ಜಿಲ್ಲೆಯ ಶಾಂತಿ, ಸುವ್ಯವಸ್ಥೆ ಕದಡುವ ಪ್ರಯತ್ನ: ನಳಿನ್ ಕುಮಾರ್ ಕಟೀಲು

ಮಂಗಳೂರು: ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ನಡೆದ ಸ್ಫೋಟದ ಹಿಂದೆ ಮತೀಯ ಶಕ್ತಿಗಳು ಜಿಲ್ಲೆಯ ಶಾಂತಿ, ಸುವ್ಯವಸ್ಥೆ ಕದಡುವ ಪ್ರಯತ್ನ ಮಾಡಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮೂಲಭೂತವಾದಿಗಳ ಇಂತಹ ಭಯೋತ್ಪಾದಕ ಕೃತ್ಯಕ್ಕೆ ಬೆಂಬಲ ಅಥವಾ ನೆರವು ನೀಡುವವರಿಗೂ ಹೆಡೆಮುರಿ ಕಟ್ಟಲು ನಮ್ಮ ಪೊಲೀಸ್ ವ್ಯವಸ್ಥೆ ಸನ್ನದ್ಧವಾಗಿದೆ ಎಂದರು.
Next Story