Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮತದಾರರ ಪಟ್ಟಿ ಪರಿಷ್ಕರಣೆ ಎಂದರೆ...

ಮತದಾರರ ಪಟ್ಟಿ ಪರಿಷ್ಕರಣೆ ಎಂದರೆ ರಾಕಿಭಾಯ್ ನ ಸೇಡಿನ ಕತೆಯಲ್ಲ, ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ: ಸಿದ್ದರಾಮಯ್ಯ

18 Nov 2022 4:38 PM IST
share
ಮತದಾರರ ಪಟ್ಟಿ ಪರಿಷ್ಕರಣೆ ಎಂದರೆ ರಾಕಿಭಾಯ್ ನ ಸೇಡಿನ ಕತೆಯಲ್ಲ, ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ: ಸಿದ್ದರಾಮಯ್ಯ

ಬೆಂಗಳೂರು: 'ಆಪರೇಷನ್ ವೋಟರ್ ಹಗರಣವನ್ನು ಹಾಸ್ಯಾಸ್ಪದ ಎಂದು ತಳ್ಳಿಹಾಕಿರುವ ಮುಖ್ಯಮಂತ್ರಿಗಳು, ಈ ಹಗರಣದ ರೂವಾರಿಗಳನ್ನು ರಕ್ಷಿಸಲು, ಸಂಸ್ಥೆಯ ಒಬ್ಬ ಏಜೆಂಟನ ವಿರುದ್ಧ ಪೊಲೀಸರಿಂದ ಎಫ್ಐಆರ್ ಹಾಕಿಸಿ ತಮ್ಮ ಸರ್ಕಾರದ ಕೆಲಸ ಎಷ್ಟು ಹಾಸ್ಯಾಸ್ಪದ ಎನ್ನುವುದನ್ನು ಸಾಬೀತುಪಡಿಸಿದ್ದಾರೆ' ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬಸವರಾಜ ಬೊಮ್ಮಾಯಿ ವಿರುದ್ಧ ಕಿಡಿಕಾರಿದ್ದಾರೆ.  

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ , ''ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು "ಕೆಜಿಎಫ್" ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ, "ಕಾಂತಾರ" ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು'' ಎಂದು  ವಾಗ್ದಾಳಿ ನಡೆಸಿದ್ದಾರೆ. 

''ಮತದಾರರ ಪಟ್ಟಿ ಪರಿಷ್ಕರಣೆಯ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ವಿರುದ್ಧವೇ ನಾವು ದೂರು ನೀಡಿದ್ದೆವು. ಮುಖ್ಯಮಂತ್ರಿಗಳು 20,000 ರೂಪಾಯಿ ಸಂಬಳದ ಬಡಪಾಯಿ ಏಜೆಂಟನನ್ನು ಬಲಿಪಶು ಮಾಡಿ ತಾವು ಪಾರಾಗುವ ಸಂಚು ನಡೆಸಿದ್ದಾರೆ.   ಮುಖ್ಯಮಂತ್ರಿಗಳು ತಮ್ಮನ್ನು ರಕ್ಷಿಸಿಕೊಳ್ಳಲು ಆಪರೇಷನ್ ವೋಟರ್ ಹಗರಣವನ್ನು ಜಾತಿಗಣತಿಗೆ ಹೋಲಿಸಿದ್ದಾರೆ. ಒಂದು ಸಂಸ್ಥೆಯ ಹಿನ್ನೆಲೆಯನ್ನೂ ಪರಿಶೀಲಿಸದೆ ಮತದಾರರ ಪರಿಷ್ಕರಣೆಗೆ ನೀಡಿರುವ ಅನುಮತಿಗೂ, ಸುಪ್ರೀಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ನಡೆಸಿರುವ ಜಾತಿಗಣತಿಗೂ ಏನು ಸ್ವಾಮಿ ಸಂಬಂಧ?'' ಎಂದು ಪ್ರಶ್ನೆ ಮಾಡಿದ್ದಾರೆ.   

''ಉಚಿತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿರುವ ಚಿಲುಮೆ ಸಂಸ್ಥೆಯ ಹಿನ್ನೆಲೆ ಏನು? ಅದರ ಮಾಲೀಕರು ಯಾರು?  ಹಣಕಾಸು ಸಾಮರ್ಥ್ಯ ಏನು? ಉದ್ಯೋಗಿಗಳ ಸಂಖ್ಯೆ ಎಷ್ಟು? ಅದರ ಹಣಕಾಸಿನ ಮೂಲ ಯಾವುದು? ಈ ಬಗ್ಗೆ ತನಿಖೆಯಾಗಲಿ. ದೂರು ಬಂದ ಕಾರಣಕ್ಕೆ ಚಿಲುಮೆಗೆ ನೀಡಿರುವ ಅನುಮತಿಯನ್ನು ಬಿಬಿಎಂಪಿ ರದ್ದುಪಡಿಸಿರುವುದನ್ನು ಸ್ವಾಗತಿಸುತ್ತೇನೆ. ಮಾಡಿರುವ ಅಪರಾಧಕ್ಕೆ ಅನುಮತಿ ರದ್ದತಿ ಶಿಕ್ಷೆ ಅಲ್ಲವಲ್ಲಾ? ಗುತ್ತಿಗೆಯನ್ನು ರದ್ದುಗೊಳಿಸುವ ಮೂಲಕ ಆಗಿರುವ ಅಪರಾಧವನ್ನು ಇಲಾಖೆಯೇ ಒಪ್ಪಿಕೊಂಡಂತಾಗಿಲ್ಲವೇ?'' ಎಂದು ಪ್ರಶ್ನೆ ಮಾಡಿದ್ದಾರೆ.   

ಇದನ್ನೂ ಓದಿ: ನಾನು ಮೋದಿ ಭಕ್ತ, ಬಹಿರಂಗವಾಗಿ ಹೇಳಿಕೊಳ್ಳಲು ನನಗೆ ಯಾವುದೇ ಸಂಕೋಚವಿಲ್ಲ: ನಟ ಅನಂತ್ ನಾಗ್

''ಸಮಾಜ ಸೇವೆಗೆ ಬೇಕಾದಷ್ಟು ಅವಕಾಶ ಇರುವಾಗ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಉಚಿತವಾಗಿ ಮಾಡುತ್ತೇವೆ ಎಂದು ಸಂಸ್ಥೆ ಅರ್ಜಿ ನೀಡಿದಾಗಲೇ ಅದರ ಹಿಂದಿನ ದುರುದ್ದೇಶದ ಅರಿವು ಬಿಬಿಎಂಪಿಗೆ ಆಗಬೇಕಿತ್ತು. ಆಗಿಲ್ಲ ಎಂದರೆ ಬಿಬಿಎಂಪಿ ಹಗರಣದದಲ್ಲಿ ಭಾಗಿಯಾಗಿದೆ ಎಂದು ಅರ್ಥ ಅಲ್ಲವೇ?   ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಚಿಲುಮೆ ಸಂಸ್ಥೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಿದ್ದೀರಿ? ಆ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ ಏನಾಯಿತು? ಆ ಸಂಸ್ಥೆ ಬಿಬಿಎಂಪಿಗೆ ಸಲ್ಲಿಸಿದೆಯಾ? ಇಲ್ಲವೇ ಯಾವುದಾದರೂ ರಾಜಕೀಯ ಪಕ್ಷಕ್ಕೆ ಮಾರಿದೆಯಾ?'' ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.  

ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು. 8/8#OperationVoter

— Siddaramaiah (@siddaramaiah) November 18, 2022

ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಚಿಲುಮೆ ಸಂಸ್ಥೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಿದ್ದೀರಿ ಸರಿ, ಆದರೆ ಆ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ ಏನಾಯಿತು? ಆ ಸಂಸ್ಥೆ ಬಿಬಿಎಂಪಿಗೆ ಸಲ್ಲಿಸಿದೆಯಾ? ಇಲ್ಲವೇ ಯಾವುದಾದರೂ ರಾಜಕೀಯ ಪಕ್ಷಕ್ಕೆ ಮಾರಿದೆಯಾ? 7/8#OperationVoter

— Siddaramaiah (@siddaramaiah) November 18, 2022
share
Next Story
X