Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಜ್‍ಯಾತ್ರೆ-2023 | ಮಂಗಳೂರು...

ಹಜ್‍ಯಾತ್ರೆ-2023 | ಮಂಗಳೂರು ಎಂಬಾರ್ಕೇಷನ್ ಪಾಯಿಂಟ್ ಆರಂಭಕ್ಕೆ ಮನವಿ: ರವೂಫುದ್ದೀನ್ ಕಚೇರಿವಾಲೆ

19 Nov 2022 12:05 AM IST
share
ಹಜ್‍ಯಾತ್ರೆ-2023 | ಮಂಗಳೂರು ಎಂಬಾರ್ಕೇಷನ್ ಪಾಯಿಂಟ್ ಆರಂಭಕ್ಕೆ ಮನವಿ: ರವೂಫುದ್ದೀನ್ ಕಚೇರಿವಾಲೆ

ಬೆಂಗಳೂರು, ನ.18: ಕರ್ನಾಟಕದಿಂದ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಈ ಹಿಂದಿನಂತೆಯೇ ಮಂಗಳೂರು, ಹೈದರಾಬಾದ್ ಮತ್ತು ಗೋವಾ ಎಂಬಾರ್ಕೇಷನ್ ಪಾಯಿಂಟ್‍ಗಳನ್ನು ಪುನಃ ಸ್ಥಾಪಿಸುವಂತೆ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ರಾಜ್ಯ ಹಜ್ ಸಮಿತಿ ಅಧ್ಯಕ್ಷ ರವೂಫುದ್ದೀನ್ ಕಚೇರಿವಾಲೆ ತಿಳಿಸಿದರು.

ಶುಕ್ರವಾರ ನಗರದ ತಿರುಮೇನಹಳ್ಳಿ ಬಳಿಯಿರುವ ಹಜ್ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗೆ ಹೊಸದಿಲ್ಲಿಯಲ್ಲಿ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅಧ್ಯಕ್ಷತೆಯಲ್ಲಿ ನಡೆದ ಹಜ್‍ಯಾತ್ರೆ-2023ರ ಪರಿಶೀಲನಾ ಸಭೆಯಲ್ಲಿ ಚರ್ಚಿಸಲಾದ ಅಂಶಗಳ ಕುರಿತು ಮಾಹಿತಿ ನೀಡಿದರು.

ಹಜ್ ಯಾತ್ರೆಯ ವಿಮಾನಗಳ ನಿರ್ಗಮನದ ಸಮಯದಲ್ಲಿ ಒಂದು ಅಥವಾ ಎರಡು ವಿಮಾನಗಳೊಂದಿಗೆ 250-300 ಯಾತ್ರಿಕರ ಸಾಮಥ್ರ್ಯದ ವಿಮಾನಗಳ ಹಂಚಿಕೆ ಮಾಡುವಂತೆ ನೀಡಿದ ಸಲಹೆಯನ್ನು ಪರಿಶೀಲಿಸುವುದಾಗಿ ಕೇಂದ್ರ ಸಚಿವೆ ತಿಳಿಸಿದ್ದಾರೆ ಎಂದು ಅವರು ಹೇಳಿದರು.

ಹಜ್‍ಯಾತ್ರೆಗೆ ಆಯ್ಕೆಯಾದವರು ವೀಸಾಗಾಗಿ ಅಂತರ್‍ರಾಷ್ಟ್ರೀಯ ಪಾಸ್‍ಪೋರ್ಟ್‍ಗಳನ್ನು ರಾಜ್ಯದಿಂದ ಮುಂಬೈನ ಭಾರತೀಯ ಹಜ್ ಸಮಿತಿಗೆ ಸಲ್ಲಿಸುವ ಕ್ರಮವನ್ನು ತಪ್ಪಿಸಿ, ಆಯಾ ರಾಜ್ಯ ಹಜ್ ಸಮಿತಿಗಳ ಮೂಲಕವೆ ವೀಸಾವನ್ನು(ಆನ್‍ಲೈನ್‍ನಲ್ಲಿ ಲಭ್ಯವಿರುವ) ಪಡೆಯಲು ಅವಕಾಶ ನೀಡುವಂತೆ ಮನವಿ ಮಾಡಲಾಗಿದೆ ಎಂದು ರವೂಫುದ್ದೀನ್ ಕಚೇರಿವಾಲೆ ತಿಳಿಸಿದರು.

