ನ.19ರಂದು ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ

ಉಡುಪಿ: ಜಿಲ್ಲಾಡಳಿತ, ಜಿಪಂ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ನ.19ರಂದು ಬೆಳಗ್ಗೆ 9.30ಕ್ಕೆ ನಗರದ ಪುರಭವನದಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ಉಡುಪಿ ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ ಮತ್ತಿತರರು ಭಾಗವಹಿಸಲಿರುವರು.
Next Story