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನ್ಯಾಕ್ ಸಮಿತಿಯ ಭೇಟಿಗೆ 2 ಕೋಟಿ ರೂ....

ನ್ಯಾಕ್ ಸಮಿತಿಯ ಭೇಟಿಗೆ 2 ಕೋಟಿ ರೂ. ವೆಚ್ಚ !

ದಾವಣಗೆರೆ ವಿವಿ ಅವ್ಯವಹಾರ ► ವರದಿ ಸಲ್ಲಿಸಲು ಉನ್ನತ ಶಿಕ್ಷಣ ಇಲಾಖೆ ನಿರ್ದೇಶನ

ಜಿ.ಮಹಾಂತೇಶ್ಜಿ.ಮಹಾಂತೇಶ್18 Nov 2022 8:18 AM IST
share
ನ್ಯಾಕ್  ಸಮಿತಿಯ ಭೇಟಿಗೆ 2 ಕೋಟಿ ರೂ. ವೆಚ್ಚ !
ದಾವಣಗೆರೆ ವಿವಿ ಅವ್ಯವಹಾರ ► ವರದಿ ಸಲ್ಲಿಸಲು ಉನ್ನತ ಶಿಕ್ಷಣ ಇಲಾಖೆ ನಿರ್ದೇಶನ

ಬೆಂಗಳೂರು, ನ.17: ದಾವಣಗೆರೆ ವಿಶ್ವವಿದ್ಯಾನಿಲಯಕ್ಕೆ ನೂತನ  ಕುಲಪತಿ ನೇಮಕಗೊಳಿಸಲು  ಶೋಧನಾ ಸಮಿತಿಯು ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದ ಸಂದರ್ಭದಲ್ಲೇ  ವಿಶ್ವವಿದ್ಯಾನಿಲಯದ ಅಧಿಕಾರಿಗಳು 10 ಸೂಟ್‌ಕೇಸ್‌ಗಳನ್ನು ಖರೀದಿಸಿದದರು ಎಂದು "the-file.in' ಪ್ರಕಟಿಸಿದ ವರದಿ ಚರ್ಚೆ ಹುಟ್ಟುಹಾಕಿರುವ ಬೆನ್ನಲ್ಲೇ ಇದೇ ದಾವಣಗೆರೆ ವಿಶ್ವವಿದ್ಯಾನಿಲಯಕ್ಕೆ ನ್ಯಾಕ್ ಸಮಿತಿಯು ಭೇಟಿ ನೀಡಿದಾಗಲೂ 2 ಕೋಟಿ ರೂ.ಗೂ ಹೆಚ್ಚು ಹಣವನ್ನು ಖರ್ಚು ಮಾಡಲಾಗಿತ್ತು ಎಂಬುದು ಇದೀಗ ಬಹಿರಂಗಗೊಂಡಿದೆ.

ನ್ಯಾಕ್ ಸಮಿತಿಗೆ ಎಷ್ಟೆಷ್ಟು ಹಣ ಖರ್ಚಾಗಿದೆ ಎಂಬುದನ್ನು ಪತ್ತೆ ಹಚ್ಚಿರುವ ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ನ ಉಪ ಸಮಿತಿಯ ಸದಸ್ಯರು ವಿ ವಿ ಬೊಕ್ಕಸದಿಂದ ಹಣ  ಹೇಗೆ ಲೂಟಿಯಾಗುತ್ತಿದೆ ಎಂಬುದನ್ನೂ ಹೊರಗೆಳೆದಿದ್ದಾರೆ. ಸಿಂಡಿಕೇಟ್ ಸದಸ್ಯರುಗಳು ನೀಡಿದ್ದ ದೂರನ್ನಾಧರಿಸಿ ಉನ್ನತ ಶಿಕ್ಷಣ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಯು ಈ ಸಂಬಂಧ ಒಂದು ವಾರದೊಳಗೆ ವರದಿ ಸಲ್ಲಿಸಬೇಕು ಎಂದು 2022ರ ನವೆಂಬರ್ 10ರಂದೇ  ನಿರ್ದೇಶನ ನೀಡಿದ್ದಾರೆ. ವಿಶ್ವವಿದ್ಯಾನಿಲಯದ ಕುಲಸಚಿವರಿಗೆ ನಿರ್ದೇಶನ ನೀಡಿರುವ ಪತ್ರದ ಪ್ರತಿಯು ‘ದಿ ಫೈಲ್’ಗೆ ಲಭ್ಯವಾಗಿದೆ.

