Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಬಾಲಕಿಯ ಅಪಹರಿಸಿ, ಅತ್ಯಾಚಾರ...

ಉಡುಪಿ: ಬಾಲಕಿಯ ಅಪಹರಿಸಿ, ಅತ್ಯಾಚಾರ ಪ್ರಕರಣ; ಆರೋಪಿಗೆ 10 ವರ್ಷ ಜೈಲುಶಿಕ್ಷೆ

18 Nov 2022 8:11 PM IST
share
ಉಡುಪಿ: ಬಾಲಕಿಯ ಅಪಹರಿಸಿ, ಅತ್ಯಾಚಾರ ಪ್ರಕರಣ; ಆರೋಪಿಗೆ 10 ವರ್ಷ ಜೈಲುಶಿಕ್ಷೆ

ಉಡುಪಿ, ನ.18: ಏಳು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಪೊಕ್ಸೋ ತ್ವರಿತ ವಿಶೇಷ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿ ಇಂದು ಆದೇಶ ನೀಡಿದೆ.

ಭರತ್ (30) ಶಿಕ್ಷೆಗೆ ಗುರಿಯಾದ ಆರೋಪಿ.

ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈತ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ಮತ್ತು ಮದುವೆ ಯಾಗುವುದಾಗಿ ನಂಬಿಸಿ ಪುಸಲಾಯಿಸಿ ಬಾಲಕಿ ಮನೆಯಲ್ಲಿ ಒಬ್ಬಳೇ ಇರುವಾಗ ಆಕೆಯ ಇಚ್ಛೆಯ ವಿರುದ್ಧವಾಗಿ ದೈಹಿಕ ಸಂಪರ್ಕ ನಡೆಸಿದ್ದನು. ನಂತರ ಆಕೆಯನ್ನು ಮನೆಯಿಂದ ಆಕೆಯ ಪಾಲಕರು ಮತ್ತು ಆಕೆಯ ಒಪ್ಪಿಗೆ ಇಲ್ಲದೆ ಕಾರಿನಲ್ಲಿ ಅಪಹರಿಸಿಕೊಂಡು ಬೆಂಗಳೂರು ಕಡೆಗೆ ಹೋಗಿದ್ದನು.

ದಾರಿ ಮಧ್ಯೆ ದೇವಸ್ಥಾನವೊಂದರ ಹೊರಗೆ ತಾನು ತಂದಿದ್ದ ಅರಶಿನ ದಾರ ವನ್ನು ಆಕೆಯ ಕೊರಳಿಗೆ ಕಟ್ಟಿ ನಮ್ಮ ಮದುವೆ ಆಗಿರುವುದಾಗಿ ತಿಳಿಸಿ ಬೆಂಗಳೂರಿನಲ್ಲಿ ರೂಮಿಗೆ ಕರೆದುಕೊಂಡು ಹೋಗಿದ್ದನು. ಆಕೆಯ ತಂದೆ ಬಾಲಕಿ ನಾಪತ್ತೆಯಾದ ಬಗ್ಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲಕಿ ಮತ್ತು ಆರೋಪಿಯನ್ನು ಬೆಂಗಳೂರಿನಲ್ಲಿ ಪತ್ತೆ  ಮಾಡಿ ಕರೆತಂದಿದ್ದರು.

ಬಾಲಕಿಯ ದೂರಿನಂತೆ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಮುಂದೆ ಆರೋಪಿ ಜಾಮೀನು ಪಡೆದು ಬಿಡುಗಡೆ ಗೊಂಡಿದ್ದನು. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯ ಆಗಿನ ಎಸ್ಸೈ ಸುಜಾತ ಸಾಲ್ಯಾನ್ ತನಿಖೆ ನಡೆಸಿದ್ದು, ಮುಂದುವರೆದ ತನಿಖೆಯನ್ನು ಆಗಿನ ಕುಂದಾಪುರ ವೃತ್ತ ನಿರೀಕ್ಷಕ ದಿವಾಕರ ಪಿ.ಎಂ. ನಡೆಸಿ, ಆರೋಪಿ ವಿರುದ್ಧ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.

ಒಟ್ಟು 21 ಸಾಕ್ಷಿಗಳ ಪೈಕಿ 20 ಸಾಕ್ಷಿದಾರರ ವಿಚಾರಣೆ ನಡೆಸಲಾಗಿದ್ದು, ಪ್ರಮುಖವಾಗಿ ನೊಂದ ಬಾಲಕಿಯ ಸಾಕ್ಷಿ ಆರೋಪಿ ದೋಷಿ ಎಂಬುದನ್ನು ಸಾಬೀತು ಪಡಿಸುವಲ್ಲಿ ಅಭಿಯೋಜನೆಗೆ ಸಹಕಾರಿಯಾಗಿತ್ತು. ಅಪ್ರಾಪ್ತ ಬಾಲಕಿಯ ಅಪಹರಣಕ್ಕೆ 3ವರ್ಷಗಳ ಜೈಲುಶಿಕ್ಷೆ, ಅತ್ಯಾಚಾರಕ್ಕೆ 10 ವರ್ಷ ಕಠಿಣ ಶಿಕ್ಷೆ ಮತ್ತು ಸರಕಾರದಿಂದ ಒಂದು ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆದೇಶ ನೀಡಿದ್ದಾರೆ. ಪ್ರಾಸಿಕ್ಯೂಶನ್ ಪರವಾಗಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದಿಸಿದ್ದರು.

share
Next Story
X