Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ʼಗುಂಡಿಟ್ಟು ಕೊಂದಿದ್ದ ತಂದೆʼ:...

ʼಗುಂಡಿಟ್ಟು ಕೊಂದಿದ್ದ ತಂದೆʼ: ಉ.ಪ್ರದೇಶದಲ್ಲಿ ಸೂಟ್‌ಕೇಸ್‌ ನಲ್ಲಿ ಪತ್ತೆಯಾಗಿದ್ದ ಶವ ಪ್ರಕರಣಕ್ಕೆ ತಿರುವು

21 Nov 2022 9:14 PM IST
share
ʼಗುಂಡಿಟ್ಟು ಕೊಂದಿದ್ದ ತಂದೆʼ: ಉ.ಪ್ರದೇಶದಲ್ಲಿ ಸೂಟ್‌ಕೇಸ್‌ ನಲ್ಲಿ ಪತ್ತೆಯಾಗಿದ್ದ ಶವ ಪ್ರಕರಣಕ್ಕೆ ತಿರುವು

ಹೊಸದಿಲ್ಲಿ,ನ.21: ಕಳೆದ ವಾರ ಉ.ಪ್ರದೇಶದ ಮಥುರಾದ ಯಮುನಾ ಎಕ್ಸ್ಪ್ರೆಸ್ವೇ(Yamuna Expressway) ಬಳಿ ಸೂಟ್ಕೇಸ್ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದ ದಿಲ್ಲಿಯ ಆಯುಷಿ ಚೌಧರಿ(Ayushi Chaudhary) (22)ಯನ್ನು ಆಕೆಯ ತಂದೆಯೇ ಗುಂಡಿಟ್ಟು ಕೊಂದಿದ್ದ ಎಂದು ಪೊಲೀಸ್ ಮೂಲಗಳು ಸೋಮವಾರ ತಿಳಿಸಿವೆ.

ಕೊಲೆ ಆರೋಪದಲ್ಲಿ ಆಯುಷಿಯ ಹೆತ್ತವರನ್ನು ಬಂಧಿಸಲಾಗಿದೆ. ಮಗಳು ಬೇರೆ ಜಾತಿಯ ವ್ಯಕ್ತಿಯನ್ನು ಮದುವೆಯಾಗಿದ್ದಳು ಮತ್ತು ಆಗಾಗ್ಗೆ ತಡರಾತ್ರಿಯವರೆಗೆ ಮನೆಯಿಂದ ಹೊರಗಿರುತ್ತಿದ್ದಳು ಎಂಬ ಕಾರಣಕ್ಕೆ ಕ್ರುದ್ಧನಾಗಿದ್ದ ತಂದೆ ನಿತೇಶ ಯಾದವ ಆಕೆಯನ್ನು ಗುಂಡಿಟ್ಟು ಕೊಂದಿದ್ದ. ಆಯುಷಿಯ ತಾಯಿ ಮತ್ತು ಸೋದರನಿಗೆ ಈ ವಿಷಯ ತಿಳಿದಿತ್ತು ಎಂದು ಮಥುರಾದ ಪ್ರಭಾರ ಎಸ್ಎಸ್ಪಿ ಮಾರ್ತಾಂಡ ಪ್ರಕಾಶ ಸಿಂಗ್ (Marthanda Prakash Singh)ಸುದ್ದಿಗಾರರಿಗೆ ತಿಳಿಸಿದರು.

ಶವದ ಗುರುತು ಪತ್ತೆ ಹಚ್ಚಲು ಪೊಲೀಸರು ತನಿಖೆಯನ್ನು ಆರಂಭಿಸಿದ್ದು, ರವಿವಾರ ಬೆಳಿಗ್ಗೆ ಅಪರಿಚಿತ ದೂರವಾಣಿ ಕರೆಯ ಮೂಲಕ ಆಕೆಯ ಗುರುತಿನ ಬಗ್ಗೆ ದೃಢವಾದ ಮಾಹಿತಿ ಲಭಿಸಿತ್ತು. ಆಯುಷಿಯ ತಾಯಿ ಮತ್ತು ಸಹೋದರ ಫೋಟೊಗಳಿಂದ ಆಕೆಯನ್ನು ಗುರುತಿಸಿದ್ದಾರೆ ಎಂದರು.

ಶವವನ್ನು ಗುರುತಿಸಲು ತೆರಳಿದ್ದ ದಕ್ಷಿಣ ದಿಲ್ಲಿಯ ನಿವಾಸಿ ನಿತೇಶ ಯಾದವ(Nitesh Yadav)ನನ್ನು ಪ್ರಶ್ನಿಸಿದ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಕೊಲೆಗೆ ಬಳಕೆಯಾಗಿದ್ದ ಪಿಸ್ತೂಲಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಪರವಾನಿಗೆಯಿದ್ದ ಪಿಸ್ತೂಲಿನಿಂದ ಆಯುಷಿಯ ಕೊಲೆ ಮಾಡಿದ್ದ ನಿತೇಶ ಬಳಿಕ ಶವವನ್ನು ಸೂಟ್ಕೇಸ್ನಲ್ಲಿ ತುಂಬಿ ಮಥುರಾದಲ್ಲಿ ಎಸೆದಿದ್ದ.

ಉ.ಪ್ರದೇಶದ ಗೋರಖಪುರ ಜಿಲ್ಲೆಯ ಬಲುನಿ ಮೂಲದ ಕುಟುಂಬವು ನಿತೇಶ ಯಾದವಗೆ ದಿಲ್ಲಿಯಲ್ಲಿ ಕೆಲಸ ಲಭಿಸಿದ ಬಳಿಕ ಅಲ್ಲಿಗೆ ಸ್ಥಳಾಂತರಗೊಂಡಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

share
Next Story
X