Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: 9 ಜಿಲ್ಲೆಗಳ 54 ಸಹಕಾರಿಗಳಿಗೆ...

ಬೆಂಗಳೂರು: 9 ಜಿಲ್ಲೆಗಳ 54 ಸಹಕಾರಿಗಳಿಗೆ 'ಸಹಕಾರ ರತ್ನ' ಪ್ರಶಸ್ತಿ ಪ್ರದಾನ

19 Nov 2022 3:34 PM IST
share
ಬೆಂಗಳೂರು: 9 ಜಿಲ್ಲೆಗಳ 54 ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ

ಬೆಂಗಳೂರು, ನ.19: ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಬೆಂಗಳೂರು ವಿಭಾಗದ 9 ಜಿಲ್ಲೆಗಳ 54 ಸಹಕಾರಿಗಳಿಗೆ 'ಸಹಕಾರ ರತ್ನ' ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ಹಮ್ಮಿಕೊಂಡಿದ್ದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಕಾರ್ಯಕ್ರಮ ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಿದರು.  ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಗೋಪೂಜೆ ನೆರವೇರಿಸಿ ಸಹಕಾರಿ ಧ್ವಜಾರೋಹಣ ಮಾಡಿದರು.

ಇದೇ ವೇಳೆ ಯಶಸ್ವಿನಿ ಯೋಜನೆಯ ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಿಸಲಾಯಿತು. ಬಳಿಕ ಸಹಕಾರ ಪತ್ರಿಕೆ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಸಹಕಾರ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಹಕಾರ ಕ್ಷೇತ್ರದಲ್ಲಿ ಉತ್ತಮ ಕಾರ್ಯ ಮಾಡುತ್ತಿದ್ದಾರೆ ಎಂದರು.

ಮೈಸೂರು ಉಸ್ತುವಾರಿ ಸಚಿವರಾಗಿ ಸೋಮಶೇಖರ್ ಅವರು ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ವಿಶ್ವವಿಖ್ಯಾತ ಮೈಸೂರು ದಸರಾಗೆ ವಿಶೇಷ ಮೆರುಗು ನೀಡಿದವರು ಎಂದು ಸೋಮಶೇಖರ್ ಅವರ ಕಾರ್ಯವೈಖರಿಯನ್ನು ಕೊಂಡಾಡಿದರು.

ಸಹಕಾರ ಕ್ಷೇತ್ರ ಬಹಳ ದೊಡ್ಡ ಕ್ಷೇತ್ರ. ಸಹಕಾರಿ ರತ್ನ ಪ್ರಶಸ್ತಿ ಪಡೆದ ಹಿರಿಯರು, ಸಹಕಾರಿ ಕ್ಷೇತ್ರದ ಏಳಿಗೆಗೆ ಅಪಾರವಾಗಿ ಶ್ರಮಿಸಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿನ ಸವಾಲುಗಳನ್ನು ಮೆಟ್ಡಿನಿಂತು ಜನಜೀವನಕ್ಕೆ ಬೇಕಾದ ಕೊಡುಗೆಗಳನ್ನು ಕೊಡಲು ಸಹಕಾರಿ ಸಪ್ತಾಹ ಕಾರ್ಯಕ್ರಮ ಸಹಕಾರಿಯಾಗಲಿ ಎಂದರು.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಉತ್ತಮ ಸಲಹೆಗಳನ್ನು ನೀಡಲು ಈ ಸಹಕಾರ ಸಪ್ತಾಹ ಕಾರ್ಯಕ್ರಮ ಸಾಕ್ಷಿಯಾಗಬೇಕು. ಸಹಕಾರಿ ಸಂಘಗಳು ಜನತೆಯ ವಿಶ್ವಾಸ ಗಳಿಸುವುದರ ಜೊತೆಗೆ ಭಾವನಾತ್ಮಕ ಸಂಬಂಧ ಹೊಂದಿವೆ ಎಂದು ಹೇಳಿದರು.

ಸಹಕಾರಿ ಸಂಘಗಳಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ, ರಾಜ್ಯದ 6 ಸಾವಿರಕ್ಕಿಂತ ಹೆಚ್ಚು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣ, ಬೀದಿಬದಿ ವ್ಯಾಪಾರಿಗಳಿಗೆ ಆರ್ಥಿಕ ಸಹಾಯ, ಯಶಸ್ವಿನಿ ಯೋಜನೆ ಮರುಜಾರಿ, 33 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂ. ಸಾಲ ವಿತರಣೆಗೆ ಸೋಮಶೇಖರ್ ಅವರು ಸಾಕಷ್ಟು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ಯಶವಂತಪುರ ಕ್ಷೇತ್ರದಲ್ಲಿಯೂ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. 209 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಸ್ತೆ, ಮೂಲ ಸೌಕರ್ಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಮಂಚನಬೆಲೆಯಿಂದ ಕುಡಿಯುವ ನೀರು ಕಲ್ಪಿಸುವ ಭಗೀರಥ ಪ್ರಯತ್ನ ಮಾಡಿದ್ದಾರೆ ಎಂದರು.

ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಾತನಾಡಿ, ನ.14 ರಿಂದ 20ರವರೆಗೆ ಪ್ರತಿ ವರ್ಷ ಏಳು ದಿನಗಳ ಕಾಲ ಸಹಕಾರ ಸಪ್ತಾಹ ಆಚರಣೆ ಮಾಡಲಾಗುತ್ತದೆ. 20 ವರ್ಷಕ್ಕೂ ಹೆಚ್ಚು ಕಾಲದಿಂದ ಸಹಕಾರ ಸಪ್ತಾಹ ಮಾಡಿಕೊಂಡು ಬಂದಿದ್ದೇನೆ. ಸಹಕಾರ ಮಹಾಮಂಡಳ ಮಾತೃ ಸಂಸ್ಥೆಯಾಗಿ ಕೆಲಸ ಮಾಡುತ್ತಿದೆ. ಸಹಕಾರಿ ಕ್ಷೇತ್ರವನ್ನು ಮುನ್ನಡೆಸುವಲ್ಲಿ ಜಿ.ಟಿ.ದೇವೇಗೌಡ ಅವರು ಸಾಕಷ್ಟು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಹಕಾರದಿಂದ ಸಹಕಾರ ಸಚಿವರಾಗಿ ಕೆಲಸ ಮಾಡುತ್ತಿದ್ದೇನೆ. ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಅತಿಹೆಚ್ಚು ಸಾಲ ನೀಡಿದ್ದು ಬಸವರಾಜ್ ಬೊಮ್ಮಾಯಿ ಅವರ ಸರ್ಕಾರ. 5700 ಕೋಟಿ ರೂ. ಸಾಲಮನ್ನಾ ಮಾಡಿದ್ದು ನಮ್ಮ ನೆಚ್ಚಿನ ನಾಯಕರಾದ ಬಿ.ಎಸ್. ಯಡಿಯೂರಪ್ಪ ಅವರು ಎಂದರು.

ಸಾಲಮನ್ನಾಕ್ಕಾಗಿ ಬಜೆಟ್ ನಲ್ಲಿ ಹಣ ಒದಗಿಸಿ ಐತಿಹಾಸಿಕ ತೀರ್ಮಾನ ಮಾಡಿದ್ದು ಯಡಿಯೂರಪ್ಪ ಅವರು. ಕಾಂಗ್ರೆಸ್ ಸರ್ಕಾರ ಯಶಸ್ವಿನಿ ಯೋಜನೆಯನ್ನು ರದ್ದು ಮಾಡಿತು. ಆದರೆ  ಬಿಜೆಪಿ ಸರ್ಕಾರ ಅದನ್ನು ಮರುಜಾರಿ ಮಾಡಿದೆ. ಈ ಮೂಲಕ ಲಕ್ಷಾಂತರ ರೈತರಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.

ಹಾಲು ಪೂರೈಸುವ ರೈತರಿಗೆ ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಮುಖಾಂತರ

ಸಾಲಸೌಲಭ್ಯ ಕಲ್ಪಿಸಲಾಗುವುದು. ಕ್ಷೇತ್ರದ ಜನತೆಯ ಪ್ರೀತಿ, ವಿಶ್ವಾಸದಿಂದ ಶಾಸಕರಾಗಿ ಆಯ್ಕೆಯಾಗಿ, ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮೈಸೂರು ಉಸ್ತುವಾರಿ ಸಚಿವರಾಗಿ ಯಶಸ್ವಿಯಾಗಿ ದಸರಾ ಆಚರಣೆ ಮಾಡಲಾಯಿತು. ಸರ್ಕಾರ, ಪಕ್ಷಕ್ಕೆ ಮುಜಗರವಾಗದಂತೆ ಕೆಲಸ ಮಾಡಿದ್ದೇನೆ. ಯಶವಂತಪುರ ಜನತೆಯ ಪ್ರೀತಿ ವಿಶ್ವಾಸ ಉಳಿಸಿಕೊಂಡಿದ್ದೇನೆ. ದ್ವೇಷದ ರಾಜಕಾರಣ ಮಾಡಿಲ್ಲ, ಮಾಡುವುದಿಲ್ಲ ಎಂದರು.

ಕ್ಷೇತ್ರದ ಡಾಂಬರೀಕರಣಕ್ಕೆ 200 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ರಾಜಕಾಲುವೆ ಸಮಸ್ಯೆ ಬಗೆಹರಿಸಲು 120 ಕೋಟಿ ಅನುದಾನ ಬಿಡುಗಡೆ ಆಗಿದೆ. ವಿಶ್ವೇಶ್ವರಯ್ಯ, ಬನಶಂಕರಿ 6ನೇ ಹಂತದ ಅಭಿವೃದ್ಧಿಗೆ 208 ಕೋಟಿ ಹಣ ಬಿಡುಗಡೆಯಾಗಿದೆ. ಕಾವೇರಿ ನೀರು ಪೂರೈಕೆ ಕಾಮಗಾರಿ ಆರಂಭವಾಗಿದೆ. ಮಂಚನಬೆಲೆಯಿಂದ 72 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ ಕಾಮಗಾರಿ ಕೈಗೆತ್ತುಕೊಳ್ಳಲಾಗಿದೆ ಎಂದು ಹೇಳಿದರು.

ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಜಿ.ಟಿ.ದೇವೇಗೌಡ ಅವರು ಮಾತನಾಡಿದರು.

share
Next Story
X