Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 2025ರ ಜೂನ್‌ ಹೊತ್ತಿಗೆ 175 ಕಿ.ಮೀ....

2025ರ ಜೂನ್‌ ಹೊತ್ತಿಗೆ 175 ಕಿ.ಮೀ. ಮೆಟ್ರೋ ಮಾರ್ಗ: ಅಂಜುಂ ಪರ್ವೇಝ್

18 Nov 2022 4:03 PM IST
share
2025ರ ಜೂನ್‌ ಹೊತ್ತಿಗೆ 175 ಕಿ.ಮೀ. ಮೆಟ್ರೋ ಮಾರ್ಗ: ಅಂಜುಂ ಪರ್ವೇಝ್

ಬೆಂಗಳೂರು, ನ.18: ಮೆಟ್ರೋ ರೈಲು ವ್ಯವಸ್ಥೆಯು ಸುಗಮ ಸಂಚಾರವನ್ನು ಸಾಧ್ಯವಾಗಿಸುತ್ತಿದ್ದು, 2025ರ ಜೂನ್‌ ಹೊತ್ತಿಗೆ 'ನಮ್ಮ ಮೆಟ್ರೋ' ಜಾಲದಲ್ಲಿ 175 ಕಿ.ಮೀ. ಉದ್ದದ ಮಾರ್ಗ ಸಿದ್ಧವಾಗಲಿದೆ ಎಂದು ಬಿಎಂಆರ್‍‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್‌ ತಿಳಿಸಿದ್ದಾರೆ.

ಬೆಂಗಳೂರು ತಂತ್ರಜ್ಞಾನ ಸಮಾವೇಶದಲ್ಲಿ ಅವರು ಶುಕ್ರವಾರ 'ಸಂಚಾರ ವ್ಯವಸ್ಥೆಯ ಭವಿಷ್ಯ' ವಿಚಾರಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.

ನಮ್ಮ ಮೆಟ್ರೋದ 2 ಮತ್ತು 3ನೇ ಹಂತದ ಕಾಮಗಾರಿಗಳು ಸಂಪೂರ್ಣವಾಗಿ ಮುಗಿದರೆ, ನಗರದಲ್ಲಿ 2041ರ ಹೊತ್ತಿಗೆ ಒಟ್ಟು 314 ಕಿ.ಮೀ. ಉದ್ದದ ಮೆಟ್ರೋ ಮಾರ್ಗ ಸಿದ್ಧವಾಗಲಿದೆ. ಸದ್ಯಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆ ಮೆಟ್ರೋ ಕಾಮಗಾರಿ ಭರದಿಂದ ಸಾಗುತ್ತಿದೆ. ಆದರೆ ಸ್ವಂತ ವಾಹನಗಳನ್ನು ಬಿಟ್ಟು ಸಾರ್ವಜನಿಕ ಸಾರಿಗೆಯ ಕಡೆಗೆ ಜನರನ್ನು ಕರೆತರುವುದೇ ದೊಡ್ಡ ಸವಾಲಾಗಿದೆ ಎಂದು ಅವರು ಪ್ರತಿಪಾದಿಸಿದರು.

1990ರವರಗೂ ದೇಶದಲ್ಲಿ ನಗರ ಪ್ರದೇಶಗಳ ಕಡೆಗೆ ಗಮನವನ್ನೇ ಕೊಡುತ್ತಿರಲಿಲ್ಲ. ಹೀಗಾಗಿ ನಮ್ಮ ನಗರಾಭಿವೃದ್ಧಿ ಯೋಜನೆಗಳು ಬಹುಕಾಲ ವೈಜ್ಞಾನಿಕವಾಗಿರಲಿಲ್ಲ. ಈಗ ನವೋದ್ಯಮಗಳಿಂದ ಮೆಟ್ರೋ ವ್ಯವಸ್ಥೆಗೆ ಸಾಕಷ್ಟು ಅನುಕೂಲಗಳು ಸಿಗುತ್ತಿವೆ. ಹೀಗಾಗಿ ಜನರು ಮೆಟ್ರೋ ರೈಲುಗಳ ಮೂಲಕ ತಮ್ಮ ಕಾರ್ಯಸ್ಥಳಗಳನ್ನು ತಲುಪುವಂತೆ ಮಾಡಲು ಹಲವು ನವೋದ್ಯಮಗಳೊಂದಿಗೆ ಬಿಎಂಆರ್‍‌ಸಿಎಲ್‌ ಒಡಂಬಡಿಕೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಅವರು ವಿವರಿಸಿದರು.

