ಮಂಗಳೂರು: 'ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ' ಸಿಎಂ ಬೊಮ್ಮಾಯಿ ಲೋಕಾರ್ಪಣೆ
ರಾಮಯ್ಯ ಗೌಡರು ಶ್ರೇಷ್ಠ ಕ್ರಾಂತಿಕಾರಿ ಪುರುಷ: ಬೊಮ್ಮಾಯಿ

ರಾಮಯ್ಯ ಗೌಡರು ಶ್ರೇಷ್ಠ ಕ್ರಾಂತಿಕಾರಿ ಪುರುಷ: ಬೊಮ್ಮಾಯಿ
ಮಂಗಳೂರು: ಮಂಗಳೂರಿನ ಬಾವುಟಗುಡ್ಡೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಶೌರ್ಯ ಪ್ರತಿಮೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಶನಿವಾರ ಲೋಕಾರ್ಪಣೆ ಮಾಡಿದರು.
ದ.ಕ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಸಹಭಾಗಿತ್ವದಲ್ಲಿ ಅನಾವರಣ ಮಾಡಲಾಯಿತು.
ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದ ಮಹಾ ಸ್ವಾಮೀಜಿ, ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗಿ, ಸಚಿವರಾದ ಎಸ್.ಅಂಗಾರ, ಅಶ್ವಥ್ ನಾರಾಯಣ್, ಜಿಲ್ಲೆಯ ಶಾಸಕರು ಹಾಜರಿದ್ದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಯ್ಯ ಗೌಡರು ಶ್ರೇಷ್ಠ ಕ್ರಾಂತಿಕಾರಿ ಪುರುಷ. ರಾಮಯ್ಯ ಗೌಡರಂತಹ ನಿರಂತರ ಹೋರಾಟದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದ್ದು, 1837 ರಲ್ಲಿಯೇ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಮರವೀರ ಎಂದರು.