2022ನೆ ಸಾಲಿನ ಹಜ್ ಯಾತ್ರೆ ಸಂದರ್ಭದಲ್ಲಿ ಯಾತ್ರಾರ್ಥಿಗಳಿಗೆ ಕಳಪೆ ಗುಣಮಟ್ಟದ ಸೂಟ್‍ಕೇಸ್‍ಗಳನ್ನು ವಿತರಿಸಿದ ಏಜೆನ್ಸಿಯ ವಿರುದ್ಧ ತನಿಖೆ ನಡೆಸುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ. ಅಲ್ಲದೆ, ಮುಂದಿನ ವರ್ಷದಿಂದ ಯಾತ್ರಾರ್ಥಿಗಳಿಗೆ ಸೂಟ್‍ಕೇಸ್‍ಗಳನ್ನು ವಿತರಿಸುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ ಎಂದು ಅವರು ಹೇಳಿದರು.

ಕಳೆದ ಬಾರಿ ಹಜ್ ಯಾತ್ರಾರ್ಥಿಗಳಿಗೆ ವಿತರಿಸಲಾದ ಮೊಬೈಲ್ ಸಿಮ್ ಕಾರ್ಡ್‍ಗಳು ಅನೇಕ ಸಮಸ್ಯೆಗಳನ್ನು ಹೊಂದಿದ್ದವು ಎಂದು ಅಭಿಪ್ರಾಯಪಟ್ಟ ಸ್ಮøತಿ ಇರಾನಿ, ಅಂತರ್‍ರಾಷ್ಟ್ರೀಯ ರೋಮಿಂಗ್ ಸೌಲಭ್ಯವನ್ನು ಹೊಂದಿರುವ ಭಾರತದ ಯಾವುದೇ ಕಂಪನಿಯ ಮೊಬೈಲ್ ಸಿಮ್ ಕಾರ್ಡ್‍ಗಳನ್ನು ಯಾತ್ರಾರ್ಥಿಗಳಿಗೆ ವಿತರಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ ಎಂದು ರವೂಫುದ್ದೀನ್ ಕಚೇರಿವಾಲೆ ತಿಳಿಸಿದರು.

ಮಕ್ಕಾ ಮತ್ತು ಮದೀನಾ ನಗರಗಳಲ್ಲಿ ಹಜ್ ಯಾತ್ರಾರ್ಥಿಗಳಿಗೆ ನೀಡಲಾಗುವ ವಸತಿ ಸೌಕರ್ಯದ ಆಯ್ಕೆ ಮತ್ತು ಹಂಚಿಕೆಯ ವಿಷಯದಲ್ಲಿ ರಾಜ್ಯ ಹಜ್ ಸಮಿತಿಗಳ ಪಾತ್ರವಿರುತ್ತದೆ. ಸೌದಿ ಅರೇಬಿಯಾದಲ್ಲಿ ಯಾತ್ರಾರ್ಥಿಗಳು ತಂಗಿರುವ ಸಮಯದಲ್ಲಿ ಆಹಾರ ಪೂರೈಸುವ ಕಾರ್ಯಕ್ರಮವನ್ನು ರೂಪಿಸಬೇಕೆಂದು ಸ್ಮøತಿ ಇರಾನಿ ತಿಳಿಸಿದ್ದಾರೆ ಎಂದು ಅವರು ಹೇಳಿದರು.

