ನ.19ರಂದು ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆ; ಸಿಎಂ ಬೊಮ್ಮಾಯಿ ಭಾಗಿ

ಮಂಗಳೂರು, ನ.18: ದ.ಕ.ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಕೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕೆದಂಬಾಡಿ ರಾಮಯ್ಯ ಗೌಡರ ಸ್ಮಾರಕ ಸಮಿತಿ (ರಿ)ಯ ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಪ್ರತಿಮೆಯ ಲೋಕಾರ್ಪಣೆಯು ನಗರದ ಬಾವುಟಗುಡ್ಡೆಯಲ್ಲಿ ನ.19ರಂದು ಬೆಳಗ್ಗೆ 10:30ಕ್ಕೆ ಹಾಗೂ ಸಭಾಕಾರ್ಯಕ್ರಮ ಪೂ.11ಕ್ಕೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಮೆ ಲೋಕಾರ್ಪಣೆ ಮಾಡುವರು. ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಸಂದೇಶ ನೀಡುವರು. ದ.ಕ. ಜಿಲ್ಲಾಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಪ್ರವೇಶ ದ್ವಾರ ಉದ್ಘಾಟಿಸುವರು. ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಮೆ ಪೀಠದ ನಾಮಫಲಕ ಬಿಡುಗಡೆ ಮಾಡುವರು. ಶಾಸಕ ಡಿ. ವೇದವ್ಯಾಸ್ ಕಾಮತ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.
Next Story