ಮೆಟ್ರೋ ನಿಲ್ದಾಣಗಳಲ್ಲೇ ಬಸ್‌ ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸುವಂತೆ ಬಿಎಂಟಿಸಿ ಜತೆ ಮಾತುಕತೆ ಪ್ರಗತಿಯಲ್ಲಿದೆ. ಇದರಿಂದ ಆ ಸಂಸ್ಥೆಗೂ ಲಾಭವಾಗಲಿದೆ. ಇದರ ಜತೆಗೆ ಕಾರು ಮತ್ತು ಬೈಕ್‌ ಪೂಲಿಂಗ್‌ ವ್ಯವಸ್ಥೆಯನ್ನು ಉತ್ತೇಜಿಸಬೇಕು. ಅಲ್ಲದೆ, ಮೆಟ್ರೋ ನಿಲ್ದಾಣಗಳ ಒಳಗೆ ಮತ್ತು ಹೊರಗೆ ಸಾರ್ವಜನಿಕರಿಗೆ ಪ್ರತಿಯೊಂದೂ ಸಿಗುವಂತಿರಬೇಕು. ಇದನ್ನು ಸಾಧ್ಯವಾಗಿಸುವ ನಿಟ್ಟಿನಲ್ಲಿ ಸಂಸ್ಥೆಯು ಯೋಚಿಸುತ್ತಿದೆ ಎಂದು ಪರ್ವೇಝ್ ನುಡಿದರು.

ಅಂತಾರಾಷ್ಟ್ರೀಯ ಸಾರಿಗೆ ಕೌನ್ಸಿಲ್‌ನ ಅಮಿತ್‌ ಭಟ್‌ ಮಾತನಾಡಿ, "ಪಾಶ್ಚಾತ್ಯ ಜಗತ್ತಿನಲ್ಲಿ ಶೇಕಡ 85ರಷ್ಟು ನಗರೀಕರಣವಾಗಿದ್ದು, ಭಾರತದಲ್ಲಿ ಈ ಪ್ರಮಾಣ ಶೇ.33ರಷ್ಟಿದೆ. ಆದರೆ ನಮ್ಮಲ್ಲಿ ಇನ್ನೂ ಶೇ.66ರಷ್ಟು ಮೂಲಸೌಲಭ್ಯಗಳನ್ನು ಅಭಿವೃದ್ಧಿಪಡಿಸಬೇಕಾಗಿದೆ. ಏಕೆಂದರೆ, ನಮ್ಮಲ್ಲಿ ಹೊಸದಾಗಿ ಹಲವು ನಗರಗಳು ತಲೆ ಎತ್ತುತ್ತಿವೆ" ಎಂದರು.

ಸುಗಮ ಮತ್ತು ಅತ್ಯಾಧುನಿಕ ಸಾರಿಗೆ ಸೌಲಭ್ಯವನ್ನು ಒದಗಿಸುವಾಗ ಇಂಗಾಲದ ಉತ್ಪಾದನೆ ಇಲ್ಲದಂತೆ ನೋಡಿಕೊಳ್ಳುವುದು, ಎಲ್ಲರನ್ನೂ ಒಳಗೊಳ್ಳುವುದು ಮತ್ತು ಯಾವುದೇ ಅಪಘಾತಗಳಿಗೆ ಆಸ್ಪದವಿಲ್ಲದಂತೆ ಖಾತ್ರಿಪಡಿಸುವುದು ಬಹಳ ದೊಡ್ಡ ಸವಾಲುಗಳಾಗಿವೆ ಎಂದು ಅವರು ಪ್ರತಿಪಾದಿಸಿದರು.

ಬಾಶ್‌ ಕಂಪೆನಿಯ ಉಪಾಧ್ಯಕ್ಷ ವಾದಿರಾಜ್‌ ಕೃಷ್ಣಮೂರ್ತಿ, ಚಲೋ ಕಂಪನಿಯ ಸಹ ಸಂಸ್ಥಾಪಕ ವಿನಾಯಕ್‌ ಭಾವ್ನಾನಿ ಕೂಡ ಗೋಷ್ಠಿಯಲ್ಲಿ ತಮ್ಮ ವಿಚಾರಗಳನ್ನು ಮಂಡಿಸಿದರು.

share
Next Story
X