Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೌದಿ ಯುವರಾಜರಿಗೆ ನೀಡಿರುವ...

ಸೌದಿ ಯುವರಾಜರಿಗೆ ನೀಡಿರುವ ವಿನಾಯಿತಿಯನ್ನು 2014ರಲ್ಲಿ ಪ್ರಧಾನಿ ಮೋದಿಗೂ ನೀಡಲಾಗಿತ್ತು: ಅಮೆರಿಕ

19 Nov 2022 7:44 PM IST
share
ಸೌದಿ ಯುವರಾಜರಿಗೆ ನೀಡಿರುವ ವಿನಾಯಿತಿಯನ್ನು 2014ರಲ್ಲಿ ಪ್ರಧಾನಿ ಮೋದಿಗೂ ನೀಡಲಾಗಿತ್ತು: ಅಮೆರಿಕ

ಹೊಸದಿಲ್ಲಿ,ನ.19: ಇತ್ತೀಚಿಗೆ ಸೌದಿ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಅವರಿಗೆ ಕಾನೂನು ಕ್ರಮದ ವಿರುದ್ಧ ನೀಡಲಾಗಿರುವ ರಕ್ಷಣೆಯನ್ನು 2014ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೂ ನೀಡಲಾಗಿತ್ತು ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರರು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮೆರಿಕ ವಿದೇಶಾಂಗ ಇಲಾಖೆಯ ಪ್ರಧಾನ ಉಪ ವಕ್ತಾರ ವೇದಾಂತ ಪಟೇಲ್ ಅವರು,ಪತ್ರಕರ್ತ ಜಮಾಲ್ ಖಶೋಗಿಯವರ ಬರ್ಬರ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಸೌದಿ ಯುವರಾಜರಿಗೆ ನೀಡಲಾಗಿರುವ ವಿನಾಯಿತಿಯ ಕುರಿತು ಪ್ರಶ್ನೆಗೆ ಇಂತಹುದೇ ರಕ್ಷಣೆಯನ್ನು ಪಡೆದವರಲ್ಲಿ ಪ್ರಧಾನಿ ಮೋದಿಯವರೂ ಸೇರಿದ್ದಾರೆ ಎಂದು ತಿಳಿಸಿದರು.         

‘ಅಮೆರಿಕ ಹೀಗೆ ಮಾಡಿರುವುದು ಇದೇ ಮೊದಲೇನಲ್ಲ. ಅದು ದೀರ್ಘಕಾಲಿಕ ಮತ್ತು ನಿರಂತರ ಪ್ರಯತ್ನವಾಗಿದ್ದು,ಈ ಹಿಂದೆ ಹಲವಾರು ದೇಶಗಳ ಮುಖ್ಯಸ್ಥರಿಗೆ ಅದನ್ನು ಅನ್ವಯಿಸಲಾಗಿದೆ. ಉದಾಹರಣೆಗೆ 1993ರಲ್ಲಿ ಹೈಟಿ ಅಧ್ಯಕ್ಷ ಅರಿಸ್ಟಿಡ್,2001ರಲ್ಲಿ ಝಿಂಬಾಬ್ವೆ ಅಧ್ಯಕ್ಷ ಮುಗಾಬೆ,2014ರಲ್ಲಿ ಭಾರತದ ಪ್ರಧಾನಿ ಮೋದಿ ಮತ್ತು 2018ರಲ್ಲಿ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ (ಡಿಆರ್ಸಿ)ದ ಅಧ್ಯಕ್ಷ ಕಬಿಲಾ ಅವರಿಗೆ ಇಂತಹ ವಿನಾಯಿತಿ ನೀಡಲಾಗಿತ್ತು. 

ಇದು ದೇಶಗಳ ಮುಖ್ಯಸ್ಥರಿಗೆ,ಸರಕಾರಗಳ ಮುಖ್ಯಸ್ಥರಿಗೆ ಮತ್ತು ವಿದೇಶಿ ಸಚಿವರಿಗೆ ನಾವು ವಿನಾಯಿತಿ ನೀಡುವ ನಿರಂತರ ವಾಡಿಕೆಯಾಗಿದೆ ’ ಎಂದರು. ಪಟೇಲ್ ಹೇಳಿಕೆಗೆ ಭಾರತವಿನ್ನೂ ಪ್ರತಿಕ್ರಿಯಿಸಬೇಕಿದೆ. 2002ರಲ್ಲಿ ಮೋದಿಯವರು ಗುಜರಾತ ಮುಖ್ಯಮಂತ್ರಿಯಾಗಿದ್ದಾಗ ಅಲ್ಲಿ ಸಂಭವಿಸಿದ್ದ ಗಲಭೆಗಳನ್ನು ನಿಲ್ಲಿಸಲು ಅವರ ಸರಕಾರವು ಯಾವುದೇ ಪ್ರಯತ್ನವನ್ನು ಮಾಡಿರಲಿಲ್ಲ ಎಂಬ ಆರೋಪದಲ್ಲಿ ಅಮೆರಿಕ 2005ರಲ್ಲಿ ಅವರನ್ನು ವೀಸಾ ನಿಷೇಧ ಪಟ್ಟಿಯಲ್ಲಿರಿಸಿತ್ತು.

ಬ್ರಿಟನ್ ಮತ್ತು ಐರೋಪ್ಯ ಒಕ್ಕೂಟ ಮೋದಿ ವಿರುದ್ಧ ತಮ್ಮ ಬಹಿಷ್ಕಾರವನ್ನು ಅಂತ್ಯಗೊಳಿಸಿದ್ದರೂ 2014ರಲ್ಲಿ ಅವರು ಪ್ರಧಾನಿಯಾಗಿ ಆಯ್ಕೆಯಾಗುವವರೆಗೂ ಅಮೆರಿಕವು ತನ್ನ ನೀತಿಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸಮರ್ಥಿಸಿಕೊಂಡಿತ್ತು.

ಗುಜರಾತ ಗಲಭೆಗಳಿಗೆ ಸಂಬಂಧಿಸಿದಂತೆ ಮೋದಿಯವರಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಗುಜರಾತ ಹತ್ಯೆಗಳಿಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಅವರನ್ನು ದೋಷಮುಕ್ತಗೊಳಿಸಿದ್ದನ್ನು ಪ್ರಶ್ನಿಸಿದ್ದ ಮೇಲ್ಮನವಿಯನ್ನು ಸರ್ವೋಚ್ಚ ನ್ಯಾಯಾಲಯವು ಈ ವರ್ಷದ ಪೂರ್ವಾರ್ಧದಲ್ಲಿ ತಿರಸ್ಕರಿಸಿತ್ತು.

share
Next Story
X