ಪಾಕಿಸ್ತಾನ ಪರ ಘೋಷಣೆ ಆರೋಪ: ವಿಚಾರಣೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಸೂಚನೆ
ಬೆಂಗಳೂರು: ಇಲ್ಲಿನ ಮಾರತ್ತಹಳ್ಳಿಯ ನ್ಯೂ ಹೊರೈಜಾನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪಾಕಿಸ್ತಾನದ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ನ.21 ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಾರತ್ತಹಳ್ಳಿ ಪೊಲೀಸರು ವಿಚಾರಣೆ ಮುಂದುವರಿಸಲು ನಿರ್ಧರಿಸಿದ್ದು, ಅದರಂತೆ ವಿದ್ಯಾರ್ಥಿಗಳಾದ ಆರ್ಯನ್, ದಿನಕರ್, ರಿಯಾ ರವಿಚಂದ್ರ ಕಾಮೇಡ್ಕರ್ ಅವರನ್ನು ಮತ್ತೊಮ್ಮೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ.
ಇನ್ನೂ, ಈ ವಿದ್ಯಾರ್ಥಿಗಳ ಮೊಬೈಲ್ ವಶಕ್ಕೆ ಪಡೆದಿರುವ ಪೊಲೀಸರು ವಿಧಿವಿಜ್ಞಾನ ಪ್ರಯೋಗಶಾಲೆಗೆ ತಪಾಸಣೆಗೆ ಕಳುಹಿಸಿದ್ದಾರೆ. ಅದೇ ರೀತಿ, ಮೂವರು ವಿದ್ಯಾರ್ಥಿಗಳು ವಾಸಿಸುತ್ತಿರುವ ಮನೆ ಹಾಗೂ ಕೊಠಡಿಗಳನ್ನೂ ಪೊಲೀಸರು ಪರಿಶೀಲಿಸಿದ್ದಾರೆ.
Next Story





