ಧರ್ಮಸ್ಥಳ: 26 ಕೋ.ರೂ.ನ ಕುಡಿಯುವ ನೀರು ಯೋಜನೆಗೆ ಸಚಿವ ಬೈರತಿ ಬಸವರಾಜು ಶಿಲಾನ್ಯಾಸ

ಬೆಳ್ತಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಾಗೂ ಧರ್ಮಸ್ಥಳ ಪಟ್ಟಣಕ್ಕೆ ಕುಡಿಯುವ ನೀರನ್ನು ಒದಗಿಸುವ 26 ಕೋಟಿ ರೂ. ವೆಚ್ಚದ ನೂತನ ಯೋಜನಗೆ ರಾಜ್ಯ ಸರಕಾರದ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಸೋಮವಾರ ಶಿಲಾನ್ಯಾಸ ನೆರವೇರಿಸಿದರು.
ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ನೂತನ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳ್ಳಲಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಧರ್ಮಸ್ಥಳಕ್ಕೆ ಬರುವ ಯಾತ್ರಿಕರಿಗೆ ನೀರಿನ ಸಮಸ್ಯೆ ಆಗದಂತೆ ಈ ಮೂಲಕ ವ್ಯವಸ್ಥೆ ಮಾಡಲಾಗುವುದು ಎಂದರು.
ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯಕ್ಕೆ ಡ್ರೈನೇಜ್ ವ್ಯವಸ್ಥೆ ಹಾಗೂ ನೀರು ಶುದ್ದೀಕರಣ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯ ಸಭಾ ಸದಸ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಉಪಸ್ಥಿತರಿದ್ದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ, ಸುರಪುರ ಶಾಸಕ ನರಸಿಂಹ ನಾಯಕ್ ರಾಜೂಗೌಡ, ವಿಧಾನ ಸಭಾಸದಸ್ಯ ಪ್ರತಾಪ ಸಿಂಹ ನಾಯಕ್, ಹರಿಕೃಷ್ಣ ಬಂಟ್ವಾಳ, ಜಿಪಂ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ, ಡಿ ಹರ್ಷೇಂದ್ರ ಕುಮಾರ್, ಗ್ರಾಪಂ ಅಧ್ಯಕ್ಷೆ ಜಯಾ ಮೋನಪ್ಪ ಗೌಡ, ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಗ್ರಾಪಂ ಉಪಾಧ್ಯಜ್ಷ ಶ್ರೀನಿವಾಸ ರಾವ್ ಕಾರ್ಯಕ್ರಮ ನಿರೂಪಿಸಿದರು.