Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮತದಾರರ ಹೆಸರು ನಾಪತ್ತೆ ಪ್ರಕರಣ;...

ಮತದಾರರ ಹೆಸರು ನಾಪತ್ತೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಚ್ಡಿಕೆ ಆಗ್ರಹ

ಹೆಬ್ಬೆಟ್ಟಿನ ಆಯೋಗ ಆಗುವುದು ಬೇಡ: ಎಚ್.ಡಿ. ಕುಮಾರಸ್ವಾಮಿ

20 Nov 2022 12:50 PM IST
share
ಮತದಾರರ ಹೆಸರು ನಾಪತ್ತೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಚ್ಡಿಕೆ ಆಗ್ರಹ
ಹೆಬ್ಬೆಟ್ಟಿನ ಆಯೋಗ ಆಗುವುದು ಬೇಡ: ಎಚ್.ಡಿ. ಕುಮಾರಸ್ವಾಮಿ

ಮಾಲೂರು/ಕೋಲಾರ: ಮತದಾರರ ದತ್ತಾಂಶ ಕಳುವಿನ ಆರೋಪ ದೊಡ್ಡ  ಹಗರಣವಾಗುವ ರೀತಿ ಕಾಣುತ್ತಿದ್ದು, ಸಂಬಂಧಪಟ್ಟವರ ಮೇಲೆ ಚುನಾವಣಾ ಆಯೋಗ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರು  ಆಗ್ರಹಿಸಿದ್ದಾರೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ಕ್ಷೇತ್ರದ ಮಾಗೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದು, ಈ ಬಗ್ಗೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು.ಇಲ್ಲದಿದ್ದರೆ ಹೆಸರಿಗೆ ಹೆಬ್ಬೆಟ್ಟಿನ ಆಯೋಗ ಎಂಬಂತೆ ಆಗಬಾರದು ಎಂದರು.

ಬಿಜೆಪಿಗೆ ಮತ ಹಾಕಲ್ಲ ಎಂದ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದಾರೆ ಎಂಬ ಆರೋಪ ನಿಜಕ್ಕೂ ಗಂಭೀರವಾದ ವಿಚಾರ. ಸರ್ಕಾರವೇ ನೇರವಾಗಿ ಭಾಗಿಯಾಗಿರುವಾಗ ಸತ್ಯಾಂಶ ಹೇಗೆ ಹೊರಬರುತ್ತದೆ ಎಂದು ಅವರು ಹೇಳಿದ್ದಾರೆ.

ಪಂಚರತ್ನ ಯಾತ್ರೆಯಲ್ಲಿರುವ ಕಾರಣ ಮತದಾರರ ಹೆಸರನ್ನು ಪಟ್ಟಿಯಲ್ಲಿ ಕೈ ಬಿಟ್ಟ ವಿಚಾರದ ಬಗ್ಗೆ  ಅಷ್ಟೊಂದು ಗಮನ ಹರಿಸಿರಲಿಲ್ಲ. ವಿರೋಧ ಪಕ್ಷಗಳಿಗೆ ಮತ ಬರುವ ದತ್ತಾಂಶ ಸಂಗ್ರಹ ಮಾಡಿದ್ದರೆ ಎಂಬ ಆರೋಪವಿದೆ. ಈ ಹಿಂದಿನ ಚುನಾವಣೆಯಲ್ಲಿ ಯಾರಿಗೆ ಮತ ಹಾಕಲಾಗಿತ್ತು. ಈಗ ಯಾರಿಗೆ ಮತ ಹಾಕುತ್ತೀರಿ ಎಂದೆಲ್ಲಾ ಕೇಳಿದ್ದಾರೆ ಎಂಬ ಆರೋಪವಿದೆ ಎಂದು ಹೇಳಿದರು.

