Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ವಾರ್ಷಿಕ...

ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ

20 Nov 2022 8:06 PM IST
share
ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ

ಉಡುಪಿ: ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಧರ್ಮಪ್ರಾಂತ್ಯದ ಉಗಮದ ದಶಮಾನೋತ್ಸವ ಸಮಾರಂಭ ರವಿವಾರ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥಡ್ರಲ್‌ನಲ್ಲಿ ಭಕ್ತಿ ಭಾವದೊಂದೊಂದಿಗೆ ಜರಗಿತು.

ಪರಮ ಪ್ರಸಾದ ಮೆರವಣಿಗೆಯ ಬಲಿಪೂಜೆಯ ನೇತೃತ್ವ ವಹಿಸಿದ್ದ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಧಾರ್ಮಿಕ ಪ್ರವಚನ ನೀಡಿ, ಇಂದು ನಾವು ಕ್ರಿಸ್ತ ರಾಜರ ಮಹೋತ್ಸವ ವನ್ನು ಆಚರಿಸುತ್ತಿದ್ದು ಯೇಸುಕ್ರಿಸ್ತರು ಪ್ರತಿಯೊಬ್ಬರು ಶಾಂತಿ ಮತ್ತು ಕ್ಷಮೆಯ ದೂತರಾಗಬೇಕು ಎನ್ನುವ ಸಂದೇಶವನ್ನು ತನ್ನ ಜೀವನದಲ್ಲಿ ಬದುಕಿ ತೋರಿಸಿದ್ದು ಅದರಂತೆ ನಾವೂ ಕೂಡ ಅವರ ಮಾರ್ಗದಲ್ಲಿ ಸಾಗಬೇಕು ಎಂದರು.

ಬಲಿಪೂಜೆಯ ಬಳಿಕ ದಿವ್ಯ ಜ್ಯೋತಿ ನಿರ್ದೇಶಕ ವಂ.ಸಿರಿಲ್ ಲೋಬೊ ಪರಮಪ್ರಸಾದದ ಆರಾಧನೆಯನ್ನು ನೆರವೇರಿಸಿದರು. ತದನಂತರ ಪರಮ ಪ್ರಸಾದವನ್ನು ವಿಶೇಷವಾಗಿ ಅಲಂಕರಿಸಲ್ಪಟ್ಟ ತೆರೆದ ವಾಹನದಲ್ಲಿ ಮಿಲಾಗ್ರಿಸ್ ಕ್ಯಾಥೆಡ್ರಲ್‌ನಿಂದ ಸಂತೆಕಟ್ಟೆ ಮೌಂಟ್ ರೋಸರಿ ಚರ್ಚಿನವರೆಗೆ ಸಾರ್ವಜನಿಕ ವಾಗಿ ಕೊಂಡೊಯ್ದು ಗೌರವ ಸಲ್ಲಿಸಲಾಯಿತು.

ಮೌಂಟ್ ರೋಸರಿ ಚರ್ಚಿನಲ್ಲಿ ನಡೆದ ಧಾರ್ಮಿಕ ಪ್ರವಚನ ಕಾರ್ಯಕ್ರಮ ದಲ್ಲಿ ಉಡುಪಿ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ವಂ. ಜೋನ್ಸನ್ ಪವಿತ್ರ ಬೈಬಲ್‌ನ ವಾಚನ ನೆರವೇರಿಸಿ ಪರಮ ಪ್ರಸಾದ ಕುರಿತು ಸಂದೇಶ ನೀಡಿದರು. ಬಳಿಕ ಧರ್ಮಾಧ್ಯಕ್ಷರು ಪರಮ ಪ್ರಸಾದ ಸಾರ್ವಜನಿಕ ಆಶೀರ್ವಚನವನ್ನು ನೀಡಿದರು.

ಉಡುಪಿ ಧರ್ಮಪ್ರಾಂತ್ಯದ ಕುಲಪತಿ ವಂ.ರೋಶನ್ ಡಿಸೋಜ, ಶಿರ್ವ ವಲಯ ಪ್ರಧಾನ ಧರ್ಮಗುರು ವಂ.ಲೆಸ್ಲಿ ಡಿಸೋಜ, ಕಲ್ಯಾಣಪುರ ಮಿಲಾಗ್ರಿಸ್ ಕಾಥೆಡ್ರಲ್‌ನ ರೆಕ್ಟರ್ ವ.ವಲೇರಿಯನ್ ಮೆಂಡೊನ್ಸಾ, ಕಾರ್ಕಳ ವಲಯ ಪ್ರಧಾನ ಧರ್ಮಗುರು ವಂ.ಪಾವ್ಲ್ ರೇಗೊ, ಮೌಂಟ್ ರೋಸರಿ ಚರ್ಚಿನ ಧರ್ಮಗುರು ವಂ.ರೊಕ್ ಡೆಸಾ, ಉದ್ಯಾವರ ಚರ್ಚಿನ ಧರ್ಮಗುರು ವಂ.ಸ್ಟ್ಯಾನಿ ಬಿ. ಲೋಬೊ, ಧರ್ಮಪ್ರಾಂತ್ಯದ ಮಾಜಿ ಸಾರ್ವಜನಿಕ ಸಂಪರ್ಕಾಧಿಕಾರಿ ವಂ. ಡೆನಿಸ್ ಡೆಸಾ ಉಪಸ್ಥಿತರಿದ್ದರು. ಕುಟುಂಬ ಆಯೋಗದ ನಿರ್ದೇಶಕ ಲೆಸ್ಲಿ ಆರೋಜಾ ಕಾರ್ಯಕ್ರಮ ನಿರೂಪಿಸಿದರು.

