Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಿನಾಕಿನಿ ನದಿ ನೀರಿನ ವಿಷಯದಲ್ಲಿ...

ಪಿನಾಕಿನಿ ನದಿ ನೀರಿನ ವಿಷಯದಲ್ಲಿ ರಾಜ್ಯಕ್ಕೆ ಕಾನೂನು ಕುಣಿಕೆ ಬಿಗಿಯಲು ಕೇಂದ್ರ ಸರಕಾರ ಹುನ್ನಾರ: ಕುಮಾರಸ್ವಾಮಿ

18 Nov 2022 9:45 AM IST
share
ಪಿನಾಕಿನಿ ನದಿ ನೀರಿನ ವಿಷಯದಲ್ಲಿ ರಾಜ್ಯಕ್ಕೆ ಕಾನೂನು ಕುಣಿಕೆ ಬಿಗಿಯಲು ಕೇಂದ್ರ ಸರಕಾರ ಹುನ್ನಾರ: ಕುಮಾರಸ್ವಾಮಿ

ಬೆಂಗಳೂರು, ನ.18: ದಕ್ಷಿಣ ಪಿನಾಕಿನಿ (ಪೆನ್ನಾರ್) ನದಿ ನೀರಿನ ವಿಷಯದಲ್ಲಿ ರಾಜ್ಯಕ್ಕೆ ಕಾನೂನು ಕುಣಿಕೆ ಬಿಗಿಯಲು ಕೇಂದ್ರ ಬಿಜೆಪಿ ಸರಕಾರ ಹುನ್ನಾರ ನಡೆಸಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ(H.D.Kumaraswamy, Former Chief minister of Karnataka) ಆರೋಪಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್(Tweet) ಮಾಡಿರುವ ಕುಮಾರಸ್ವಾಮಿ, ರಾಜಕೀಯ ಕಾರಣಕ್ಕಾಗಿ ದಕ್ಷಿಣ ಪಿನಾಕಿನಿ ನದಿ ನೀರಿನ ಹಕ್ಕನ್ನು ಕರ್ನಾಟಕದಿಂದ ಕಸಿಯಲು ಕೇಂದ್ರ ಹವಣಿಸುತ್ತಿದೆ. ಕಾವೇರಿ, ಕೃಷ್ಣಾ, ಮಹದಾಯಿ ಸೇರಿ ವಿವಿಧ ಜಲ ವಿವಾದಗಳಲ್ಲಿ ಕರ್ನಾಟಕವನ್ನು ಕಾಡಿದಂತೆ, ವಿವಾದವೇ ಅಲ್ಲದ ದಕ್ಷಿಣ ಪಿನಾಕಿನಿಯನ್ನೂ ವಿವಾದದ ಕೂಪಕ್ಕೆ ತಳ್ಳಿ ಕನ್ನಡಿಗರನ್ನು ಕಾಡುವ ಹವಣಿಕೆ ಇದಷ್ಟೇ ಎಂದು ಅವರು ಹೇಳಿದ್ದಾರೆ.

ಕಾವೇರಿ ವಿವಾದದಲ್ಲಿ ಕರ್ನಾಟಕವು ಒಂದು ಶತಮಾನ ಕಾಲ ಸಂಘರ್ಷ ನಡೆಸಿದ್ದಾಯಿತು. ಮೇಕೆದಾಟು ವಿವಾದಕ್ಕೆ ಮೋದಿ ಸರಕಾರ ಇನ್ನೂ ತುಪ್ಪ ಸುರಿಯುತ್ತಾ, ಆ ಯೋಜನೆಗೆ ಅನುಮತಿ ನೀಡಲು ಮೀನಾಮೇಷ ಎಣಿಸುತ್ತಿದೆ. ಆಗಲೇ, ಪಿನಾಕಿನಿ ನದಿ ವಿಷಯದಲ್ಲಿ ರಾಜ್ಯಕ್ಕೆ ಕಾನೂನು ಕುಣಿಕೆ ಬಿಗಿಯಲು ಬಿಜೆಪಿ ಸರಕಾರ ಹುನ್ನಾರ ನಡೆಸಿದೆ. ದಕ್ಷಿಣ ಪಿನಾಕಿನಿ ನದಿ ನೀರಿನ ವಿಷಯಕ್ಕೆ ಹೊಸ ನ್ಯಾಯಾಧೀಕರಣ ರಚನೆ ಮಾಡುವ ಕೇಂದ್ರ ಬಿಜೆಪಿ ಸರಕಾರದ ನಿರ್ಧಾರ ಅಕ್ಷಶಃ ರಾಜ್ಯದ ಪಾಲಿಗೆ ಮರಣಶಾಸನ. ಇದನ್ನು ರಾಜ್ಯ ಬಿಜೆಪಿ ಸರಕಾರ ಮುಲಾಜಿಲ್ಲದೆ ವಿರೋಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ.