ತೆಲಂಗಾಣ ಮುಖ್ಯಮಂತ್ರಿ ಶಾಸಕರ ಖರೀದಿ ಯತ್ನಕ್ಕೆ  ಸಂಬಂಧಿಸಿದಂತೆ ಹಲವಾರು ದಾಖಲೆ ಸಮೇತ ಬಹಿರಂಗ ಮಾಡಿದ್ದರು. ಕರ್ನಾಟಕದ ಮೈತ್ರಿ ಸರ್ಕಾರವನ್ನೂ ಈಗ ಆರೋಪಿತರೆ ತೆಗೆದಿದ್ದು. ಯಾವುದೇ ಜನ ಬೆಂಬಲವಿಲ್ಲ, ಕುತಂತ್ರ ರಾಜಕಾರಣ ಮಾಡುತ್ತಾರೆ. ರಾಜಿಗೆ ಮುಲಾಜಿಗೆ ಒಳಪಡದೆ ತೆಲಂಗಾಣ ಮುಖ್ಯಮಂತ್ರಿ ಕ್ರಮಕ್ಕೆ ಮುಂದಾಗಿದ್ದರು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಇಂಥವರಿಗೆ ತಕ್ಕಪಾಠ ಆಗಬೇಕು ಎಂದರು.

ಕೊರೆವ ಚಳಿಯಲ್ಲಿ ಪಂಚರತ್ನ ರಥಯಾತ್ರೆ: ಕೊರೆವ ಚಳಿಯಲ್ಲೂ ಮಕ್ಕಳು ಮಹಿಳೆಯರು ಯುವಕರು ಪಂಚರತ್ನ ರಥಯಾತ್ರೆಯಲ್ಲಿ ಭಾಗಿಯಾಗುತ್ತಿದ್ದಾರೆ. ಇದು ನನ್ನ ಮುಂದಿನ ನೂರು ದಿನಗಳ ಹೋರಾಟಕ್ಕೆ ಉತ್ಸಾಹ ತುಂಬಿದೆ. ರಾತ್ರಿ ಸಂವಾದದಲ್ಲಿ ಮುನಿವೆಂಕಟಪ್ಪ ಎಂಬ ಸ್ಥಳೀಯರೊಬ್ಬರು ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಪದವೀಧರ ಯುವಕರಿಗೆ ಉದ್ಯೋಗವಿಲ್ಲ. ಸರ್ಕಾರದಲ್ಲೂ ಎರಡರಿಂದ ಮೂರು ಲಕ್ಷ ಹುದ್ದೆಗಳು ಖಾಲಿ ಇವೆ ಎಂಬ ಅವರ ಪ್ರಶ್ನೆಗಳಿಗೆ ಎಎಲ್ಲಾ ಉತ್ತರ ಪಂಚರತ್ನದಲ್ಲಿ ಅಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ತಿಳಿಸಿದರು.

ಜನವರಿ ಮೂರರಿಂದ ಮಾರ್ಚ್ 15 ರವರೆಗೆ ಎರಡನೇ ಹಂತದ ಯಾತ್ರೆ ನಡೆಯಲಿದೆ. ಈಗ ಜನರಿಗೆ ಪಂಚರತ್ನ ಯೋಜನೆಗಳ ಬಗ್ಗೆ ಅರಿವಾಗುತ್ತಿದೆ ಎಂದು ತಿಳಿಸಿದ್ದಾರೆ.

ಪಂಚರತ್ನ ಯೋಜನೆಗಳು ಜಾರಿಗೆ ಬಂದರೆ ಸ್ವರ್ಗದ ವಾತವರಣ ನಿರ್ಮಾಣವಾಗುತ್ತೆ ಎಂದು ಕೆಲ ಮಾದ್ಯಮಗಳಲ್ಲಿ ಅಂಕಣಗಳು ಬಂದಿವೆ. ಇದು ನನಗೆ ಶಾರೀರಿಕವಾಗಿ, ಮಾನಸಿಕವಾಗಿ ಮತ್ತಷ್ಟು ಸದೃಢಗೊಳಿಸಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಮಾಜಿ ಸದಸ್ಯರಾದ ರಮೇಶ ಗೌಡ, ಚೌಡರೆಡ್ಡಿ ತೂಪಲ್ಲಿ, ಬಂಗಾರಪೇಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು, ಮಾಲೂರು ಅಭ್ಯರ್ಥಿ ರಾಮೇಗೌಡ ಮುಂತಾದವರು ಉಪಸ್ಥಿತರಿದ್ದರು.

share
Next Story
X