ಕುಂದಾಪುರ: ಕಾರಿಗೆ ಟ್ಯಾಂಕರ್ ಢಿಕ್ಕಿ

ಕುಂದಾಪುರ, ನ.18: ಕಾರಿಗೆ ಟ್ಯಾಂಕರ್ ಢಿಕ್ಕಿ (Accident) ಹೊಡೆದ ಘಟನೆ ಕುಂಭಾಸಿ ಸಮೀಪದ ಕೊರವಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಕುಂದಾಪುರ ಕಡೆಯಿಂದ ಉಡುಪಿಯತ್ತ ಸಾಗುತ್ತಿದ್ದ ಕಾರಿಗೆ ಹಿಂಭಾಗದಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದರೆ, ಕಾರು ಚಾಲಕ ಸಹಿತ ಇಬ್ಬರು ಮಹಿಳಾ ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
Next Story