ರಾಷ್ಟ್ರೀಯ ಪಕ್ಷಗಳು ಕರ್ನಾಟಕದ ಪಾಲಿಗೆ ಮಾರಕ ಎನ್ನುವುದು ಪದೇಪದೆ ರುಜುವಾತಾಗುತ್ತಿದೆ. ನೆಲ, ಜಲ, ಭಾಷೆ ವಿಚಾರದಲ್ಲಿ ಅವು ಕನ್ನಡಿಗರನ್ನು ಕಾಡುತ್ತಲೇ ಇವೆ. ಈಗ ದಕ್ಷಿಣ ಪಿನಾಕಿನಿ (ಪೆನ್ನಾರ್) ನದಿ ನೀರಿನ ವಿಷಯದಲ್ಲಿ ಕೇಂದ್ರ ಬಿಜೆಪಿ ಸರಕಾರ ಕನ್ನಡಿಗರ ಹಕ್ಕು ಕಸಿದು ಕಿರುಕುಳ ನೀಡಲು ಹೊರಟಿದೆ ಎಂದವರು ಆರೋಪಿಸಿದ್ದಾರೆ.

 ರಾಜಕೀಯ ಲಾಭದ ಉದ್ದೇಶಕ್ಕಾಗಿ ಕೇಂದ್ರ ಬಿಜೆಪಿ ಸರಕಾರವು ನೆಲ, ಜಲ, ಭಾಷೆಯಂಥ ವಿಷಯಗಳನ್ನು ಇಟ್ಟುಕೊಂಡು ದಕ್ಷಿಣದ ನಡುವೆ ಜಗಳ ಹಚ್ಚಲು ಷಡ್ಯಂತ್ರ ನಡೆಸಿದೆ. ರಾಜ್ಯದ ವಿರೋಧವಿದ್ದರೂ ಕೇಂದ್ರವು ನ್ಯಾಯಾಧಿಕರಣ ರಚನೆ ಮಾಡಲು ಹೊರಟಿದೆ. ಇದು ಸರಿಯಲ್ಲ. ಕನ್ನಡಿಗರನ್ನು ಮತ್ತೊಮ್ಮೆ ʼಜಲದಾಸ್ಯʼಕ್ಕೆ ದೂಡುವುದನ್ನು ಸಹಿಸಲಾಗದು ಎಂದು ಅವರು ಹೇಳಿದ್ದಾರೆ.

ಗೋದಾವರಿ-ಕೃಷ್ಣಾ-ಪಿನಾಕಿನಿ-ಕಾವೇರಿ ನದಿ ಜೋಡಣೆ ಯೋಜನೆಯಲ್ಲೂ ಕೇಂದ್ರವು ರಾಜ್ಯಕ್ಕೆ ಸೊನ್ನೆ ಸುತ್ತಿದೆ. 2022 ಫೆ.18ರಂದು ಸಭೆ ನಡೆಸಿದ ಕೇಂದ್ರವು, ಗೋದಾವರಿಯಿಂದ 247 ಟಿಎಂಸಿ ನೀರನ್ನು ಕೃಷ್ಣಾ, ಪೆನ್ನಾರ್‌ ಮೂಲಕ ಕಾವೇರಿಗೆ ಹರಿಸುವ ಯೋಜನೆಯ ಮಾಹಿತಿ ನೀಡಿತು. ಇಷ್ಟೂ ನೀರನ್ನು ತೆಲಂಗಾಣ, ಆಂಧ್ರ, ತಮಿಳುನಾಡಿಗೆ ಮಾತ್ರ ಹಂಚಿತು. ಈ ನದಿ ಜೋಡಣೆ ಯೋಜನೆಯಲ್ಲಿ ಕರ್ನಾಟಕ ಪ್ರಮುಖ ಪಾಲುದಾರ ಮತ್ತು ಹಕ್ಕುದಾರ ರಾಜ್ಯ. ಆದರೆ, 247 ಟಿಎಂಸಿಯಲ್ಲಿ ರಾಜ್ಯಕ್ಕೆ ಸಿಕ್ಕಿರುವುದು ಶೂನ್ಯ!! ಆ ಸಭೆಯಲ್ಲಿ ರಾಜ್ಯಕ್ಕೆ ಅಪಮಾನ ಮಾಡಲಾಯಿತು ಎಂಬ ಮಾಹಿತಿಯೂ ಬಂದಿತ್ತು ಎಂದು ತಿಳಿಸಿದ್ದಾರೆ.

