ಉಪ್ಪಿನಂಗಡಿ: ವಿದ್ಯಾರ್ಥಿನಿಗೆ ಬಸ್‍ನಲ್ಲಿ ಕಿರುಕುಳ; ಆರೋಪಿ ಸೆರೆ

ಉಪ್ಪಿನಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಉಪ್ಪಿನಂಗಡಿಯಲ್ಲಿ ಶನಿವಾರ ನಡೆದಿದೆ.
ಪೆರ್ನೆ ಗ್ರಾಮದ ನಿವಾಸಿ ಅಶ್ರಫ್ (45) ಬಂಧಿತ ಆರೋಪಿ.
ಬೆಂಗಳೂರಿನಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಬಸ್ಸಿನಲ್ಲಿ ನೆಲ್ಯಾಡಿಯಿಂದ ಮಂಗಳೂರಿನತ್ತ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಈತ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಲಾಗಿದೆ.
ಕಲಿಕಾ ಪ್ರಕ್ರಿಯೆಗೆ ಅಡಚಣೆಯಾಗುವ ಭೀತಿಯಿಂದ ವಿದ್ಯಾರ್ಥಿನಿ ದೂರು ನೀಡಲು ನಿರಾಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದು, ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಪೊಲೀಸರು ಈತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story