Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈ: ಎರಡು ಮಾರ್ಗಗಳಲ್ಲಿ ಲೋಕಲ್...

ಮುಂಬೈ: ಎರಡು ಮಾರ್ಗಗಳಲ್ಲಿ ಲೋಕಲ್ ರೈಲುಗಳು 27 ಗಂಟೆ ಸ್ಥಗಿತ, 37 ಲಕ್ಷ ಜನರಿಗೆ ಪರದಾಟ

19 Nov 2022 8:14 PM IST
share
ಮುಂಬೈ: ಎರಡು ಮಾರ್ಗಗಳಲ್ಲಿ ಲೋಕಲ್ ರೈಲುಗಳು 27 ಗಂಟೆ ಸ್ಥಗಿತ, 37 ಲಕ್ಷ ಜನರಿಗೆ ಪರದಾಟ

ಮುಂಬೈ,ನ.19: ದಕ್ಷಿಣ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ (ಸಿಎಸ್ಎಂಟಿ) ಮತ್ತು ಮಸ್ಜಿದ್ ರೈಲು ನಿಲ್ದಾಣದ ನಡುವಿನ ಬ್ರಿಟಿಷರ ಕಾಲದ ಕಾರ್ನಾಕ್ ಸೇತುವೆಯನ್ನು ಕಳಚಲು ಮುಂದಾಗಿರುವ ಮಧ್ಯ ರೈಲ್ವೆಯು ಶನಿವಾರ ರಾತ್ರಿ 11 ಗಂಟೆಯಿಂದ ಸೋಮವಾರ ನಸುಕಿನ ಎರಡು ಗಂಟೆಯವರೆಗೆ 27 ಗಂಟೆಗಳ ಕಾಲ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಿದೆ.

ಇದರಿಂದಾಗಿ ಈ ಅವಧಿಯಲ್ಲಿ ಸಬರ್ಬನ್ ಮತ್ತು ಎಕ್ಸ್ ಪ್ರೆಸ್ ರೈಲುಗಳ ವೇಳಾಪಟ್ಟಿಯಲ್ಲಿ ವ್ಯತ್ಯಯವಾಗಲಿದೆ ಎಂದು ಮಧ್ಯ ರೈಲ್ವೆಯು ಹೇಳಿಕೆಯಲ್ಲಿ ತಿಳಿಸಿದೆ.

ಈ ವಿಶೇಷ ತಡೆಯಿಂದಾಗಿ ಲೋಕಲ್ ರೈಲುಗಳ 37 ಲ.ಕ್ಕೂ ಅಧಿಕ ನಿತ್ಯ ಪ್ರಯಾಣಿಕರು ಮತ್ತು ಹೊರಗಿನಿಂದ ಆಗಮಿಸುವ ಪ್ರಯಾಣಿಕರು ತೊಂದರೆಗೆ ಒಳಗಾಗುವ ಸಾಧ್ಯತೆಯಿದೆ. ಸಿಎಸ್ಎಂಟಿಯಿಂದ ಆರಂಭಗೊಳ್ಳುವ ‘ಹಾರ್ಬರ್’ ಮತ್ತು ‘ಮೇನ್’ ಲೈನ್ಗಳನ್ನೊಳಗೊಂಡ ಮಧ್ಯ ರೈಲ್ವೆಯ ಸಬರ್ಬನ್ ಜಾಲದಲ್ಲಿ 1,800ಕ್ಕೂ ಅಧಿಕ ಲೋಕಲ್ ರೈಲುಗಳು ಕಾರ್ಯಾಚರಿಸುತ್ತಿವೆ.

1866-67ರಲ್ಲಿ ನಿರ್ಮಾಣಗೊಂಡಿದ್ದ ಕಾರ್ನಾಕ್ ಸೇತುವೆಯ ಮೇಲೆ ಘನವಾಹನಗಳ ಸಂಚಾರವನ್ನು 2014ರಲ್ಲಿಯೇ ನಿಲ್ಲಿಸಲಾಗಿತ್ತಾದರೂ,2018ರಲ್ಲಿ ಐಐಟಿ-ಬಾಂಬೆಯ ತಜ್ಞರ ತಂಡವು ಸೇತುವೆಯನ್ನು ಅಸುರಕ್ಷಿತವೆಂದು ಘೋಷಿಸಿತ್ತು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದರು.

ಸೇತುವೆಯು ರಸ್ತೆ ಸಂಚಾರಕ್ಕೆ ಅಸುರಕ್ಷಿತವಾಗಿದೆ ಎಂದು ಈ ವರ್ಷದ ಸೆಪ್ಟಂಬರ್ ನಲ್ಲಿ ಘೋಷಿಸಲಾಗಿತ್ತು. ಕಬ್ಬಿಣದ ಸೇತುವೆಯ ಹೆಚ್ಚಿನ ಭಾಗವನ್ನು ಈಗಾಗಲೇ ನೆಲಸಮಗೊಳಿಸಲಾಗಿದೆ,ಹೀಗಾಗಿ ರೈಲುಗಳ ಸ್ಥಗಿತ ಅವಧಿಯಲ್ಲಿ ರೈಲ್ವೆ ಮೇಲ್ಸೇತುವೆಯ ಕಬ್ಬಿಣದ ರಚನೆಯನ್ನು ಮಾತ್ರ ತುಂಡರಿಸಿ ಕ್ರೇನ್ಗಳ ಮೂಲಕ ತೆಗೆಯಲಾಗುತ್ತದೆ ಎಂದು ಮಧ್ಯ ರೈಲ್ವೆಯು ಹೇಳಿಕೆಯಲ್ಲಿ ತಿಳಿಸಿದೆ.

ಹಿರಿಯ ರೈಲ್ವೆ ಅಧಿಕಾರಿಗಳು ಶುಕ್ರವಾರ ನೆಲಸಮ ಕಾರ್ಯಾಚರಣೆಯನ್ನು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.

ಪಾರಂಪರಿಕ ಸೇತುವೆಯು ನಿರ್ಮಾಣ ವರ್ಷವನ್ನು ಉಲ್ಲೇಖಿಸಿರುವ ಕೆತ್ತನೆಗಳಿರುವ ಆರು ಶಿಲೆಗಳನ್ನು ಹೊಂದಿದ್ದು, ಅವುಗಳನ್ನು ಸೂಕ್ತ ಸ್ಥಳದಲ್ಲಿ ಸಂರಕ್ಷಿಸಿಡಲಾಗುವುದು ಎಂದು ಮಧ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಶಿವಾಜಿ ಸುತಾರ ತಿಳಿಸಿದರು.

share
Next Story
X