ಹಜ್ ಯಾತ್ರಿಕರು ತಮ್ಮ ಅಗತ್ಯಕ್ಕೆ ಅನುಗುಣವಾಗಿ ಅಗತ್ಯವಾದ ವಿದೇಶಿ ಕರೆನ್ಸಿಯನ್ನು ಭಾರತದಲ್ಲಿ ಸಂಗ್ರಹಿಸಬಹುದು. ಈ ವಿಷಯದ ಕುರಿತು ಪರಿಶೀಲಿಸಲಾಗುವುದು. ಆಯ್ಕೆಯಾದ ಯಾತ್ರಾರ್ಥಿಗಳಿಗೆ ರಾಜ್ಯವಾರು ಲಸಿಕೆಯನ್ನು ವಿತರಿಸುವ ವಿಷಯದ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಸಚಿವರು ಭರವಸೆ ನೀಡಿದರು ಎಂದು ಅವರು ತಿಳಿಸಿದರು.

ಯಾತ್ರಿಗಳ ಸೇವೆಗಾಗಿ ನಿಯೋಜಿಸುವ ಖಾದಿಮುಲ್ ಹುಜ್ಜಾಜ್‍ಗಳಲ್ಲಿ ಪುನರಾವರ್ತಿತರ ಬದಲಿಗೆ ಕಡ್ಡಾಯವಾಗಿ ತರಬೇತಿಗೆ ಒಳಪಟ್ಟ ಹೊಸಬರನ್ನು ನಿಯೋಜಿಸುವ ಕುರಿತು ಹಾಗೂ ರಾಜ್ಯ ಹಜ್ ಸಮಿತಿ ಸದಸ್ಯರನ್ನೊಳಗೊಂಡಂತೆ ಖಾಸಗಿ ವ್ಯಕ್ತಿಗಳನ್ನು ನಿಯೋಜಿಸುವ ಕುರಿತು ಸಲಹೆ ನೀಡಿದ್ದು, ಈ ಕುರಿತು ಪರಿಶೀಲಿಸುವುದಾಗಿ ತಿಳಿಸಿದ್ದಾರೆ ಎಂದು ಅವರು ಹೇಳಿದರು.

ಕಲಬುರಗಿಯಲ್ಲಿ ಹಜ್ ಭವನ ನಿರ್ಮಾಣಕ್ಕಾಗಿ ಹಾಗೂ ಬೆಂಗಳೂರಿನ ಹಜ್ ಭವನದ ಉಳಿದ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುದಾನ ನೀಡಬೇಕೆಂದು ಮನವಿ ಸಲ್ಲಿಸಲಾಗಿದೆ. 2023ನೆ ಸಾಲಿನ ಹಜ್ ಯಾತ್ರೆಗೆ ನವೆಂಬರ್ ತಿಂಗಳ ಕೊನೆಯ ವಾರದಲ್ಲಿ ಅರ್ಜಿಗಳನ್ನು ಆಹ್ವಾನಿಸುವ ಸಾಧ್ಯತೆಯಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಮಕ್ಕಾ ಮತ್ತು ಮದೀನಾದಲ್ಲಿ ಹಜ್ ಯಾತ್ರಾರ್ಥಿಗಳಿಗೆ ಸೌಲಭ್ಯಗಳು ಉತ್ತಮವಾಗಿರುತ್ತವೆ ಎಂದು ರವೂಫುದ್ದೀನ್ ಕಚೇರಿವಾಲೆ ತಿಳಿಸಿದರು.

ಬೆಂಗಳೂರಿನ ಹಜ್ ಭವನವು 2 ರಿಂದ 3 ಹಾಲ್‍ಗಳನ್ನು ಹಾಗೂ ಸಾಕಷ್ಟು ಕೊಠಡಿಗಳನ್ನು ಹೊಂದಿದ್ದು. ಸೆಮಿನಾರ್‍ಗಳು, ಸಮ್ಮೇಳನಗಳು ಹಾಗೂ ಇನ್ನಿತರೆ ಕಾರ್ಯಕ್ರಮಗಳಿಗೆ ಬಾಡಿಗೆಗೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಹಜ್ ಸಮಿತಿಯ ಸದಸ್ಯರಾದ ಡಾ.ಮುಹಮ್ಮದ್ ಕಬೀರ್ ಅಹ್ಮದ್, ಮೊಯಿನುದ್ದೀನ್ ಮತ್ತು ಚಾಂದ್ ಪಾಷಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
Next Story
X