ಯುವಕ ನಾಪತ್ತೆ

ಉಡುಪಿ, ನ.19: ಪುತ್ತೂರು ಗ್ರಾಮದ ನಿಟ್ಟೂರು ನಿವಾಸಿ ದ್ಯಾಮಣ್ಣಜಿಗರೆ (28) ಎಂಬವರು ಅ.30ರಂದು ಸಂಜೆ ಮನೆಯಿಂದ ಹೊರಗೆ ಹೋದವರು ಈವರೆಗೆ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
170 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸ ಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Next Story