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಅಕ್ರಮ ನೇಮಕಾತಿ, ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಸಿಂಡಿಕೇಟ್ ಮತ್ತು ಸರಕಾರದ ಗಮನಕ್ಕೆ ಬಾರದಂತೆ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಿಂಡಿಕೇಟ್ ಸದಸ್ಯರು ಸಲ್ಲಿಸಿರುವ ದೂರಿನಲ್ಲಿನ ಪ್ರತಿಯೊಂದು ಅಂಶಗಳಿಗೆ ಕಂಡಿಕೆವಾರು ಮಾಹಿತಿ/ವರದಿಯನ್ನು ಒಂದು ವಾರದೊಳಗೆ ನೀಡಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಶೀತಲ್ ಎಂ.ಹಿರೇಮಠ ಅವರು ಸೂಚಿಸಿದ್ದಾರೆ. ನ್ಯಾಕ್ ಸಮಿತಿ ಭೇಟಿ ಮತ್ತು ವಿಶ್ವವಿದ್ಯಾನಿಲಯದ ಘಟಿಕೋತ್ಸವಕ್ಕೆ ಆಗಿರುವ ವೆಚ್ಚವನ್ನು ಪರಿಶೀಲಿಸಿರುವ ಸಿಂಡಿಕೇಟ್ ಉಪ ಸಮಿತಿ ಸದಸ್ಯರು ವೆಚ್ಚಕ್ಕೆ ಸಂಬಂಧಿಸಿದಂತೆ ನಿಯಮ ಗಳನ್ನು ಪಾಲಿಸಿಲ್ಲ ಎಂಬುದನ್ನೂ ಪತ್ತೆ ಹಚ್ಚಿದ್ದಾರೆ.

8ನೇ ಘಟಿಕೋತ್ಸವಕ್ಕೆ ಶಾಮೀಯಾನಕ್ಕೆ ಹೆಚ್ಚುವರಿಯಾಗಿ 5,86,548 ರೂ., ಊಟೋಪಚಾರಕ್ಕೆಂದು 1,87,030 ರೂ. ವೆಚ್ಚ ಮಾಡಲಾಗಿದೆ. 9ನೇ ಘಟಿಕೋತ್ಸವಕ್ಕೆ ಸಂಬಂಧಿಸಿದಂತೆ ಶಾಮೀಯಾನಕ್ಕೆ 6,39,029 ರೂ., ಊಟೋಪಚಾರಕ್ಕೆಂದು 3,98,899 ರೂ. ಹೆಚ್ಚುವರಿಯಾಗಿ ವೆಚ್ಚ ಮಾಡಲಾಗಿದೆ ಎಂದು ಸಿಂಡಿಕೇಟ್ ಉಪ ಸಮಿತಿ ಸದಸ್ಯರು ಬಹಿರಂಗಗೊಳಿಸಿದ್ದಾರೆ.

ಇದಲ್ಲದೇ ಸರಕಾರದ ಜತೆ ಸಮಾಲೋಚನೆ ನಡೆಸದೆಯೇ 10 ಬೋಧಕೇತರ ಹುದ್ದೆಗಳಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು 2022ರ ಸೆ.19ರಂದು ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ 2016, 2017, 2018ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತಲ್ಲದೆ ಈಗಾಗಲೇ ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆಯೂ ನಡೆಸಲಾಗಿದೆ. ಅರ್ಹತಾ ಪಟ್ಟಿ ಸಿದ್ಧಗೊಂಡಿದ್ದರೂ ಇನ್ನೂ ಪ್ರಕಟಿಸಿಲ್ಲ ಎಂದು ಸಿಂಡಿಕೇಟ್ ಸದಸ್ಯರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಆಯ್ಕೆ ಪ್ರಕ್ರಿಯೆ ವೇಳೆಯಲ್ಲಿ ವಿ ವಿ ಅಧಿಕಾರಿಗಳು 10 ಸೂಟ್‌ಕೇಸ್‌ಗಳನ್ನು ಖರೀದಿಸಿದ್ದರು. ಮತ್ತು ಶೋಧನಾ ಸಮಿತಿಯ ಖರ್ಚು ವೆಚ್ಚಗಳಿಗಾಗಿ ಸಿಂಡಿಕೇಟ್ ಅನುಮೋದನೆಯಿಲ್ಲದೆಯೇ ಮುಂಗಡವಾಗಿ ಎ.ಸಿ. ಬಿಲ್‌ನಲ್ಲಿ 5.00 ಲಕ್ಷ ರೂ.ಗಳನ್ನು ವಿವಿ ಅಧಿಕಾರಿಗಳು ಪಡೆದಿದ್ದರು ಹಾಗೂ ಶೋಧನಾ ಸಮಿತಿಯ ಸದಸ್ಯರುಗಳಿಗೆ ಬ್ಯುಸಿನೆಸ್ ಕ್ಲಾಸ್ ವಿಮಾನಯಾನ ದರ ಪಾವತಿಸಲಾಗಿತ್ತು. ನೂತನ ಕುಲಪತಿಗಳ ಆಯ್ಕೆಗೆ ಸಂಬಂಧಿಸಿದಂತೆ ಒಟ್ಟು 8,06,209 ರೂ.ಗಳನ್ನು ಖರ್ಚು ಮಾಡಲಾಗಿತ್ತು  ಎಂಬುದನ್ನು ಸಿಂಡಿಕೇಟ್ ಉಪ ಸಮಿತಿಯ ಅಧ್ಯಕ್ಷ ಡಾ.ಶ್ರೀಧರ್ ಎಸ್. ನೇತೃತ್ವದ ಸಮಿತಿಯ  ಸದಸ್ಯರು ಬಯಲಿಗೆಳೆದದ್ದನ್ನು ಸ್ಮರಿಸಬಹುದು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X