ಶಿಸ್ತುಬದ್ದ ಮೆರವಣಿಗೆ: ಪರಮ ಪ್ರಸಾದ ಮೆರವಣಿಗೆಯಲ್ಲಿ ಧರ್ಮ ಪ್ರಾಂತ್ಯದ ಧರ್ಮಗುರುಗಳು, ಧರ್ಮಭಗಿನಿ ಯರು ಮತ್ತು 4000 ಕ್ಕೂ ಮಿಕ್ಕಿ ಭಕ್ತರು ಭಾಗವಹಿಸಿದ್ದು, ಶಿಸ್ತುಬದ್ದವಾಗಿ ನಡೆಯಿತು.

ದಾರಿಯುದ್ದಕ್ಕೂ ಭಕ್ತಾದಿಗಳಿಗೆ ನೀಡಿದ ನೀರಿನ ಬಾಟಲಿಗಳು ಎಲ್ಲಿಯೂ ಎಸೆಯದಂತೆ ಸ್ವಯಂ ಸೇವಕರೇ ಸ್ವತಃ ಒಟ್ಟು ಮಾಡಿ ಸ್ವಚ್ಚತೆ ಕಾಪಾಡಿದರು ಅಲ್ಲದೆ ಭಾರತೀಯ ಕಥೊಲಿಕ ಯುವ ಸಂಚಾಲನದ ಸದಸ್ಯರು ರಸ್ತೆಯಲ್ಲಿ ಮೆರವಣಿಗೆ ಶಿಸ್ತುಬದ್ಧವಾಗಿ ಸಾಗಲು ಸಹಕರಿಸಿದರು.

ಧರ್ಮಪ್ರಾಂತ್ಯದ ದಶಮಾನೋತ್ಸವ ಸಂಭ್ರಮ

ಉಡುಪಿ ಧರ್ಮಪ್ರಾಂತ್ಯ ಆರಂಭವಾಗಿ ಹತ್ತು ವರ್ಷಗಳು ಸಂದಿದ್ದು ಇದರ ನೆನಪಿಗಾಗಿ ಅದ್ದೂರಿ ಸಂಭ್ರಮವನ್ನು ಮಾಡದೆ ಸಮುದಾಯದ ಅಗತ್ಯಕ್ಕಾಗಿ ಆರೋಗ್ಯ ನಿಧಿಗೆ ಧರ್ಮಾಧ್ಯಕ್ಷರು ಚಾಲನೆ ನೀಡಿದರು.

ಅಲ್ಲದೆ ಧರ್ಮಪ್ರಾಂತ್ಯದ ಚರಿತ್ರೆ, ಧರ್ಮಪ್ರಾಂತ್ಯದ ವ್ಯಾಪ್ತಿಗೊಳಪಟ್ಟ ಚರ್ಚುಗಳ ಚರಿತ್ರೆಗಳನ್ನೊಂಡ ಪುಸ್ತಕ ಗಳು ಮತ್ತು ಧರ್ಮಪ್ರಾಂತ್ಯದ ಹತ್ತು ವರ್ಷಗಳ ಸಾಧನೆಯನ್ನು ಬಿಂಬಿಸುವ ಸಾಕ್ಷ್ಯಚಿತ್ರ ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಧರ್ಮಪ್ರಾಂತ್ಯಕ್ಕೆ ತನ್ನ ನಿಸ್ವಾರ್ಥ ಹಾಗೂ ಪ್ರೀತಿ ಪೂರ್ವಕ ಸೇವೆ ನೀಡಿದ ಧರ್ಮಾಧ್ಯಕ್ಷ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಅವರನ್ನು ಧರ್ಮಾಪ್ರಾಂತ್ಯದ ಪರವಾಗಿ ಸನ್ಮಾನಿಸಲಾಯಿತು.

share
Next Story
X