ಮಂಗಳೂರು | ಚಲಿಸುತ್ತಿದ್ದ ಆಟೊ ರಿಕ್ಷಾದಲ್ಲಿ ನಿಗೂಢ ಸ್ಫೋಟ ಪ್ರಕರಣ: ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದು ಹೀಗೆ...

ಬೆಂಗಳೂರು: ನಿನ್ನೆ ನಡೆದ ಸ್ಫೋಟ ಪ್ರಕರಣದ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಮಂಗಳೂರಿನ ಪೊಲೀಸರು ಕೇಂದ್ರ ತನಿಖಾ ತಂಡದೊಂದಿಗೆ ಜಂಟಿಯಾಗಿ ಪ್ರಕರಣದ ಸಮಗ್ರ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೊ ರಿಕ್ಷಾದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಯೋತ್ಪಾದನಾ ಸಂಘಟನೆಯ ಕೈವಾಡದ ಶಂಕೆಯಿದ್ದು, 2-3 ದಿನಗಳಲ್ಲಿ ಸಂಪೂರ್ಣ ಮಾಹಿತಿ ಸಿಗಲಿದೆ ಎಂದರು.
Next Story