ಗೋದಾವರಿ-ಕೃಷ್ಣಾ-ಪಿನಾಕಿನಿ-ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಹನಿ ನೀರನ್ನೂ ಹಂಚಿಕೆ ಮಾಡಿಲ್ಲ ಎಂದರೆ, ಕೇಂದ್ರ ಬಿಜೆಪಿ ಸರಕಾರಕ್ಕೆ ಕರ್ನಾಟಕದ ಮೇಲೆ ಅದೆಷ್ಟು ನಿರ್ಲಕ್ಷ್ಯ ಇದೆ ಎಂಬುದನ್ನು ಅರ್ಥ ಮಾಡಿಕೊಳ್ಳಬಹುದು ಎಂದು ಕುಮಾರಸ್ವಾಮಿ ತಿಳಿಸಿದೆ.

"ಕನ್ನಡಿಗರು ತಬ್ಬಲಿಗಳಾಗುತ್ತಿದ್ದಾರೆ" ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಂಸತ್ತಿನಲ್ಲಿ ಅಲವತ್ತುಕೊಂಡರೂ ಕೇಂದ್ರವು ಕನ್ನಡಿಗರ ಮೇಲೆ ಕಠಿಣ ನೀತಿ ಮುಂದುವರಿಸಿದೆ. ದಕ್ಷಿಣ ಪಿನಾಕಿನಿ ವಿಷಯದಲ್ಲಿ ನ್ಯಾಯಾಧೀಕರಣ ರಚನೆ ಒಪ್ಪುವುದಿಲ್ಲ. ನೆಲ, ಜಲ, ಭಾಷೆ ವಿಚಾರದಲ್ಲಿ ದಕ್ಷಿಣ ರಾಜ್ಯಗಳನ್ನು ಒಡೆದಾಳುವ ಬಿಜೆಪಿಯ ಕುತ್ಸಿತ ರಾಜಕಾರಣಕ್ಕೆ ಅವಕಾಶ ನೀಡುವುದಿಲ್ಲ. ರಾಜ್ಯದ ನೀರಾವರಿ ಹಿತಾಸಕ್ತಿಗಳ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಖಾಸಗಿ ಕಂಪೆನಿ ನಿರ್ಮಿಸಿದ ಮೊಟ್ಟಮೊದಲ ರಾಕೆಟ್ ಉಡಾವಣೆಗೆ ISRO ಸಜ್ಜು

ಕಾವೇರಿ ವಿವಾದದಲ್ಲಿ ಕರ್ನಾಟಕವು ಒಂದು ಶತಮಾನ ಕಾಲ ಸಂಘರ್ಷ ನಡೆಸಿದ್ದಾಯಿತು. ಮೇಕೆದಾಟು ವಿವಾದಕ್ಕೆ ಶ್ರೀ @narendramodi ಸರಕಾರ ಇನ್ನೂ ತುಪ್ಪ ಸುರಿಯುತ್ತಾ, ಆ ಯೋಜನೆಗೆ ಅನುಮತಿ ನೀಡಲು ಮೀನಾಮೇಷ ಎಣಿಸುತ್ತಿದೆ. ಆಗಲೇ, ಪಿನಾಕಿನಿ ನದಿ ವಿಷಯದಲ್ಲಿ ರಾಜ್ಯಕ್ಕೆ ಕಾನೂನು ಕುಣಿಕೆ ಬಿಗಿಯಲು ಬಿಜೆಪಿ ಸರಕಾರ ಹುನ್ನಾರ ನಡೆಸಿದೆ. 2/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 18, 2022
share
Next Story
X